ಶ್ರಮಿಕ್ ರೈಲು ಒದಗಿಸಲು ಸಿದ್ಧ; ಭಾರತೀಯ ರೈಲ್ವೆ

ನವದೆಹಲಿ, ಜೂನ್ 09 : ರಾಜ್ಯಗಳು ಬೇಡಿಕೆ ಸಲ್ಲಿಸಿದರೆ ವಲಸೆ ಕಾರ್ಮಿಕರು ತವರು ರಾಜ್ಯಕ್ಕೆ ಮರಳಲು ಶ್ರಮಿಕ್ ವಿಶೇಷ ರೈಲುಗಳನ್ನು ಒದಗಿಸಲಾಗುತ್ತದೆ ಎಂದು ಭಾರತೀಯ ರೈಲ್ವೆ ಘೋಷಣೆ ಮಾಡಿದೆ.

ಭಾರತೀಯ ರೈಲ್ವೆ ಬೋರ್ಡ್ ಮುಖ್ಯಸ್ಥ ವಿನೋದ್ ಕುಮಾರ್ ಯಾದವ್ ಎಲ್ಲಾ ರಾಜ್ಯಗಳಿಗೆ ಮಂಗಳವಾರ ಈ ಕುರಿತು ಪತ್ರ ಬರೆದಿದ್ದಾರೆ. "ಬೇಡಿಕೆ ಸಲ್ಲಿಸಿದ 24 ಗಂಟೆಯೊಳಗೆ ರೈಲು ನೀಡಲಾಗುತ್ತದೆ" ಎಂದು ತಿಳಿಸಿದೆ.

ಮಂಗಳವಾರ ಸುಪ್ರೀಂಕೋರ್ಟ್ ವಸಲೆ ಕಾರ್ಮಿಕರನ್ನು ತವರು ರಾಜ್ಯಕ್ಕೆ ವಾಪಸ್ ಕಳಿಸಬೇಕು ಎಂದು ಎಲ್ಲಾ ರಾಜ್ಯ ಸರ್ಕಾರಗಳಿಗೆ ನಿರ್ದೇಶನ ನೀಡಿದೆ. ಇದಕ್ಕಾಗಿ 15 ದಿನಗಳ ಕಾಲಾವಕಾಶವನ್ನು ಕೊಟ್ಟಿದೆ.

Will Continue To Provide Shramik Trains Says Indian Railways

ಮೇ ಮೊದಲ ವಾರದಿಂದ ಭಾರತೀಯ ರೈಲ್ವೆ ಶ್ರಮಿಕ್ ರೈಲುಗಳ ಸಂಚಾರವನ್ನು ನಡೆಸುತ್ತಿದೆ. ಲಾಕ್ ಡೌನ್ ಪರಿಣಾಮ ವಿವಿಧ ರಾಜ್ಯದಲ್ಲಿ ಸಿಲುಕಿದ್ದ ವಲಸೆ ಕಾರ್ಮಿಕರು ಈ ರೈಲುಗಳ ಮೂಲಕ ತವರು ರಾಜ್ಯಕ್ಕೆ ವಾಪಸ್ ಆಗುತ್ತಿದ್ದಾರೆ.

4374 ಶ್ರಮಿಕ್ ರೈಲುಗಳು ಇದುವರೆಗೂ ಸಂಚಾರ ನಡೆಸಿವೆ ಎಂದು ಭಾರತೀಯ ರೈಲ್ವೆ ಹೇಳಿದೆ. ಶ್ರಮಿಕ್ ರೈಲುಗಳಿಗೆ ಶೇ 85ರಷ್ಟು ವೆಚ್ಚವನ್ನು ಕೇಂದ್ರ ಸರ್ಕಾರ ಭರಿಸುತ್ತಿದೆ. ಉಳಿದ ವೆಚ್ಚವನ್ನು ರಾಜ್ಯ ಸರ್ಕಾರಗಳು ನೀಡಬೇಕಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+