ರಫೇಲ್ ಬಗ್ಗೆ ತನಿಖೆಗೆ ಮೋದಿ ಸರ್ಕಾರ ಸಿದ್ದವೇಕಿಲ್ಲ: ರಾಹುಲ್ ಪ್ರಶ್ನೆ
ನವದೆಹಲಿ, ಜು.04: ಸದಾ ಕೇಂದ್ರ ಸರ್ಕಾರದ ವಿರುದ್ದ ಟ್ವಿಟ್ಟರ್ ಮೂಲಕ ವಾಗ್ದಾಳಿ ನಡೆಸುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಈಗ ಮತ್ತೆ ರಫೇಲ್ ಒಪ್ಪಂದದ ಬಗ್ಗೆ ಜೆಪಿಸಿ ತನಿಖೆ ನಡೆಯಬೇಕು ಎಂದು ಆಗ್ರಹಿಸಿದ್ದಾರೆ. ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರವು ತನಿಖೆಗೆ ಏಕೆ ಸಿದ್ಧವಾಗಿಲ್ಲ ಎಂದು ಟ್ವಿಟ್ಟರ್‌ನಲ್ಲಿ ಪೋಲ್ ಮೂಲಕ ಸಮೀಕ್ಷೆ ನಡೆಸಿದ್ದಾರೆ.
ಭಾರತದೊಂದಿಗಿನ 59,000 ಕೋಟಿ ರೂ. ರಫೇಲ್ ಫೈಟರ್ ಜೆಟ್ ಒಪ್ಪಂದದಲ್ಲಿ ಭ್ರಷ್ಟಾಚಾರ ಮಾಡಲಾಗಿದೆ ಹಾಗೂ ಭಾರತದ ಕಡೆ ಹೆಚ್ಚು ಒಲವು ತೋರಲಾಗಿದೆ ಎಂಬ ಆರೋಪದ ಬಗ್ಗೆ ಹೆಚ್ಚು ಸೂಕ್ಷ್ಮ ನ್ಯಾಯಾಂಗ ತನಿಖೆ ನಡೆಸಲು ಫ್ರಾನ್ಸ್ ನ್ಯಾಯಾಧೀಶರನ್ನು ನೇಮಿಸಿದ ಬೆನ್ನಲ್ಲೇ ಕಾಂಗ್ರೆಸ್ ನಾಯಕ ಈ ಹೇಳಿಕೆ ನೀಡಿದ್ದಾರೆ.
ತನಿಖೆಯು ಸತ್ಯವನ್ನು ಕಂಡುಕೊಳ್ಳುವ ಏಕೈಕ ಮಾರ್ಗವಾಗಿದೆ ಎಂದು ಹೇಳಿರುವ ಕಾಂಗ್ರೆಸ್, ಪ್ರಧಾನಿ ನರೇಂದ್ರ ಮೋದಿ ತನಿಖೆಗೆ ಆದೇಶಿಸಲು ಮತ್ತು ಒಪ್ಪಂದದ ವಿಚಾರದಲ್ಲಿ ಪಾರದರ್ಶಕವಾಗಿರಲು ಹೇಳಿದೆ.

ಶನಿವಾರ ವಯನಾಡು ಸಂಸದ ರಾಹುಲ್ ತನ್ನ ಸಾಮಾಜಿಕ ಮಾಧ್ಯಮದಲ್ಲಿ ಪ್ರಧಾನಿಯನ್ನು ಅಪಹಾಸ್ಯ ಮಾಡಿದ ಕಾರ್ಟೂನ್ ಹಂಚಿಕೊಂಡಿದ್ದಾರೆ.
ಇನ್ನು ಈ ರಫೇಲ್ ವಿಚಾರದಲ್ಲಿ ಪ್ರತಿಕ್ರಿಯೆ ನೀಡಿರುವ ಬಿಜೆಪಿ ನಾಯಕ ಅಮಿತ್ ಮಾಲ್ವಿಯಾ, ರಫೇಲ್ ವಿಷಯದ ಮೇಲೆ 2024 ಲೋಕಸಭಾ ಚುನಾವಣೆಯಲ್ಲಿ ಹೋರಾಡಲು ಕಾಂಗ್ರೆಸ್‌ನ ಮಾಜಿ ನಾಯಕ ರಾಹುಲ್‌ಗೆ ಸವಾಲೆಸೆದಿದ್ದಾರೆ.
"ರಾಹುಲ್ ಗಾಂಧಿ ಈಗ ಈ ಹಂತಕ್ಕೆ ಇಳಿದಿದ್ದಾರೆ. ಭಾರತದಾದ್ಯಂತ ಜನರು ರಾಹುಲ್‌ನ್ನು ತಿರಸ್ಕರಿಸಿದ್ದಾರೆ. ಆದರೆ ಈ ವಿಷಯದ ಮೇಲೆ 2024 ಚುನಾವಣೆಯಲ್ಲಿ ಹೋರಾಡಲು ರಾಹುಲ್‌ಗೆ ಸ್ವಾಗತ," ಎಂದು ಮಾಲ್ವಿಯಾ ಹೇಳಿದರು.
JPC जाँच के लिए मोदी सरकार तैयार क्यों नहीं है?
— Rahul Gandhi (@RahulGandhi) July 4, 2021
ಫ್ರಾನ್ಸ್ ತನಿಖೆ ಆರಂಭಿಸಿದ ನಂತರ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಕೂಡಾ ರಫೇಲ್‌ನಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿದರು. "ಮೂರು ವಿಷಯಗಳು ಸುದೀರ್ಘ ಮರೆಯಾಗುವುದಿಲ್ಲ. ಸೂರ್ಯ, ಚಂದ್ರ, ಮತ್ತು ಸತ್ಯ. ರಫೇಲ್ ಒಪ್ಪಂದದ ಭ್ರಷ್ಟಾಚಾರವು ಈಗ ಸ್ಪಷ್ಟವಾಗಿ ಹೊರಬಂದಿದೆ. ಫ್ರೆಂಚ್ ಸರ್ಕಾರವು ತನಿಖೆಗೆ ಆದೇಶಿಸಿದ ನಂತರ ಕಾಂಗ್ರೆಸ್ ಪಕ್ಷ ಮತ್ತು ರಾಹುಲ್ ಗಾಂಧಿಯವರ ನಿಲುವು ಇಂದು ಸಮರ್ಥಿಸಲ್ಪಟ್ಟಿದೆ," ಎಂದಿದ್ದಾರೆ.
ಇನ್ನು ತನ್ನ ಟ್ವಿಟ್ಟರ್‌ನಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರವು ತನಿಖೆಗೆ ಏಕೆ ಸಿದ್ಧವಾಗಿಲ್ಲ ಎಂದು ಪ್ರಶ್ನಿಸಿ ಸಮೀಕ್ಷೆಯ ಪೋಲ್ ಆರಂಭಿಸಿರುವ ರಾಹುಲ್ ಗಾಂಧಿ, ಅದರಲ್ಲಿ ನಾಲ್ಕು ಆಯ್ಕೆಗಳನ್ನು ನೀಡಿದ್ದಾರೆ. ಮೊದಲನೆಯದು ತಪ್ಪಿತಸ್ಥ ಮನಸ್ಸಾಕ್ಷಿ, ಎರಡನೇಯದ್ದು ಮಿತ್ರರನ್ನೂ ರಕ್ಷಿಸಲು, ತನಿಖೆಗೆ ರಾಜ್ಯ ಸಭಾ ಸೀಟು ಬೇಕಾಗಿಲ್ಲ, ಇವೆಲ್ಲವೂ ಸರಿಯಾದ ಉತ್ತರ ಎಂದು ಹಿಂದಿಯಲ್ಲಿ ಉಲ್ಲೇಖಿಸಿದ್ದಾರೆ.
(ಒನ್‌ಇಂಡಿಯಾ ಸುದ್ದಿ)
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications