ವಿಶ್ವಸಂಸ್ಥೆಯ ಸಭೆಯಲ್ಲಿ ಪಾಲ್ಗೊಂಡಿದ್ದ 'ಕೈಲಾಸ' ದೇಶದ ಪ್ರತಿನಿಧಿ ವಿಜಯಾನಂದ ಯಾರು?, ಹಿನ್ನೆಲೆ ತಿಳಿಯಿರಿ
ವಿವಾದಾತ್ಮಕ ದೇವಮಾನವ ನಿತ್ಯಾನಂದ ಸ್ಥಾಪಿತ ಕಲಾಸ ದೇಶ (USK)ದ ಪ್ರತಿನಿಧಿ ವಿಜಯಪ್ರಿಯಾ ನಿತ್ಯಾನಂದ ಎಂಬುವವರು ಇತ್ತೀಚೆಗೆ ವಿಶ್ವಸಂಸ್ಥೆ ನಡೆಸಿದ ಸಭೆಯಲ್ಲಿ ಪಾಲ್ಗೊಂಡಿದ್ದರು. ಈ ವಿಜಯಪ್ರಿಯಾ ಯಾರು, ಅವರ ಹಿನ್ನೆಲೆ ತಿಳಿಯಿರಿ.
ಬೆಂಗಳೂರು, ಮಾರ್ಚ್ 02: ವಿವಾದಾತ್ಮಕ ದೇವಮಾನವ ನಿತ್ಯಾನಂದ ಸ್ಥಾಪಿತ ಕಲಾಸ ದೇಶ (USK)ದ ಆತನ ಪ್ರತಿನಿಧಿಗಳು ಕಳೆದ ತಿಂಗಳು ವಿಶ್ವಸಂಸ್ಥೆ ನಡೆಸಿದ ಸಭೆ ಪಾಲ್ಗೊಳ್ಳುವ ಮೂಲಕ ಅಚ್ಚರಿ ಮೂಡಿಸಿದ್ದರು. ಸಭೆಯಲ್ಲಿ ಪಾಲ್ಗೊಂಡಿದ್ದವರು ಯಾರು, ಅವರ ವೈಯಕ್ತಿಕ ಹಿನ್ನೆಲೆ ಏನು ಎಂಬ ಮಾಹಿತಿ ಇಲ್ಲಿದೆ.
ವಿಶ್ವಸಂಸ್ಥೆಯ ಸಭೆಯಲ್ಲಿ ಕೈಲಾಸ ದೇಶದ ತಮ್ಮ ಪ್ರತಿನಿಧಿಗಳು ಪಾಲ್ಗೊಂಡಿದ್ದರ ಬಗ್ಗೆ ನಿತ್ಯಾನಂದ ಟ್ವಿಟರ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದರು. ಅದರಲ್ಲಿ ವಿಜಯಪ್ರಿಯಾ ನಿತ್ಯಾನಂದ ಎಂಬುವವರನ್ನು ಉಲ್ಲೇಖಿಸಲಾಗಿದೆ.

ಆರ್ಥಿಕ, ಸಾಮಾಜಿಕ ಮತ್ತು ಸಾಂಸ್ಕೃತಿಕ ಹಕ್ಕುಗಳ ಸಮಿತಿ (CESCR) ಫೆಬ್ರವರಿ 24 ರಂದು ಆಯೋಜಿಸಿದ್ದ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಈ ವಿಜಯಪ್ರಿಯಾ, ಹಿಂದೂ ಧರ್ಮದ ಸರ್ವೋಚ್ಚ ಮಠಾಧೀಶರಿಗೆ ರಕ್ಷಣೆ ನೀಡಬೇಕೆಂದು ಕೋರಿದರು. ನಿತ್ಯಾನಂದರನ್ನು ದೇಶದಿಂದ ನಿಷೇಧಿಸಲಾಗಿದೆ ಎಂದು ಹೇಳಿದ್ದಾರೆ.
ವಿಜಯಪ್ರಿಯಾ ನಿತ್ಯಾನಂದ ಯಾರು?
ಸೀರೆ ಉಟ್ಟು, ಪೇಟ ಧರಿಸಿದ್ದ ಹಾಗೂ ಮೈಮೇಲೆ ಹೆಚ್ಚು ಆಭರಣ ಹಾಕಿಕೊಂಡಿ ಮಹಿಳೆ ತಾನು "ಕೈಲಾಸ ಯುನೈಟೆಡ್ ಸ್ಟೇಟ್ಸ್‌ನ ಶಾಶ್ವತ ರಾಯಭಾರಿ" ಎಂದು ಪರಿಚಯಿಸಿಕೊಂಡಿದ್ದರು. ಅವರೇ ಈ ವಿಜಯಪ್ರಿಯಾ ನಿತ್ಯಾನಂದ.

ಈ ವಿಜಯಪ್ರಿಯಾಳ ಫೇಸ್‌ಬುಕ್ ಪೇಜ್ ಪ್ರಕಾರ, ಅವರು ವಾಷಿಂಗ್ಟನ್ ಡಿಸಿಯಲ್ಲಿ ವಾಸಿಸುತ್ತಿದ್ದಾರೆ. ವಿಜಯಪ್ರಿಯಾ ತನ್ನ ಲಿಂಕ್ಡ್‌ಇನ್ ಪ್ರೊಫೈಲ್‌ನ ಪ್ರಕಾರ ಮ್ಯಾನಿಟೋಬಾ ವಿಶ್ವವಿದ್ಯಾಲಯದಿಂದ ಮೈಕ್ರೋಬಯಾಲಜಿಯಲ್ಲಿ ಬಿಎಸ್‌ಸಿ ಆನರ್ಸ್ ಮಾಡಿದ್ದಾರೆ. ಜೂನ್ 2014 ರಲ್ಲಿ ವಿಶ್ವವಿದ್ಯಾಲಯದ ಡೀನ್ ಗೌರವ ಪಟ್ಟಿಯಲ್ಲಿ ಅವರ ಹೆಸರು ಇದೆ. ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಅಪ್‌ಲೋಡ್ ಮಾಡಿದ್ದ ವಿಜಯಪ್ರಿಯಾರ ಫೋಟೊಗಳನ್ನು ನೋಡಿದರೆ ಅವರ ಬಲಗೈ ಮೇಲೆ ನಿತ್ಯಾನಂದನ ದೊಡ್ಡ ಹಚ್ಚೆ ಇರುವುದು ಕಾಣಿಸುತ್ತದೆ.
ನಾಲ್ಕು ಭಾಷೆ ಬಲ್ಲಳು ವಿಜಯಪ್ರಿಯಾ
ವಿಜಯಪ್ರಿಯಾಗೆ ಇಂಗ್ಲಿಷ್, ಫ್ರೆಂಚ್, ಹಿಂದಿ ಮತ್ತು ಕ್ರಿಯೋಲ್ ಮತ್ತು ಫ್ರೆಂಚ್ ಮೂಲದ ಪಿಡ್ಜಿನ್ ಭಾಷೆಗಳನ್ನು ಬಲ್ಲವರಾಗಿದ್ದಾರೆ ಎಂಬುದು ಲಿಂಕ್ಡ್‌ಇನ್ ಪ್ರೊಫೈಲ್ ನಲ್ಲಿದೆ. 'ಕೈಲಾಸ ದೇಶ' ವೆಬ್‌ಸೈಟ್ ಕೂಡ ಹೊಂದಿದೆ. ವಿಜಯಪ್ರಿಯಾ ದೇಶದ ಪರ ಸಂಘಟಕರಾಗಿಯೂ ಕೆಲಸ ಮಾಡುತ್ತಿದ್ದಾರೆ ಎನ್ನಲಾಗಿದೆ.
ಕೈಲಾಸ ದೇಶದಂತಹ ಕಾಲ್ಪನಿಕ ದೇಶದ ಪ್ರತಿನಿಧಿಗಳು ನೀಡಿದ ಹೇಳಿಕೆಗಳನ್ನು ಪರಿಗಣಿಸದಿರುವುದಾಗಿ ವಿಶ್ವಸಂಸ್ಥೆಯ ಅಧಿಕಾರಿಯೊಬ್ಬರು ಬಿಬಿಸಿಗೆ ತಿಳಿಸಿದ್ದಾರೆ. ಪ್ರತಿನಿಧಿಗಳು ಸಲ್ಲಿಸಿದ ಹೇಳಿಕೆ/ಸಲ್ಲಿಕೆಗಳು ಅಪ್ರಸ್ತುತ ಎಂದಿದ್ದಾರೆ. ಆದರೆ ವಿಶ್ವಸಂಸ್ಥೆಯ ಸಭೆಯಲ್ಲಿ 'ಕೈಲಾಸ' ಪ್ರತಿನಿಧಿಗಳ ಉಪಸ್ಥಿತಿ ಭಾರತವನ್ನು ಭಾರತವನ್ನು ಬೆರಗುಗೊಳಿಸಿದ್ದಂತು ಸತ್ಯ.
'ಕೈಲಾಸ' ಎಲ್ಲಿದೆ?
ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಸೇರಿದಂತೆ ಹಲವು ಪ್ರಕರಣಗಳೊಂದಿಗೆ ನಿತ್ಯಾನಂದ ವರ್ಷಗಳ ಹಿಂದೆ ಭಾರತ ತೊರೆದಿದ್ದರು. ಅವರು ಎಲ್ಲಾ ಆರೋಪಗಳನ್ನು ನಿರಾಕರಿಸಿದ್ದಾರೆ. ದೇಶ ಬಿಟ್ಟ ಬಳಿಕ 2019 ರಲ್ಲಿ ಈಕ್ವೆಡಾರ್ ಕರಾವಳಿಯ ದ್ವೀಪವೊಂದರಲ್ಲಿ 'ಕೈಲಾಸ' ದೇಶ ಸ್ಥಾಪಿಸಿರುವುದಾಗಿ ಅವರು ಹೇಳಿಕೊಂಡಿದ್ದಾರೆ.
-
Petrol Diesel Shortage: ಪೆಟ್ರೋಲ್, ಡೀಸೆಲ್ ಖಾಲಿಯಾಗುತ್ತೆ ಅನ್ನೋ ಸುಳ್ಳು ವದಂತಿಗಳಿಗೆ ಕಿವಿಕೊಡಬೇಡಿ; ಇಂಡಿಯನ್ ಆಯಿಲ್ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು?












Click it and Unblock the Notifications