ಪ್ರಧಾನಿ ಸುಳ್ಳು ಹೇಳುವುದು ಬಿಟ್ಟು ಮಣಿಪುರಕ್ಕೆ ಏಕೆ ಭೇಟಿ ನೀಡುತ್ತಿಲ್ಲ: ಹಿಗ್ಗಾಮುಗ್ಗ ಜಾಡಿಸಿದ ಜೈರಾಮ್ ರಮೇಶ್
ಬೆಂಗಳೂರು, ಸೆಪ್ಟೆಂಬರ್ 27: ಪ್ರಧಾನಿ ಮೋದಿ ಅವರು ಕಾಂಗ್ರೆಸ್ಸನ್ನು ನಿಂದಿಸುವುದು, ಸುಳ್ಳು ಹೇಳುವುದು ಬಿಟ್ಟು ಮಣಿಪುರಕ್ಕೆ ಏಕೆ ಭೇಟಿ ನೀಡುತ್ತಿಲ್ಲ ಎಂದು ರಾಜ್ಯಸಭಾ ಸದಸ್ಯ ಜೈರಾಮ್ ರಮೇಶ್ ಟೀಕಿಸಿದ್ದಾರೆ.
ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ಇಂದು ಮತ್ತೆ ಮಣಿಪುರದಲ್ಲಿ 5 ದಿನಗಳ ಕಾಲ ಇಂಟರ್ನೆಟ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ. ಸಾಮಾನ್ಯರ ಹಕ್ಕುಗಳನ್ನು ಸಂಪೂರ್ಣವಾಗಿ ಅಪಹಾಸ್ಯ ಮಾಡುವ ಭಯಾನಕ ವೀಡಿಯೊ ಹೊರಹೊಮ್ಮಿದೆ. ಆದರೆ ಮಣಿಪುರಕ್ಕೆ ಸಂಬಂಧಿಸಿದಂತೆ ಯಾವ ವಿಷಯ ಪ್ರಧಾನಿಯನ್ನು ಕಾಡುವುದಿಲ್ಲ. ಅಲ್ಲಿನ ಜನರನ್ನು ಸುಮ್ಮನೆ ಕೈಬಿಟ್ಟಿದ್ದಾರೆ ಎಂದು ಆರೋಪಿಸಿದರು.

ಪ್ರಧಾನಿಯವರು ಅಧಿಕಾರಕ್ಕೆ ಬರಲು ಮಾತ್ರ ಕಾಳಜಿ ವಹಿಸುತ್ತಾರೆ ಮತ್ತು ಅವರಿಗೆ ಬೇರೆ ಯಾವುದೂ ಮುಖ್ಯವಲ್ಲ ಎಂದು ತಿಳಿಸಿದರು. ಬುಧವಾರ ಮಣಿಪುರ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಾತನಾಡಿ, ಮಣಿಪುರದಲ್ಲಿ ಹಿಂಸಾಚಾರವನ್ನು ನಿಯಂತ್ರಿಸುವ ಮೊದಲ ಹೆಜ್ಜೆಯಾಗಿ ಬಿಜೆಪಿಯು ಅಸಮರ್ಥ ಮುಖ್ಯಮಂತ್ರಿಯನ್ನು ವಜಾಗೊಳಿಸಬೇಕೆಂದು ಒತ್ತಾಯಿಸಿದರು.
The Prime Minister is roaming around different states leaving behind his trademark trail of lies, abuses and insults. Why he cannot find a day to visit Manipur is simply beyond any understanding.
— Jairam Ramesh (@Jairam_Ramesh) September 26, 2023
Today again internet services have been suspended for 5 days in Manipur. A…
147 ದಿನಗಳಿಂದ ಮಣಿಪುರದ ಜನರು ಹಿಂಸಾಚಾರದ ವಾತಾವರಣದಲ್ಲಿ ನರಳುತ್ತಿದ್ದಾರೆ. ಆದರೆ ಪ್ರಧಾನಿಗೆ ಇಲ್ಲಿಗೆ ಭೇಟಿ ನೀಡಲು ಸಾಧ್ಯವಾಗುತ್ತಿಲ್ಲ. ಈ ಹಿಂಸಾಚಾರದಲ್ಲಿ ವಿದ್ಯಾರ್ಥಿಗಳು ಬಲಿಯಾಗುತ್ತಿರುವ ಭಯಾನಕ ಚಿತ್ರಗಳು ಮತ್ತೊಮ್ಮೆ ಇಡೀ ರಾಷ್ಟ್ರವನ್ನು ಬೆಚ್ಚಿಬೀಳಿಸಿವೆ ಎಂದು ಅವರು ಆರೋಪಿಸಿದರು.
ಹಿಂಸಾಚಾರದಲ್ಲಿ ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯವು ಅಸ್ತ್ರವಾಗಿದೆ ಎಂಬುದು ಈಗ ಸ್ಪಷ್ಟವಾಗಿದೆ. ಸುಂದರವಾದ ಮಣಿಪುರ ರಾಜ್ಯವು ರಣರಂಗವಾಗಿ ಮಾರ್ಪಟ್ಟಿದೆ, ಇದಕ್ಕೆ ಬಿಜೆಪಿ ಕಾರಣ. ಹೈ ಟೈಮ್, ಪಿಎಂ ಮೋದಿ ಬಿಜೆಪಿಯ ಅಸಮರ್ಥ ಮಣಿಪುರ ಮುಖ್ಯಮಂತ್ರಿಯನ್ನು ವಜಾಗೊಳಿಸಿದರೆ ಹೆಚ್ಚಿನ ಪ್ರಕ್ಷುಬ್ಧತೆಯನ್ನು ನಿಯಂತ್ರಿಸಲು ಇದು ಮೊದಲ ಹೆಜ್ಜೆಯಾಗುತ್ತದೆ ಎಂದು ಅವರು ಹೇಳಿದರು.
ಜುಲೈ 6 ರಿಂದ ನಾಪತ್ತೆಯಾಗಿದ್ದ ಮೈಟಿ ಸಮುದಾಯದ ಇಬ್ಬರು ವಿದ್ಯಾರ್ಥಿಗಳ ಹತ್ಯೆಯನ್ನು ಪ್ರತಿಭಟಿಸುತ್ತಿರುವ ಸ್ಥಳೀಯರ ಮತ್ತು ಆರ್‌ಎಎಫ್ ಸಿಬ್ಬಂದಿ ನಡುವೆ ಮಂಗಳವಾರ ರಾತ್ರಿ ಇಂಫಾಲ್‌ನ ಸಿಂಗ್‌ಜಮೇಯ್ ಪ್ರದೇಶದಲ್ಲಿ ಘರ್ಷಣೆ ಸಂಭವಿಸಿದೆ. ಆರ್‌ಎಎಫ್ ಸಿಬ್ಬಂದಿ ಪ್ರತಿಭಟನಾಕಾರರ ಮೇಲೆ ಅಶ್ರುವಾಯು ಶೆಲ್ ಮತ್ತು ರಬ್ಬರ್ ಗುಂಡುಗಳನ್ನು ಹಾರಿಸಿದ ಪರಿಣಾಮ 45 ಮಂದಿ ಪ್ರತಿಭಟನಾಕಾರರು, ಹೆಚ್ಚಾಗಿ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.
ಮಣಿಪುರ ಹಿಂಸಾಚಾರದ ವಿಚಾರದಲ್ಲಿ ಕಾಂಗ್ರೆಸ್ ಬಿಜೆಪಿ ಸರ್ಕಾರವನ್ನು ಗುರಿಯಾಗಿಸಿಕೊಂಡಿದ್ದು, ಹಿಂಸಾಚಾರ ಪೀಡಿತ ರಾಜ್ಯಕ್ಕೆ ಪ್ರಧಾನಿ ಏಕೆ ಭೇಟಿ ನೀಡಿಲ್ಲ ಎಂದು ಪ್ರಶ್ನಿಸುತ್ತಿದೆ. ಸ್ಥಳೀಯರು ಮತ್ತು ರಾಪಿಡ್ ಆಕ್ಷನ್ ಫೋರ್ಸ್ (ಆರ್‌ಎಎಫ್) ಸಿಬ್ಬಂದಿಗಳ ನಡುವಿನ ಘರ್ಷಣೆಯ ನಂತರ ಬುಧವಾರ ಬೆಳಿಗ್ಗೆ ಇಂಫಾಲ್‌ನಲ್ಲಿ ಪರಿಸ್ಥಿತಿ ಬೂದಿಮುಚ್ಚಿದ ಕೆಂಡದಂತಿತ್ತು.
ಮುಂಬರುವ ಪ್ರತಿಭಟನೆಗಳು ಮತ್ತು ಹಿಂಸಾಚಾರ ಹೆಚ್ಚಾಗುವ ಹಿನ್ನೆಲೆಯಲ್ಲಿ ಮಣಿಪುರ ಪೊಲೀಸರು, ಕೇಂದ್ರೀಯ ಮೀಸಲು ಪೊಲೀಸ್ ಪಡೆ (CRPF) ಮತ್ತು RAF ಸಿಬ್ಬಂದಿಯನ್ನು ಇಂಫಾಲ್ ಕಣಿವೆಯಾದ್ಯಂತ ಹೆಚ್ಚಾಗಿ ನಿಯೋಜಿಸಲಾಗಿದೆ. ಮಣಿಪುರ ರಾಜ್ಯ ಸರ್ಕಾರವು ಬುಧವಾರ ಶಾಲೆಗಳಿಗೆ ರಜೆ ಘೋಷಿಸಿದ್ದರೂ, ಇಂಫಾಲ್ ಮೂಲದ ಕೆಲವು ಸಂಸ್ಥೆಗಳ ವಿದ್ಯಾರ್ಥಿಗಳು ತಮ್ಮ ಶಾಲೆಗಳಿಗೆ ಹೋಗುವುದಾಗಿ ಪ್ರತಿಜ್ಞೆ ಮಾಡಿದರು.












Click it and Unblock the Notifications