Priyanka Gandhi Vadra: ಸಂಸತ್‌ಗೆ "ಪ್ಯಾಲೆಸ್ತೀನ್ ಬ್ಯಾಗ್" ತಂದಿದ್ಯಾಕೆ ಸಂಸದೆ ಪ್ರಿಯಾಂಕಾ ಗಾಂಧಿ!
Priyanka Gandhi Palestine bag controversy: ಇದೇ ಮೊದಲ ಬಾರಿ ಸಂಸತ್ ಪ್ರವೇಶಿಸಿರುವ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಭಾರೀ ಚರ್ಚೆಗೆ ಗ್ರಾಸವಾಗುವಂತಹ ಕೆಲಸವೊಂದನ್ನು ಮಾಡಿದ್ದಾರೆ. ವಯನಾಡ್‌ನ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರು, ಪ್ಯಾಲೆಸ್ತೀನ್‌ಗೆ ಪರೋಕ್ಷವಾಗಿ ಬೆಂಬಲ ಸೂಚಿಸಿದ್ದಾರೆ. ಪ್ರಿಯಾಂಕಾಗಾಂಧಿ ವಾದ್ರಾ ಅವರು ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದಲ್ಲಿ ಈಚೆಗೆ ನಡೆದ ಲೋಕಸಭೆ ಉಪ ಚುನಾವಣೆಯಲ್ಲಿ ಭರ್ಜರಿ ಗೆಲುವು ದಾಖಲಿಸಿದ್ದಾರೆ. ಇದೇ ಮೊದಲ ಬಾರಿ ಅವರು ಸಂಸತ್ ಪ್ರವೇಶ ಮಾಡಿದ್ದಾರೆ. ಇದೀಗ ಸಂಸದೆ ಪ್ರಿಯಾಂಕಾ ಗಾಂಧಿ ಅವರು ಪ್ಯಾಲೆಸ್ತೀನ್ ಎಂದು ಬರೆಯಲಾಗಿರುವ ಹಾಗೂ ಆ ದೇಶದ ಧ್ವಜ ಬಣ್ಣದ ಬ್ಯಾಗ್ (ಕೈಚೀಲ) ಅನ್ನು ಹಿಡಿದುಕೊಂಡು ಸಂಸತ್ತಿಗೆ ಬಂದಿದ್ದಾರೆ. ಇದೀಗ ಸಾಕಷ್ಟು ವಿವಾದಕ್ಕೆ ಕಾರಣವಾಗಿದೆ.
ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಇದೇ ಮೊದಲ ಬಾರಿ ಸಂಸತ್ ಪ್ರವೇಶ ಮಾಡಿದ್ದಾರೆ. ವಯನಾಡ್‌ನಲ್ಲಿ ಸಂಸದ ರಾಹುಲ್ ಗಾಂಧಿ ಅವರು ಈ ಹಿಂದೆ ಸ್ಪರ್ಧೆ ಮಾಡಿ ಗೆದ್ದಿದ್ದರು. ಇದೀಗ ವಯನಾಡ್ ಲೋಕಸಭಾ ಕ್ಷೇತ್ರದಿಂದ ಹಾಗೂ ಇದೇ ಮೊದಲ ಬಾರಿ ಸಂಸತ್ ಪ್ರವೇಶವನ್ನು ಪ್ರಿಯಾಂಕಾ ಅವರು ಮಾಡಿದ್ದಾರೆ. ಆದರೆ, ಸಂಸತ್ ಪ್ರವೇಶ ಮಾಡಿದ ಬೆನ್ನಲ್ಲೇ ಪ್ರಿಯಾಂಕಾ ಗಾಂಧಿ ಅವರು ಮಾಡಿರುವ ಕೆಲಸ ಭಾರೀ ಚರ್ಚೆಗೆ ಕಾರಣವಾಗಿದೆ. ಪ್ರಿಯಾಂಕಾ ಅವರು ಸೋಮವಾರ ಪ್ಯಾಲೆಸ್ತೀನ್ ಪರ ತಮ್ಮ ಬೆಂಬಲವನ್ನು ಸೂಚಿಸುವಂತೆ ಪ್ಯಾಲೆಸ್ತೀನ್ ಮಾದರಿ ಬ್ಯಾಗ್ ಹಿಡಿದುಕೊಂಡು ಸಂಸತ್ ಪ್ರವೇಶ ಮಾಡಿದ್ದಾರೆ. ಆದರೆ, ಇದು ಸಾಕಷ್ಟು ವಿವಾದಕ್ಕೆ ಕಾರಣವಾಗಿದೆ.

ಪ್ರಿಯಾಂಕಾ ಅವರು ಪ್ಯಾಲೆಸ್ತೀನ್ ಎಂದು ಬರೆಯಲಾಗಿರುವ ಬ್ಯಾಗ್ ತೆಗೆದುಕೊಂಡು ಸಂಸತ್ ಪ್ರವೇಶಿಸಿರುವ ಚಿತ್ರವನ್ನು ಕಾಂಗ್ರೆಸ್ ವಕ್ತಾರರಾದ ಶಾಮಾ ಮೊಹಮ್ಮದ್ ಅವರು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದು, ಈ ಚಿತ್ರ ವೈರಲ್ ಆಗಿದೆ. ಬಿಜೆಪಿ ಹಾಗೂ ಕೆಲವು ನೆಟ್ಟಿಗರು ಪ್ರಿಯಾಂಕಾ ಅವರ ನಡೆಗೆ ತಮ್ಮ ಅಸಮಾಧಾನ ದಾಖಲಿಸಿದ್ದಾರೆ.
ಸೋಷಿಯಲ್ ಮೀಡಿಯಾದಲ್ಲಿ ಭಾರೀ ವಿರೋಧ: ಇನ್ನು ಪ್ರಿಯಾಂಕಾ ಗಾಂಧಿ ಅವರು ಪ್ಯಾಲೆಸ್ತೀನ್ ಎಂದು ಬರೆದಿರುವ ಬ್ಯಾಗ್ ಅನ್ನು ಸಂಸತ್‌ಗೆ ತೆಗೆದುಕೊಂಡು ಹೋಗಿದ್ದಾರೆ ಎನ್ನುವುದು ಸಾಕಷ್ಟು ವಿವಾದಕ್ಕೆ ಕಾರಣವಾಗಿದೆ. ಇದು ಮುಸ್ಲಿಮರನ್ನು ಮೆಚ್ಚಿಸುವ ಉದ್ದೇಶದಿಂದ ಮಾಡಲಾಗಿದೆ ಎಂದು ಹಲವರು ಅಭಿಪ್ರಾಯಪಟ್ಟಿದ್ದಾರೆ.

ರಾಹುಲ್‌ಗಾಂಧಿಗಿಂತ ಆಪತ್ತು: ಪ್ರಿಯಾಂಕಾ ಗಾಂಧಿ ವಾದ್ರಾ ಅವರ ನಡೆಯನ್ನು ಬಿಜೆಪಿಯು ಉಗ್ರವಾಗಿ ಖಂಡಿಸಿದೆ. ಪ್ಯಾಲೆಸ್ತೀನ್ ಎಂದು ಬರೆಯಲಾಗಿರುವ ಬ್ಯಾಗ್ ಅನ್ನು ಪ್ರಿಯಾಂಕಾ ಗಾಂಧಿ ಅವರು ಹಿಡಿದಿರುವ ಚಿತ್ರಗಳು ಸೋಷಿಯಲ್ ಮೀಡಿಯಾದದಲ್ಲಿ ವೈರಲ್ ಆಗುತ್ತಿದ್ದಂತೆಯೇ ಈ ಬಗ್ಗೆ ಬಿಜೆಪಿ ಕೆಂಡಾಮಂಡಲವಾಗಿದೆ. ಪ್ರಿಯಾಂಕಾ ಗಾಂಧಿ ಅವರು ರಾಹುಲ್ ಗಾಂಧಿ ಅವರಿಗಿಂತ ಆಪತ್ತು ಎಂದು ಬಿಜೆಪಿ ಅಭಿಪ್ರಾಯಪಟ್ಟಿದೆ. ಪ್ರಿಯಾಂಕಾ ಗಾಂಧಿ ಅವರೊಂದಿಗೆ ರಾಹುಲ್ ಗಾಂಧಿ ಅವರ ಬಗ್ಗೆಯೂ ಬಿಜೆಪಿ ದೂರಿದೆ.
ಪ್ರಿಯಾಂಕಾ ಗಾಂಧಿ ಅವರು ಇದೇ ಮೊದಲ ಬಾರಿ ಸಂಸತ್ ಪ್ರವೇಶ ಮಾಡಿದ್ದಾರೆ. ಈಚೆಗೆ ಸಂಸತ್‌ನಲ್ಲಿ ಅವರು ಚೊಚ್ಚಲ ಭಾಷಣ ಮಾಡಿದ್ದರು. ಈ ಭಾಷಣ ಸಾಕಷ್ಟು ವೈರಲ್ ಆಗಿತ್ತು. ಈ ಭಾಷಣ ವೈರಲ್ ಆದ ಮೇಲೆ ಅವರ ಬಗ್ಗೆ ಸಾಕಷ್ಟು ಮೆಚ್ಚುಗೆ ವ್ಯಕ್ತವಾಗಿತ್ತು. ಇದರ ಬೆನ್ನಲ್ಲೇ ಇದೀಗ ಪ್ಯಾಲೆಸ್ತೀನ್ ಎಂದು ಬರೆಯಲಾಗಿರುವ ಬ್ಯಾಗ್ ಸಾಕಷ್ಟು ವಿವಾದವನ್ನು ಸೃಷ್ಟಿ ಮಾಡಿದೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications