ಕೇರಳ ವಿಧಾನಸಭೆ ಚುನಾವಣೆಗೆ ಕರ್ನಾಟಕ "ಕಾಂಗ್ರೆಸ್" ದಾಳ!
ಬೆಂಗಳೂರಿನ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ನಿರ್ಮಾಣ ಮಾಡಲಾಗಿದ್ದ ಅಕ್ರಮ ಶೆಡ್ಗಳ ತೆರವು ಕಾರ್ಯಾಚರಣೆಯು ಇದೀಗ ದೇಶದಾದ್ಯಂತ ಸುದ್ದಿಯಾಗುವುದಕ್ಕೆ ಪ್ರಾರಂಭವಾಗಿದೆ. ಅಚ್ಚರಿ ಎನ್ನುವಂತೆ ಕೇರಳ ಸರ್ಕಾರ ಹಾಗೂ ಅಲ್ಲಿನ ಜನಪ್ರತಿನಿಧಿಗಳು ಈ ವಿಚಾರದಲ್ಲಿ ಮಧ್ಯಪ್ರವೇಶ ಮಾಡಿದ್ದಾರೆ. "ರಾಜಕಾರಣಿಗಳು ಲಾಭವಿಲ್ಲದೆ ಯಾವುದನ್ನೂ ಮಾಡುವುದಿಲ್ಲ" ರಾಜಕೀಯದ ಬಗ್ಗೆ ಜನ ಸಾಮಾನ್ಯರು ಬಳಸುವ ಸಾಮಾನ್ಯ ಪದವಿದು. ಈ ಮಾತಿನಿಂದ ಕರ್ನಾಟಕ ಮತ್ತು ಕೇರಳದ ರಾಜಕಾರಣಿಗಳೂ ಹೊರತಲ್ಲ.
ಕೇರಳದ ಜನಪ್ರತಿನಿಧಿಗಳು ತಂಡೋಪ ತಂಡವಾಗಿ ಬೆಂಗಳೂರಿನ ಕೋಗಿಲು ಗ್ರಾಮದ ಸರ್ಕಾರಿ ಗೋಮಾಳ ಜಮೀನಿನ ಪ್ರದೇಶಕ್ಕೆ ಭೇಟಿ ನೀಡುತ್ತಿರುವುದರ ಹಿಂದೆ ಇರುವುದು ಕೇವಲ ರಾಜಕೀಯ ಹಾಗೂ ಮತಬ್ಯಾಂಕ್ ರಾಜಕಾರಣ ಮಾತ್ರ. ಕೇರಳದ ರಾಜಕಾರಣಿಗಳು ಕರ್ನಾಟಕದ ಈ ವಿಚಾರವನ್ನು ದಾಳವಾಗಿ ಪ್ರಯೋಗಿಸಿಕೊಳ್ಳು ತ್ತಿದ್ದಾರೆ. ಕಳೆದ ಹತ್ತು ವರ್ಷಗಳಿಂದಲೂ ಕೇರಳದಲ್ಲಿ ಕಮ್ಯೂನಿಸ್ಟ್ ಪಾರ್ಟ್ ಆಫ್ ಇಂಡಿಯಾ (ಮಾರ್ಕ್ಸ್ವಾದಿ) ಸಿಪಿಐ(ಎಂ) ನೇತೃತ್ವದ ಸಮ್ಮಿಶ್ರ ಸರ್ಕಾರ ಆಡಳಿತ ನಡೆಸುತ್ತಿದೆ. ಆದರೆ ಇನ್ನು ಕೆಲವೇ ತಿಂಗಳುಗಳಲ್ಲಿ ಕೇರಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಈ ಸರ್ಕಾರಕ್ಕೆ ಈಗ ಆಡಳಿತ ವಿರೋಧಿ ಅಲೆ ಆತಂಕ ಶುರುವಾಗಿದೆ.

ಕರ್ನಾಟಕದ ಮೇಲೆ ಯಾಕೆ ಕೇರಳ ರಾಜಕಾರಣಿಗಳ ಕಣ್ಣು
ಕರ್ನಾಟಕದ ಮೇಲೆ ಹಾಗೂ ಇಲ್ಲಿನ ಬೆಳವಣಿಗೆಗಳ ಮೇಲೆ ಕೇರಳದ ಜನಪ್ರತಿನಿಧಿಗಳು ಕಣ್ಣು ಹಾಕಿರುವುದಕ್ಕೆ ಮೂರು ಪ್ರಮುಖ ಕಾರಣಗಳಿವೆ. ಅದರಲ್ಲಿ ಮುಖ್ಯವಾಗಿ ಅಲ್ಲಿನ ಸರ್ಕಾರದ ಆಡಳಿತ ವೈಫಲ್ಯ. ಸುದೀರ್ಘ ಒಂದು ದಶಕದಿಂದಲೂ ಸಿಪಿಎಂನ ಪಿಣರಾಯಿ ವಿಜಯನ್ ಅಧಿಕಾರದಲ್ಲಿ ಇದ್ದಾರೆ. ಆದರೆ ಅವರ ಆಡಳಿತ ವೈಫಲ್ಯವು ಈ ಬಾರಿ ಅಲ್ಲಿ ಕಾಂಗ್ರೆಸ್ ಪಕ್ಷಕ್ಕೆ ವರದಾನವಾಗಿದೆ. ಈ ಕಾರಣಕ್ಕೆ ಸಹಜವಾಗಿಯೇ ಕೇರಳ ಸರ್ಕಾರದ ಕಣ್ಣು ಕರ್ನಾಟಕದ ಕಾಂಗ್ರೆಸ್ ನೇತೃತ್ವದ ಸರ್ಕಾರದ ಮೇಲೆ ಬಿದ್ದಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಹಾಗೂ ಇಲ್ಲಿನ ಆಡಳಿತ ಯಂತ್ರದ ಮೇಲೆ ಬಿದ್ದಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಉತ್ತರ ಪ್ರದೇಶದ ಬುಲ್ಡೋಜರ್ ಮಾದರಿ ಅನುಸರಿಸುತ್ತಿದೆ. ಮುಂದೆ ಕಾಂಗ್ರೆಸ್ ಸರ್ಕಾರ ಕೇರಳದಲ್ಲಿ ಅಧಿಕಾರಕ್ಕೆ ಬಂದರೂ ಇದೇ ಮಾದರಿ ಅನುಸರಿಸಬಹುದು ಎನ್ನುವ ಅನುಮಾನದ ಬೀಜವನ್ನು ಜನರಲ್ಲಿ ಬಿತ್ತುವ ಕೆಲಸವನ್ನು ಅಲ್ಲಿನ ಸಿಪಿಎಂ ಸರ್ಕಾರ ಮಾಡುತ್ತಿದೆ.
ಅಹಿಂದ ರಾಜಕೀಯ ಪ್ರಭಾವ ಭೀತಿ
ಕೇರಳದ ವಾಯನಾಡಿನ ಲೋಕಸಭೆ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಪರವಾಗಿ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಚಾರ ಮಾಡಿದ್ದರು. ಆ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರಿಗೆ ಅಲ್ಲಿ ಭಾರೀ ಬೆಂಬಲ ವ್ಯಕ್ತವಾಗಿತ್ತು. ಅಲ್ಲದೇ ಇದೀಗ ಅಹಿಂದ ಸಮಾವೇಶವನ್ನು ಕೇರಳದಲ್ಲಿ ನಡೆಸುವುದಕ್ಕೆ ಕಾಂಗ್ರೆಸ್ ಹೈಕಮಾಂಡ್ ಹಾಗೂ ಕೇರಳ ಕಾಂಗ್ರೆಸ್ ಯೋಜನೆ ರೂಪಿಸುತ್ತಿದೆ. ಇದು ಕೇರಳ ವಿಧಾನಸಭೆ ಚುನಾವಣೆಯಲ್ಲಿ ಪ್ರಭಾವ ಬೀರುವ ಸಾಧ್ಯತೆ ಇದೆ. ಹೀಗಾಗಿ ಕಾಂಗ್ರೆಸ್ ಪಕ್ಷಕ್ಕೆ ಎಷ್ಟು ಡ್ಯಾಮೇಜ್ ಮಾಡಲು ಸಾಧ್ಯವೋ ಅಷ್ಟು ಮಾಡಲು ಅಲ್ಲಿನ ಸಿಪಿಎಂ - ಸಿಪಿಐ (ಲೆಫ್ಟ್ ಡೆಮಾಕ್ರಟಿಕ್ ಫ್ರಂಟ್) ಸಮ್ಮಿಶ್ರ ಸರ್ಕಾರ ಮಾಡುತ್ತಿದೆ.
ಕಮ್ಯುನಿಸ್ಟ್ ಪಕ್ಷಗಳಿಗೆ ತೀವ್ರ ಮುಖಭಂಗ
ಕೇರಳದಲ್ಲಿ ಕಳೆದ ಒಂದು ದಶಕದಿಂದಲೂ ಆಡಳಿತ ನಡೆಸುತ್ತಿರುವ ಲೆಫ್ಟ್ ಡೆಮಾಕ್ರಟಿಕ್ ಫ್ರಂಟ್ ಇದೀಗ ತೀವ್ರ ಆಡಳಿತ ವಿರೋಧ ಅಲೆಯನ್ನು ಅನುಭವಿಸುತ್ತಿದೆ. ನಿರುದ್ಯೋಗ ಸಮಸ್ಯೆ ಹಾಗೂ ಅಲ್ಲಿನ ಸರ್ಕಾರಿ ನೌಕರರಿಗೆ ಸಮಯಕ್ಕೆ ಸರಿಯಾಗಿ ವೇತನ ನೀಡದೆ ಇರುವುದು ಸೇರಿದಂತೆ ಹಲವು ಕಾರಣಕ್ಕೆ ಕೇರಳ ಸರ್ಕಾರ ಆಡಳಿತ ವಿರೋಧಿ ಅಲೆಯನ್ನು ಎದುರಿಸುತ್ತಿದೆ. ಇದಕ್ಕೆ ಮತ್ತೊಂದು ಸಾಕ್ಷಿ ಎಂದರೆ ಈಚೆಗೆ ನಡೆದ ಸ್ಥಳೀಯ ಚುನಾವಣೆಗಳಲ್ಲಿ ಲೆಫ್ಟ್ ಡೆಮಾಕ್ರಟಿಕ್ ಫ್ರಂಟ್ ಪಕ್ಷಗಳು ತೀವ್ರ ಮುಖಭಂಗವನ್ನು ಅನುಭವಿಸಿವೆ. ಅದರಲ್ಲೂ ಕಮ್ಯೂನಿಸ್ಟ್ ಪಕ್ಷದ ಭದ್ರಕೋಟೆ ಎಂದೇ ಪರಿಗಣಿಸುವ ಕಣ್ಣೂರು ಜಿಲ್ಲೆಯಲ್ಲೂ ಕಮ್ಯೂನಿಸ್ಟ್ ಪಕ್ಷ ಮಕಾಡೆ ಮಲಗಿದೆ. ಜನ ಕಾಂಗ್ರೆಸ್ ಪಕ್ಷದ ಕಡೆ ಒಲವು ತೋರಿಸುತ್ತಿದ್ದಾರೆ. ಕಾಂಗ್ರೆಸ್ ಪ್ರಭಲವಾಗಿಲ್ಲದ ಕಡೆ ಬಿಜೆಪಿಯನ್ನು ಗೆಲ್ಲಿಸಿದ್ದಾರೆ. ಇದಕ್ಕೆ ತಿರುವನಂತಪುರಂ ಪಾಲಿಕೆ ಚುನಾವಣೆ ಸಾಕ್ಷಿ. ಈ ಎಲ್ಲಾ ಕಾರಣಗಳಿಗೆ ಕರ್ನಾಟಕ ಮತ್ತು ಇಲ್ಲಿನ ಕಾಂಗ್ರೆಸ್ ಸರ್ಕಾರದ ಆಡಳಿತವು ಚರ್ಚೆಗೆ ಗ್ರಾಸವಾಗಿದೆ.
ರಾಜಕಾರಣಿಗಳು ಲಾಭವಿಲ್ಲದೆ ಏನನ್ನೂ ಮಾಡುವುದಿಲ್ಲ. ಅದು ಕೇರಳದ ರಾಜಕಾರಣಿಗಳಾಗಿರಲಿ, ಕರ್ನಾಟಕದ ರಾಜಕಾರಣಿಗಳಾಗಿರಲಿ ಎನ್ನುವುದಕ್ಕೆ ಬೆಂಗಳೂರು ಪ್ರಕರಣ ಮತ್ತೊಂದು ಸಾಕ್ಷಿ.
-
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್












Click it and Unblock the Notifications