• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಮೋದಿ ಅಲೆ ರಾಜಸ್ಥಾನದಲ್ಲಿ ಬಿಜೆಪಿಯನ್ನು ಗೆಲ್ಲಿಸಲಿದೆಯೇ?

|

ಜೈಪುರ, ನವೆಂಬರ್ 13 : ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ವರ್ಚಸ್ಸು ರಾಜಸ್ಥಾನದಲ್ಲಿ ಬಿಜೆಪಿಯನ್ನು ಗೆಲ್ಲಿಸಲಿದೆಯೇ?. ರಾಜಸ್ಥಾನದ 200 ವಿಧಾನಸಭಾ ಕ್ಷೇತ್ರಕ್ಕೆ ಡಿಸೆಂಬರ್ 7ರಂದು ಚುನಾವಣೆ ನಡೆಯಲಿದೆ.

ರಾಜಸ್ಥಾನದಲ್ಲಿ ಬಿಜೆಪಿಯೇ ಅಧಿಕಾರದಲ್ಲಿದೆ. ಆದರೆ, ಆಡಳಿತ ವಿರೋಧಿ ಅಲೆ ಎದುರಿಸುತ್ತಿದೆ. ಈ ಬಾರಿಯ ಚುನಾವಣೆಯಲ್ಲಿಯೂ ಗೆದ್ದು, ಅಧಿಕಾರ ಹಿಡಿದರೆ, ಸತತ ಎರಡು ಚುನಾವಣೆಗಳನ್ನು ಗೆದ್ದಂತಾಗುತ್ತದೆ.

ರಾಜಸ್ಥಾನ ವಿಧಾನಸಭಾ ಚುನಾವಣೆ : ವಾಟ್ಸಪ್‌ನಲ್ಲಿ ಅಭ್ಯರ್ಥಿಗಳ ಪ್ರಚಾರ

ರಾಜಸ್ಥಾನ ಬಿಜೆಪಿ ನರೇಂದ್ರ ಮೋದಿ ಅವರ 10 ಸಮಾವೇಶಗಳನ್ನು ಹತ್ತು ದಿನದಲ್ಲಿ ಆಯೋಜನೆ ಮಾಡಿದೆ. ನವೆಂಬರ್ 23ರಂದು ಮೋದಿ ಅವರು ರಾಜ್ಯದಲ್ಲಿ ಮೊದಲ ಚುನಾವಣಾ ಪ್ರಚಾರ ಸಮಾವೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ರಾಜಸ್ಥಾನ ಚುನಾವಣೆ: ಮೋದಿ, ಶಾ, ಯೋಗಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡು!

ಡಿಸೆಂಬರ್ 7ರೊಳಗೆ ನರೇಂದ್ರ ಮೋದಿ ಅವರು 10 ಸಮಾವೇಶಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಮುಖ್ಯಮಂತ್ರಿ ವಸುಂಧರಾ ರಾಜೇ ಅವರ ಆಡಳಿತದ ವಿರುದ್ಧ ಜನರು ಅಸಮಾಧಾನಗೊಂಡಿದ್ದು, ಮೋದಿ ಅಲೆ ಬಿಜೆಪಿಯನ್ನು ಕಾಪಾಡಲಿದೆಯೇ? ಕಾದು ನೋಡಬೇಕು.

ಚುನಾವಣಾ ಹೊಸ್ತಿಲಲ್ಲಿ ಅಮಿತ್ ಶಾ- ವಸುಂಧರಾ ರಾಜೆ ಭೀಕರ ಮನಸ್ತಾಪ

ನವೆಂಬರ್ 23ರಂದು ನಡೆಯುವ ಸಮಾವೇಶದಲ್ಲಿ ನರೇಂದ್ರ ಮೋದಿ ಅವರ ಜೊತೆ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ಪಾಲ್ಗೊಳ್ಳಲಿದ್ದಾರೆ. ಅಮಿತ್ ಶಾ ಅವರು ರಾಜಸ್ಥಾನದಲ್ಲಿ 12 ಸಮಾವೇಶ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.

ರಾಜಸ್ಥಾನ ಚುನಾವಣೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ನಡುವಿನ ಪ್ರತಿಷ್ಠೆಯ ಹೋರಾಟ ಎಂದು ಬಿಂಬಿಸಲಾಗುತ್ತಿದೆ. ಆದರೆ, ಟಿಕೆಟ್ ಹಂಚಿಕೆ ವಿಚಾರದಲ್ಲಿ ಬಿಜೆಪಿ ವಿಳಂಬ ಮಾಡುತ್ತಿದ್ದು, ಕಾಂಗ್ರೆಸ್‌ಗೆ ಲಾಭವಾಗಲಿದೆಯೇ?.

ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಮತ್ತು ಅಮಿತ್ ಶಾ ನೇಮಿಸಿದ ತಂಡ ಅಭ್ಯರ್ಥಿಗಳ ಆಯ್ಕೆಗೆ ಸಮೀಕ್ಷೆ ನಡೆಸಿದೆ. ನವೆಂಬರ್ 16ಕ್ಕೆ ಪಕ್ಷ ಎಲ್ಲಾ ಕ್ಷೇತ್ರಗಳಿಗೂ ಅಭ್ಯರ್ಥಿಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ.

5 ರಾಜ್ಯಗಳ ವಿಧಾನಸಭಾ ಚುನಾವಣೆಗಳ ಪೈಕಿ ರಾಜಸ್ಥಾನದಲ್ಲಿಯೇ ಪ್ರಧಾನಿ ಮೋದಿ ಹೆಚ್ಚು ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ. ಪಕ್ಷ ಸಹ ಮೋದಿ ಅವರ ಸಮಾವೇಶದಿಂದಲೇ ಹೆಚ್ಚಿನ ಮತಗಳನ್ನು ಪಡೆಯಬಹುದು ಎಂಬ ನಿರೀಕ್ಷೆಯಲ್ಲಿದೆ.

English summary
Will the charisma of Prime Minister Narendra Modi work to bail out the Bharatiya Janata Party in Rajasthan to win election for the secound consecutive term where the party is facing the worst anti-incumbency.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X