ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಹುಲ್ ಪಟ್ಟಾಭಿಷೇಕ ತಾತ್ಕಾಲಿಕವಾಗಿ ಮುಂದೂಡಿಕೆ!

By ವಿಕಾಸ್ ನಂಜಪ್ಪ
|
Google Oneindia Kannada News

ನವದೆಹಲಿ, ನವೆಂಬರ್ 14 : ರಾಹುಲ್ ಗಾಂಧಿ ಅವರನ್ನು ಎಐಸಿಸಿ ಅಧ್ಯಕ್ಷರನ್ನಾಗಿ ಮಾಡುವ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಈ ನಿರ್ಧಾರವನ್ನು ಕೈಗೊಂಡಿದೆ.

ಗುಜರಾತ್ ಚುನಾವಣೆ, 70 ಅಭ್ಯರ್ಥಿಗಳ ಕಾಂಗ್ರೆಸ್ ಪಟ್ಟಿ ಸಿದ್ಧಗುಜರಾತ್ ಚುನಾವಣೆ, 70 ಅಭ್ಯರ್ಥಿಗಳ ಕಾಂಗ್ರೆಸ್ ಪಟ್ಟಿ ಸಿದ್ಧ

ಗುಜರಾತ್ ವಿಧಾನಸಭೆ ಚುನಾವಣೆಯ ಹಿನ್ನಲೆಯಲ್ಲಿ ಎಐಸಿಸಿ ಅಧ್ಯಕ್ಷರಾಗಿ ನೇಮಕ ಮಾಡುವ ಪ್ರಕ್ರಿಯೆ ಮುಂದೂಡಲಾಗಿದೆ. ಈಗ ರಾಹುಲ್ ಅವರನ್ನು ಅಧ್ಯಕ್ಷರಾಗಿ ನೇಮಿಸಿದರೆ ಕಾರ್ಯಕರ್ತರ ಗಮನ ಚುನಾವಣೆಯಿಂದ ಇತ್ತ ಹರಿಯಲಿದೆ ಎಂಬುವುದು ಕಾರಣವಾಗಿದೆ.

Will Rahul Gandhi become Congress chief? Not as yet

2017ರ ಅಂತ್ಯದೊಳಗೆ ರಾಹುಲ್ ಗಾಂಧಿ ಅವರನ್ನು ಕಾಂಗ್ರೆಸ್ ಅಧ್ಯಕ್ಷರನ್ನಾಗಿ ನೇಮಿಸುವ ಸಾಧ್ಯತೆ ಇದೆ. ಮೊದಲು ನವೆಂಬರ್ 19 ಅಥವ 20ರಂದು ರಾಹುಲ್ ಗಾಂಧಿ ಅವರನ್ನು ಅಧ್ಯಕ್ಷರನ್ನಾಗಿ ನೇಮಿಸಲಾಗುತ್ತದೆ ಎಂಬ ಸುದ್ದಿ ಹಬ್ಬಿತ್ತು.

ವರ್ಷಾಂತ್ಯಕ್ಕೆ ಕಾಂಗ್ರೆಸ್ ಪಕ್ಷದ ಆಂತರಿಕ ಮಟ್ಟದ ಚುನಾವಣೆಗಳು ಮುಕ್ತಾಯಗೊಳ್ಳಲಿದ್ದು, ಅದರ ಬಳಿಕ ಅಧ್ಯಕ್ಷರ ನೇಮಕದ ಬಗ್ಗೆ ಚಿಂತನೆ ನಡೆಸಲು ಕಾರ್ಯಕಾರಿ ಸಮಿತಿ ನಿರ್ಧರಿಸಿದೆ.

ಬಿಜೆಪಿ ಏನಾದರೂ ಹೇಳಿಕೊಳ್ಳಲಿ, ನಾನು ಶಿವನ ಭಕ್ತ: ರಾಹುಲ್ ಗಾಂಧಿಬಿಜೆಪಿ ಏನಾದರೂ ಹೇಳಿಕೊಳ್ಳಲಿ, ನಾನು ಶಿವನ ಭಕ್ತ: ರಾಹುಲ್ ಗಾಂಧಿ

ಹಿಮಾಚಲ ಪ್ರದೇಶ ಮತ್ತು ಗುಜರಾತ್ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟಗೊಳ್ಳುವ ಮೊದಲು ರಾಹುಲ್ ಗಾಂಧಿ ಅವರನ್ನು ನೇಮಕ ಮಾಡಬೇಕು. ಫಲಿತಾಂಶ ಪ್ರಕಟವಾದ ಬಳಿಕ ನೇಮಕ ಮಾಡಿದರೆ ತಪ್ಪು ಸಂದೇಶ ರವಾನೆ ಮಾಡಿದಂತಾಗುತ್ತದೆ ಎಂಬ ವಾದವೂ ಇದೆ.

ಡಿಸೆಂಬರ್ 9 ಮತ್ತು 14ರಂದು ಗುಜರಾತ್ ವಿಧಾನಸಭೆ ಚುನಾವಣೆ ನಡೆಯಲಿದೆ. ಡಿಸೆಂಬರ್ 18ರಂದು ಫಲಿತಾಂಶ ಪ್ರಕಟಗೊಳ್ಳಲಿದೆ.

English summary
Rahul Gandhi’s elevation as the president of the Congress party has been put on hold yet again. First and foremost there is no indication what so ever about a possible Congress Working Committee meeting at which the elevation was to take place.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X