ಬೊಫೋರ್ಸ್ ಹಗರಣದ ತನಿಖೆ ಮುಂದುವರೆಸಲಿದೆ ಸಿಬಿಐ
ನವದೆಹಲಿ, ಸೆಪ್ಟೆಂಬರ್ 27 : ಬೊಫೋರ್ಸ್ ಹಗರಣದ ತನಿಖೆಯನ್ನು ಮುಂದುವರೆಸುವುದಾಗಿ ಸಿಬಿಐ ಹೇಳಿದೆ. ಸಂಸತ್ತಿನ ಸಾರ್ವಜನಿಕ ಲೆಕ್ಕಪತ್ರ ಸಮಿತಿಗೆ ಈ ಕುರಿತು ಸಿಬಿಐ ಮಾಹಿತಿ ನೀಡಿದ್ದು, ತನಿಖೆ ಮುಂದುವರೆಸುವ ಬಗ್ಗೆ ಸುಪ್ರೀಂಕೋರ್ಟ್ ಒಪ್ಪಿಗೆ ಪಡೆಯಲಾಗುತ್ತದೆ ಎಂದು ಹೇಳಿದೆ.
ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಬೊಪೋರ್ಸ್ ಹಗರಣದ ಬಗ್ಗೆ ಚರ್ಚೆ ನಡೆದಿತ್ತು. ಪ್ರಮುಖ ಪ್ರತಿಪಕ್ಷವಾದ ಕಾಂಗ್ರೆಸ್ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಲು ಹಗರಣದ ಬಗ್ಗೆ ಮಾಹಿತಿ ತಿಳಿಸಲಾಗಿತ್ತು. ಈ ಬಗ್ಗೆ ಸಾಕಷ್ಟು ಚರ್ಚೆ ನಡೆದಿತ್ತು.

ಸಂಸತ್ತಿನ ಸಾರ್ವಜನಿಕ ಲೆಕ್ಕಪತ್ರ ಸಮಿತಿ (ಪಿಎಸಿ) ಇಂದು ಸಭೆ ಸೇರಲಿದೆ. ಲೋಕಸಭೆ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಈ ಸಮಿತಿಯ ಅಧ್ಯಕ್ಷರು. ಸಿಬಿಐ ಪಿಎಸಿಗೆ ಹಗರಣದ ತನಿಖೆ ಮುಂದುವರೆಸುವ ಕುರಿತು ಬರೆದಿರುವ ಪತ್ರದ ಕುರಿತು ಇಂದಿನ ಸಭೆಯಲ್ಲಿ ಚರ್ಚೆ ನಡೆಯುವ ಸಾಧ್ಯತೆ ಇದೆ.
ಇಂದಿನ ಸಭೆಯಲ್ಲಿ ಬಾಕಿ ಇರುವ ಲೆಕ್ಕಪತ್ರಗಳ ಬಗ್ಗೆ ಚರ್ಚೆ ನಡೆಯಲಿದೆ. ಬೊಫೋರ್ಸ್ ಹಗರಣದ ಒಂದು ಲೆಕ್ಕಪತ್ರದ ಕುರಿತು ಪರಿಶೀಲನೆ ನಡೆಯಲಿದ್ದು, ಆಗ ಸಿಬಿಐ ಬರೆದಿರುವ ಪತ್ರದ ಬಗ್ಗೆಯೂ ಚರ್ಚೆ ನಡೆಯಲಿದೆ ಎಂದು ನಿರೀಕ್ಷಿಸಲಾಗಿದೆ.
After so many years the govt is bringing up bofors issue again, it is politically motivated to defame Cong: Mallikarjun Kharge, PAC Chairman pic.twitter.com/8raCDeIswg
— ANI (@ANI) September 27, 2017
2017ರ ಜುಲೈನಲ್ಲಿ ಬಿಜೆಡಿ ಸಂಸದ ಭ್ರತೃಹರಿ ಮಹತಾಬ್ ನೇತೃತ್ವದ ಸಾರ್ವಜನಿಕ ಲೆಕ್ಕಪತ್ರ ಸಮಿತಿಯ ರಕ್ಷಣಾ ಉಪ ಸಮಿತಿ ಬೊಫೋರ್ಸ್ ಹಗರಣದ ಮರು ತನಿಖೆಗೆ ಶಿಫಾರಸು ಮಾಡಿತ್ತು. ಆದರೆ, ಸಿಬಿಐ ಉಪ ಸಮಿತಿಗೆ ಸಿಬಿಐಗೆ ಶಿಫಾರಸು ಮಾಡುವ ಅಧಿಕಾರ ಇಲ್ಲ ಎಂದು ಸ್ಪಷ್ಟಪಡಿಸಿತ್ತು.
ಕೇಂದ್ರ ಸರ್ಕಾರ ಅಥವ ಸುಪ್ರೀಂಕೋರ್ಟ್ ಆದೇಶ ನೀಡಿದರೆ ಮಾತ್ರ ಮರು ತನಿಖೆ ನಡೆಸಲಾಗುತ್ತದೆ ಎಂದು ಸಿಬಿಐ ಹೇಳಿತ್ತು. ಈಗ ಸುಪ್ರೀಂಕೋರ್ಟ್ ತನಿಖೆ ಮುದುವರೆಸುವುದಾಗಿ ಹೇಳಿದ್ದು, ಅನುಮತಿಗಾಗಿ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಲಿದೆ.
-
Bagalkote: ಕೃಷ್ಣ ಮೇಲ್ದಂಡೆ ಯೋಜನೆ ವಿಳಂಬಕ್ಕೆ ಕಾಂಗ್ರೆಸ್ಸೇ ಕಾರಣ: ವಿವರ ಬಿಚ್ಚಿಟ್ಟ ಬಸವರಾಜ ಬೊಮ್ಮಾಯಿ -
ಕೇರಳದಲ್ಲಿ ಬದಲಾವಣೆಯ ಪರ್ವ ಆರಂಭ: ಅಭಿವೃದ್ಧಿಗಾಗಿ ಜನ ಕಾಂಗ್ರೆಸ್ ಕೈಹಿಡಿಯಲಿದ್ದಾರೆ-ಡಿ.ಕೆ.ಶಿವಕುಮಾರ್ ಭವಿಷ್ಯ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ












Click it and Unblock the Notifications