Narendra Modi: ಮೋದಿ ಜಸ್ಟ್‌ ಪಾಸ್;‌ ಗೆಲುವು, ಸೋಲು ರಾಜಕೀಯದ ಭಾಗ, ನಂಬರ್ ಗೇಮ್ ಮುಂದುವರಿಯುತ್ತೆ: ಮೋದಿ

ನವದೆಹಲಿ, ಜೂನ್‌ 05: ಪ್ರಧಾನಿ ನರೇಂದ್ರ ಮೋದಿ ಅವರು ಪ್ರಸಕ್ತ ಸಾಲಿನ ಕೊನೆಯ ಸಚಿವ ಸಂಪುಟ ಸಭೆಯಲ್ಲಿ ಸೋಲು-ಗೆಲುವು ರಾಜಕೀಯದ ಭಾಗ, ಸಂಖ್ಯೆಗಳ ಆಟ ಮುಂದುವರೆಯುತ್ತದೆ ಎಂದು ಲೋಕಸಭಾ ಚುನಾವಣಾ ಫಲಿತಾಂಶದ ಕುರಿತು ಮಾತನಾಡಿದ್ದಾರೆ.

ಪ್ರಸಕ್ತ ಸಾಲಿನ ಕೊನೆಯ ಸಂಪುಟ ಸಭೆಯಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಸೋಲು-ಗೆಲುವು ರಾಜಕೀಯದ ಭಾಗ ಎಂದು ಹೇಳಿದ್ದಾರೆ. ಎನ್‌ಡಿಎ ಮೂರನೇ ಬಾರಿಗೆ ಸರ್ಕಾರ ರಚಿಸಲು ಹಕ್ಕು ಸಾಧಿಸಲಿದೆ. ಈ ಫಲಿತಾಂಶ ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವದ ಗೆಲುವು. 2014 ರಲ್ಲಿ 282 ಮತ್ತು 2019 ರ ಲೋಕಸಭಾ ಚುನಾವಣೆಯಲ್ಲಿ 303 ಸ್ಥಾನಗಳನ್ನು ಗೆದ್ದಿರುವ ಬಿಜೆಪಿ ಈ ಬಾರಿ 240 ಸ್ಥಾನಗಳನ್ನು ಗೆದ್ದಿದೆ. 272 ಸ್ಥಾನಗಳು ಬಹುಮತಕ್ಕೆ ಬೇಕಾಗಿದ್ದು ಬಿಜೆಪಿಗೆ 32 ಸ್ಥಾನಗಳ ಕೊರತೆಯಿದೆ. ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ(ಎನ್‌ ಡಿಎ) ಸದಸ್ಯರು ಗೆದ್ದಿರುವ 53 ಸ್ಥಾನಗಳ ಮೇಲೆ ಸರ್ಕಾರ ರಚನೆ ಅವಲಂಬಿತವಾಗಿದೆ.

Winning Losing Part Of Politics Numbers Game Goes On Says PM Modi

ಕಳೆದ 10 ವರ್ಷಗಳಿಂದ ನಾವು ಉತ್ತಮ ಕೆಲಸ ಮಾಡಿದ್ದೇವೆ. ನಾವು ಅದನ್ನು ಮುಂದುವರಿಸುತ್ತೇವೆ ಎಂದು ಪ್ರಧಾನಿ ಮೋದಿ ಕ್ಯಾಬಿನೆಟ್ ಸಭೆಯಲ್ಲಿ ಎನ್‌ಡಿಎ ನಾಯಕರಿಗೆ ಹೇಳಿದ್ದಾರೆ. ಎನ್‌ಡಿಎ ಮೂರನೇ ಬಾರಿಗೆ ಸರ್ಕಾರ ರಚಿಸಲು ಹಕ್ಕು ಸಾಧಿಸಲಿದೆ. ಈ ಫಲಿತಾಂಶ ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವದ ಗೆಲುವು. ಗೆಲುವು ಮತ್ತು ಸೋಲು ರಾಜಕೀಯದ ಭಾಗವಾಗಿದೆ. ಸಂಖ್ಯೆಗಳ ಆಟ ಮುಂದುವರಿಯುತ್ತದೆ ಎಂದು ಮೋದಿ ಹೇಳಿದ್ದಾರೆ.

ಇನ್ನೂ ಈ ವೇಳೆ ಕಳೆದ 10 ವರ್ಷಗಳಲ್ಲಿ ಅತ್ಯುತ್ತಮ ಕೊಡುಗೆ ನೀಡಿದ ಕೇಂದ್ರ ಸಚಿವರಿಗೆ ಧನ್ಯವಾದ ಅರ್ಪಿಸಿದ ನರೇಂದ್ರ ಮೋದಿ,ನೀವೆಲ್ಲರೂ ತುಂಬಾ ಶ್ರಮಿಸಿದ್ದೀರಿ ಎಂದು ಸಂಪುಟದ ಸದಸ್ಯರಿಗೆ ಹೇಳಿದ್ದಾರೆ. ಸಭೆಯ ನಂತರ ರಾಜೀನಾಮೆ ಸಲ್ಲಿಸಲು ರಾಷ್ಟ್ರಪತಿ ಭವನಕ್ಕೆ ತೆರಳಿದ ಮೋದಿ ಅವರು ಶನಿವಾರ ನೂತನ ಅವಧಿಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ತಿಳಿದು ಬಂದಿದೆ.

ರಾಷ್ಟ್ರಪತಿಗಳು ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ. ಹೊಸ ಸರ್ಕಾರ ಅಧಿಕಾರ ಸ್ವೀಕರಿಸುವವರೆಗೆ ಮುಂದುವರಿಯಲು ನರೇಂದ್ರ ಮೋದಿ ಮತ್ತು ಮಂತ್ರಿ ಮಂಡಳಿಗೆ ವಿನಂತಿಸಿದ್ದಾರೆ" ಎಂದು ರಾಷ್ಟ್ರಪತಿ ಭವನ ಹೇಳಿಕೆಯಲ್ಲಿ ತಿಳಿಸಿದೆ. ಪ್ರಸ್ತುತ 17ನೇ ಲೋಕಸಭೆಯ ಅವಧಿ ಜೂನ್ 16ಕ್ಕೆ ಕೊನೆಗೊಳ್ಳಲಿದೆ. 2019 ರಲ್ಲಿ 52 ಸ್ಥಾನ ಗಳಿಸಿದ್ದ ಕಾಂಗ್ರೆಸ್ ಈ ಚುನಾವಣೆಯಲ್ಲಿ 99 ಸ್ಥಾನಗಳನ್ನು ಗೆದ್ದುಕೊಂಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+