ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಉತ್ತರಾಖಂಡ್ ಸಿಎಂ ಸ್ಥಾನಕ್ಕೆ ರಾವತ್ ರಾಜೀನಾಮೆ ಸಲ್ಲಿಸಿದ್ದು ಏಕೆ?

|
Google Oneindia Kannada News

ನವದೆಹಲಿ, ಮಾರ್ಚ್.09: ಉತ್ತರಾಖಂಡ್ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ಕಾರ್ಯವೈಖರಿ ಬಗ್ಗೆ ಬಿಜೆಪಿಗರು ಅಸಮಾಧಾನ ವ್ಯಕ್ತಪಡಿಸಿದ್ದರು. ಹೈಕಮಾಂಡ್ ನಾಯಕರಿಗೆ ದೂರು ನೀಡಿರುವ ಬೆನ್ನಲ್ಲೇ ತ್ರಿವೇಂದ್ರ ಸಿಂಗ್ ರಾವತ್ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ಉತ್ತರಾಖಂಡ್ ರಾಜ್ಯಪಾಲರಾದ ಬೇಬಿ ರಾಣಿ ಮೌರ್ಯ ಅವರಿಗೆ ರಾಜೀನಾಮೆ ಸಲ್ಲಿಸಿದ ಬಳಿಕ ತ್ರಿವೇಂದ್ರ ಸಿಂಗ್ ರಾವತ್ ಮಾತನಾಡಿದ್ದಾರೆ. ನಾಲ್ಕು ವರ್ಷಗಳ ಕಾಲ ಮುಖ್ಯಮಂತ್ರಿ ಆಗಿ ಸೇವೆ ಸಲ್ಲಿಸುವುದಕ್ಕೆ ಅವಕಾಶ ನೀಡಿದ ಹೈಕಮಾಂಡ್ ಗೆ ಧನ್ಯವಾದ ಅರ್ಪಿಸಿದ್ದಾರೆ.

ಉತ್ತರಾಖಂಡ್ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ರಾಜೀನಾಮೆಉತ್ತರಾಖಂಡ್ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ರಾಜೀನಾಮೆ

"ನಾಲ್ಕು ವರ್ಷಗಳ ಕಾಲ ಉತ್ತರಾಖಂಡ್ ದಲ್ಲಿ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಲು ಪಕ್ಷವು ನನಗೆ ಸುವರ್ಣಾವಕಾಶ ಕೊಟ್ಟಿತ್ತು. ಅಂತದೊಂದು ಅವಕಾಶ ನನಗೆ ಸಿಗುತ್ತದೆ ಎಂದು ನಾನು ಎಂದಿಗೂ ಭಾವಿಸಿರಲಿಲ್ಲ "ಎಂದು ತ್ರಿವೇಂದ್ರ ಸಿಂಗ್ ರಾವತ್ ಹೇಳಿದ್ದಾರೆ.

Why Trivendra Singh Rawat Resigned For Uttarakhand CM Seat? Read Here

ರಾವತ್ ರಾಜೀನಾಮೆ ಸಲ್ಲಿಸುವುದಕ್ಕೆ ಕಾರಣವೇನು?

ಉತ್ತರಾಖಂಡ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಲು ಕಾರಣವೇನು ಎಂಬ ಪ್ರಶ್ನೆಗೆ ಉತ್ತರಿಸುವುದಕ್ಕೆ ತ್ರಿವೇಂದ್ರ ಸಿಂಗ್ ರಾವತ್ ನಿರಾಕರಿಸಿದ್ದಾರೆ. ಈ ಪ್ರಶ್ನೆಯನ್ನು ನೀವು ದೆಹಲಿ ಬಿಜೆಪಿ ನಾಯಕರನ್ನು ಕೇಳಬೇಕು. ಸಾಮೂಹಿಕ ರೀತಿಯಲ್ಲಿ ಬಿಜೆಪಿ ಹೈಕಮಾಂಡ್ ನಾಯಕರು ಈ ನಿರ್ಧಾರ ತೆಗೆದುಕೊಂಡಿದ್ದಾರೆ. ಈ ಕುರಿತು ಹೆಚ್ಚಿನ ಮಾಹಿತಿ ಬೇಕಿದ್ದಲ್ಲಿ ನೀವು ದೆಹಲಿ ನಾಯಕರನ್ನೇ ಪ್ರಶ್ನೆ ಮಾಡಬೇಕು ಎಂದು ಉತ್ತರಿಸಿದ್ದಾರೆ.

ರಾವತ್ ಕಾರ್ಯ ವೈಖರಿ ವಿರುದ್ಧ ಹೈಕಮಾಂಡ್‌ಗೆ ಕೆಲವು ಬಿಜೆಪಿ ನಾಯಕರೇ ದೂರು ಸಲ್ಲಿಸಿದ್ದರು. ಈ ಹಿನ್ನೆಲೆ ರಮಣ್ ಸಿಂಗ್ ಹಾಗೂ ದುಷ್ಯಂತ್ ಸಿಂಗ್ ಸಮಿತಿಯು ಎಲ್ಲಾ ಶಾಸಕರ ಅಭಿಪ್ರಾಯ ಸಂಗ್ರಹಿಸಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರಿಗೆ ವರದಿ ಸಲ್ಲಿಸಿತ್ತು.

English summary
Why Trivendra Singh Rawat Resigned For Uttarakhand CM Seat? Read Here.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X