ಮೋದಿ 3.0 ಕ್ಯಾಬಿನೆಟ್‌ನಲ್ಲಿ ಯಾರಿಗೆ ಯಾವ ಸಚಿವಾಲಯ? ಇಂದು ಮಹತ್ವದ ಸಭೆ

ನಾಳೆ ಸಂಜೆ ಪ್ರಧಾನಿ ಮೋದಿ ಅವರು ತಮ್ಮ ನೂತನ ಸಚಿವ ಸಂಪುಟದ ಸದಸ್ಯರಂತೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಜವಾಹರಲಾಲ್ ನೆಹರು ಅವರ ನಂತರ ಅವರು ಮೂರು ಅವಧಿಯ ಮೊದಲ ಪ್ರಧಾನಿಯಾಗಲಿದ್ದಾರೆ.

ಹೊಸದಿಲ್ಲಿ, ಜೂನ್‌ 08: ಪ್ರಧಾನಿ ನರೇಂದ್ರ ಮೋದಿ ಅವರು ಸತತ ಮೂರನೇ ಅವಧಿಗೆ ಪ್ರಮಾಣ ವಚನ ಸ್ವೀಕರಿಸುವ ಮುನ್ನ, ಕ್ಯಾಬಿನೆಟ್ ಸಚಿವರ ಪಟ್ಟಿಯನ್ನು ಅಂತಿಮಗೊಳಿಸಲು ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ (ಎನ್‌ಡಿಎ) ಹೊಸದಾಗಿ ಆಯ್ಕೆಯಾದ ಸಂಸದರು ಇಂದು(ಶನಿವಾರ) ಸಭೆ ನಡೆಸಲಿದ್ದಾರೆ.

Who Gets Which Ministry In Modi 3 0 Cabinet Key Meeting Today

ನಾಳೆ(ಜೂನ್‌ 08) ಸಂಜೆ ನಡೆಯಲಿರುವ ಅದ್ಧೂರಿ ಸಮಾರಂಭದಲ್ಲಿ ಪ್ರಧಾನಿ ಮೋದಿ ಅವರು ತಮ್ಮ ನೂತನ ಸಚಿವ ಸಂಪುಟದ ಸದಸ್ಯರೊಂದಿಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಜವಾಹರಲಾಲ್ ನೆಹರು ಅವರ ನಂತರ ನರೇಂದ್ರ ಮೋದಿ ಅವರು ಮೂರನೇ ಅವಧಿಗೆ ಪ್ರಧಾನಿ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 240 ಸ್ಥಾನಗಳನ್ನು ಗೆದ್ದುಕೊಂಡಿತು, ಆದರೆ ಬಹುಮತಕ್ಕೆ 32 ಸ್ಥಾನಗಳನ್ನು ಕಳೆದುಕೊಂಡಿತು. 16 ಸ್ಥಾನಗಳನ್ನು ಗೆದ್ದಿರುವ ಎನ್ ಚಂದ್ರಬಾಬು ನಾಯ್ಡು, ನಿತೀಶ್ ಕುಮಾರ್ ಅವರ ಜೆಡಿಯು (12), ಏಕನಾಥ್ ಶಿಂಧೆ ಅವರ ಶಿವಸೇನೆ (7) ಮತ್ತು ಚಿರಾಗ್ ಪಾಸ್ವಾನ್ ಅವರ ಲೋಕ ಜನಶಕ್ತಿ ಪಕ್ಷ-ರಾಮ್ ವಿಲಾಸ್ (7) ಅವರ ಮೈತ್ರಿ ಕೂಟದಿಂದ ಬಿಜೆಪಿ ಬಹುಮತವನ್ನು ತಲುಪಲು ಈ ನಾಲ್ಕು ಮಿತ್ರ ಪಕ್ಷಗಳು ನಿರ್ಣಾಯಕವಾಗಿವೆ.

ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಮತ್ತು ಜೆಡಿಯುನ ನಿತೀಶ್ ಕುಮಾರ್ ಅವರು ಈ ನಿರ್ಣಾಯಕ ಘಟ್ಟದಲ್ಲಿ ಕಿಂಗ್‌ಮೇಕರ್‌ಗಳಾಗಿ ಹೊರಹೊಮ್ಮಿದ್ದಾರೆ. ನಿನ್ನೆ(ಶುಕ್ರವಾರ) ಮೋದಿ ಅವರನ್ನು ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿಯಾಗಿ ಆಯ್ಕೆ ಮಾಡುವ ಪ್ರಸ್ತಾಪವನ್ನು ಸಾರ್ವಜನಿಕವಾಗಿ ಒಪ್ಪಿಕೊಂಡಿದ್ದಾರೆ. ಪ್ರತಿಪಕ್ಷದ ನಾಯಕರು ಹಕ್ಕು ಚಲಾಯಿಸುವ ಪ್ರಯತ್ನದಲ್ಲಿ ಅವರನ್ನು ಸಂಪರ್ಕಿಸಬಹುದು ಎಂಬ ಊಹಾಪೋಹಗಳ ನಡುವೆ ಅವರು ಪ್ರಧಾನಿ ಮೋದಿಗೆ ಲಿಖಿತ ಬೆಂಬಲವನ್ನು ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಬಿಜೆಪಿ ಮತ್ತು ಅದರ ಎರಡು ಪ್ರಮುಖ ಮಿತ್ರಪಕ್ಷಗಳಾದ ಟಿಡಿಪಿ ಮತ್ತು ಜೆಡಿ (ಯು) ನಡುವಿನ ಮಾತುಕತೆಗಳ ಮೇಲೆ ಈಗ ಗಮನಸೆಳೆದಿದೆ,ಪ್ರಮುಖ ಸಚಿವಾಲಯದ ಮೇಲೆ ಕೆಲವು ಮಿತ್ರ ಪಕ್ಷಗಳು ಬೇಡಿಕೆ ಇಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಶಿವಸೇನೆ ಬಣ ಮತ್ತು ಚಿರಾಗ್ ಪಾಸ್ವಾನ್ ಅವರ ಎಲ್‌ಜೆಪಿ ಕೂಡ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಹೊಸ ಸಂಪುಟದಲ್ಲಿ ಪ್ರಮುಖ ಖಾತೆಗಳ ಮೇಲೆ ಕಣ್ಣೀಟಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+