ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕನ ಸ್ಥಾನ ಈ ಇಬ್ಬರಲ್ಲಿ ಯಾರಿಗೆ?
ರಾಜ್ಯಸಭೆಯಲ್ಲಿ ತಮ್ಮ ಪಕ್ಷದ ನಾಯಕರನ್ನಾಗಿ ಸೋನಿಯಾ ಗಾಂಧಿ ಯಾರನ್ನು ನೇಮಿಸಲಿದ್ದಾರೆ ಎನ್ನುವುದು ಸಾಕಷ್ಟು ಕುತೂಹಲಕ್ಕೆ ಎಡೆಮಾಡಿ ಕೊಟ್ಟಿದೆ. ಈ ಸಂಬಂಧ ಚರ್ಚೆಗಳು ಈಗಾಗಲೇ ಆರಂಭವಾಗಿವೆ.
ರಾಜ್ಯಸಭೆಯಲ್ಲಿ ಹಾಲೀ ವಿರೋಧ ಪಕ್ಷದ ನಾಯಕರಾಗಿರುವ ಗುಲಾಂ ನಬಿ ಆಜಾದ್ ಅವರ ನಿವೃತ್ತಿ ಅವಧಿ ಮುಂದಿನ ತಿಂಗಳು ಅಂದರೆ ಫೆಬ್ರವರಿಯಲ್ಲಿ ಮುಕ್ತಾಯಗೊಳ್ಳಲಿದೆ. ಹಾಗಾಗಿ, ಸೋನಿಯಾ ಗಾಂಧಿ ಶೀಘ್ರವಾಗಿ ಈ ಹುದ್ದೆಗೆ ನಾಯಕರನ್ನು ನೇಮಿಸಬೇಕಿದೆ.
ಸದ್ಯ ಕಾಂಗ್ರೆಸ್ ಪಕ್ಷ 37 ಸದಸ್ಯರನ್ನು ಹೊಂದಿದೆ. ಇದರಲ್ಲಿ ಎ.ಕೆ.ಆಂಟನಿ, ಪಿ.ಚಿದಂಬರಂ, ಆಸ್ಕರ್ ಫೆರ್ನಾಂಡಿಸ್, ದೀಪೇಂದರ್ ಸಿಂಗ್ ಹೂಡಾ, ಜೈರಾಂ ರಮೇಶ್, ದಿಗ್ವಿಜಯ್ ಸಿಂಗ್, ಮನಮೋಹನ್ ಸಿಂಗ್ , ಕೆ.ಸಿ. ವೇಣುಗೋಪಾಲ್ ಮುಂತಾದ ಹಿರಿಯ ನಾಯಕರಿದ್ದಾರೆ.
ಆದರೆ, ಇವರಲ್ಲಿ ಯಾರನ್ನೂ ಸೋನಿಯಾ ಗಾಂಧಿ ಪರಿಗಣಿಸುವ ಸಾಧ್ಯತೆ ಕಮ್ಮಿ ಎಂದು ಹೇಳಲಾಗುತ್ತಿದೆ. ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕನ ಹುದ್ದೆಗೆ ಇಬ್ಬರು ಹಿರಿಯ ನಾಯಕರನ್ನು ಸೋನಿಯಾ ಅಂತಿಮ ಮಾಡಿದ್ದು, ಅವರಲ್ಲಿ ಒಬ್ಬರ ಹೆಸರನ್ನು ಸದ್ಯದಲ್ಲೇ ಪ್ರಕಟಿಸುವ ಸಾಧ್ಯತೆಯಿದೆ. ಆ ಎರಡು ಹೆಸರು, ಮುಂದೆ ಓದಿ..

ಈಗಿರುವ ಹಿರಿಯ ನಾಯಕರುಗಳ ಪೈಕಿ ಕೆಲವರು ಹೈಕಮಾಂಡ್ ಗೆ ಪತ್ರ ಬರೆದಿದ್ದರು
ಈಗಿರುವ ಹಿರಿಯ ನಾಯಕರುಗಳ ಪೈಕಿ ಕೆಲವರು ಹೈಕಮಾಂಡ್ ಗೆ ಪತ್ರ ಬರೆದಿದ್ದರು. ಇಷ್ಟು ದಿನವಾದರೂ ಪಕ್ಷದಲ್ಲಿ ಆಂತರಿಕವಾಗಿ ಅಷ್ಟೇನೂ ಬೆಳವಣಿಗೆಗಳು ಕಾಣುತ್ತಿಲ್ಲ ಎನ್ನುವ ಅಸಮಾಧಾನ ಇನ್ನೂ ಕೆಲವು ನಾಯಕರುಗಳಿಗಿದೆ. ಪತ್ರ ಬರೆದವರಲ್ಲಿ ಕೆಲವರು ವಿರೋಧ ಪಕ್ಷದ ನಾಯಕನ ಸ್ಥಾನದ ಆಕಾಂಕ್ಷಿಗಳಿದ್ದಾರೆ. ಹಾಗಾಗಿ, ಅತ್ಯಂತ ಜಾಗರೂಕತೆಯಿಂದ ಈ ಹುದ್ದೆಗೆ ಹೆಸರನ್ನು ಸೋನಿಯಾ ಗಾಂಧಿ ಅಂತಿಮಗೊಳಿಸಬೇಕಿದೆ.

ವಿರೋಧ ಪಕ್ಷದ ನಾಯಕರಾಗಿದ್ದ ಮಲ್ಲಿಕಾರ್ಜುನ ಖರ್ಗೆ
ಕಳೆದ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿದ್ದ ಮಲ್ಲಿಕಾರ್ಜುನ ಖರ್ಗೆ ಆ ಹುದ್ದೆಯನ್ನು ಸಮರ್ಥವಾಗಿ ನಿಭಾಯಿಸಿದ್ದರು. ಆದರೆ, ಲೋಕಸಭಾ ಚುನಾವಣೆಯಲ್ಲಿ ಸೋಲು ಕಂಡಿದ್ದರಿಂದ, ಖರ್ಗೆ ಅವರನ್ನು ರಾಜ್ಯಸಭಾ ಸದಸ್ಯರನ್ನಾಗಿ ಆಯ್ಕೆ ಮಾಡಲಾಗಿತ್ತು.

ಬಿಜೆಪಿ ಎದುರು ಬಂಡೆಯಂತೆ ನಿಂತಿದ್ದು ಮಲ್ಲಿಕಾರ್ಜುನ್ ಖರ್ಗೆ
ತಮ್ಮ ಅಪಾರ ರಾಜಕೀಯ ಅನುಭವದಲ್ಲಿ ಖರ್ಗೆ ಅವರಿಗೆ ಬಯಸಿದ ಹುದ್ದೆಗಳು ಸಿಕ್ಕಿರಲಿಲ್ಲ. ಹಲವು ಬಾರಿ ಅವರ ಹೆಸರು ಕರ್ನಾಟಕದ ಮುಖ್ಯಮಂತ್ರಿ ಹುದ್ದೆಗೆ ಕೇಳಿ ಬಂದಿತ್ತು. ಕಾಂಗ್ರೆಸ್ ಮುಕ್ತ ಭಾರತ ಎಂದು ಬೀಗುತ್ತಿದ್ದ ಬಿಜೆಪಿ ಎದುರು ಬಂಡೆಯಂತೆ ನಿಂತಿದ್ದು ಮಲ್ಲಿಕಾರ್ಜುನ್ ಖರ್ಗೆ. ಹಾಗಾಗಿ, ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ಖರ್ಗೆ ಹೆಸರು ಮಂಚೂಣಿಯಲ್ಲಿ ಕೇಳಿಬರುತ್ತಿದೆ. ಇದರ ಜೊತೆಗೆ..

ಹಿಮಾಚಲ ಪ್ರದೇಶದ ಆನಂದ್ ಶರ್ಮಾ
ಇನ್ನೊಂದು ಕಡೆ ಸದ್ಯ ರಾಜ್ಯಸಭೆಯಲ್ಲಿ ಉಪಾಧ್ಯಕ್ಷರಾಗಿರುವ, ಹಿಮಾಚಲ ಪ್ರದೇಶದ ಆನಂದ್ ಶರ್ಮಾ ಕೂಡಾ ವಿರೋಧ ಪಕ್ಷದ ನಾಯಕನ ಸ್ಥಾನದ ಆಕಾಂಕ್ಷಿಯಾಗಿದ್ದಾರೆ. ಸೋನಿಯಾ ಗಾಂಧಿಗೆ ಪತ್ರ ಬರೆದಿರುವ ನಾಯಕರುಗಳ ಪೈಕಿ ಆನಂದ್ ಶರ್ಮಾ ಕೂಡಾ ಒಬ್ಬರು. ಹಾಗಾಗಿ, ಖರ್ಗೆ ಮತ್ತು ಶರ್ಮಾ ನಡುವೆ ತುರುಸಿನ ಸ್ಪರ್ಧೆ ಏರ್ಪಡುವ ಸಾಧ್ಯತೆಯಿದೆ.
-
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
'ಕೋಟಿಗೊಬ್ಬ' ರೀರಿಲೀಸ್: ವಿಷ್ಣುದಾದಾ ಅಭಿಮಾನಿಗಳಿಂದ ಸಂಭ್ರಮ, ಪ್ರಸನ್ನ ಥಿಯೇಟರ್ನಲ್ಲಿ ನಾಳೆ 10,000 ಮಂದಿಗೆ ನಾನ್ವೆಜ್ ಊಟ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Smriti Mandhana: ಸ್ಮೃತಿ ಮಂಧಾನ-ಪಲಾಶ್ ಮುಚ್ಚಲ್ ಮತ್ತೆ ಒಂದಾಗ್ತಾರಾ? ಇಬ್ಬರ ಕುಟುಂಬಗಳ ಸೀಕ್ರೆಟ್ ಮೀಟಿಂಗ್ ವಿಡಿಯೋ ವೈರಲ್ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Government Schools: ಈ ವರ್ಷದಿಂದಲೇ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ನೀತಿ: ಎಲ್ಲ ಶಿಕ್ಷಕರಿಗೆ ಇಂಗ್ಲಿಷ್ ಟ್ರೈನಿಂಗ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಏಪ್ರಿಲ್ 11ರ ದರಪಟ್ಟಿ












Click it and Unblock the Notifications