• search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ನವೆಂಬರ್ 29 ರಿಂದ ಡಿಸೆಂಬರ್ 23ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ

|
Google Oneindia Kannada News

ನವದೆಹಲಿ ನವೆಂಬರ್ 9: ಸಂಸತ್ತಿನ ಚಳಿಗಾಲದ ಅಧಿವೇಶನ ನವೆಂಬರ್ 29 ರಿಂದ ಆರಂಭವಾಗಲಿದ್ದು, ಡಿಸೆಂಬರ್ 23 ರಂದು ಕೊನೆಗೊಳ್ಳಲಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಅಧ್ಯಕ್ಷತೆಯಲ್ಲಿ ನಡೆದ ರಾಜಕೀಯ ವ್ಯವಹಾರಗಳ ಸಂಪುಟ ಸಮಿತಿ (ಸಿಸಿಪಿಎ) ಸಭೆ ಸೋಮವಾರ ನಿರ್ಧರಿಸಿದೆ. ಹಿಂದಿನ ಅಧಿವೇಶನದಂತೆ ರಾಜ್ಯಸಭೆ ಮತ್ತು ಲೋಕಸಭೆ ಎರಡೂ ಸದನಗಳು ಕೋವಿಡ್ -19 ಮಾರ್ಗಸೂಚಿಗಳಿಗೆ ಅನುಗುಣವಾಗಿ ಏಕಕಾಲದಲ್ಲಿ ನಡೆಯಲಿದೆ. ಉಭಯ ಸದನಗಳ ಸದಸ್ಯರು ಸಾಮಾಜಿಕ ಅಂತರದ ಮಾನದಂಡಗಳನ್ನು ಅನುಸರಿಸುವ ನಿರೀಕ್ಷೆಯಿದೆ. ಪ್ರತಿ ಸದನದಲ್ಲಿ ಸುಮಾರು 20 ಸಭೆಗಳು ನಡೆಯಲಿವೆ ಮತ್ತು ಈ ವರ್ಷದ ಸಾಮಾನ್ಯ ಬಜೆಟ್‌ನಲ್ಲಿ ಘೋಷಿಸಲಾದ ಸಾರ್ವಜನಿಕ ವಲಯದ ಬ್ಯಾಂಕ್‌ಗಳ ಖಾಸಗೀಕರಣಕ್ಕೆ ಅನುಕೂಲವಾಗುವಂತೆ ಸರ್ಕಾರವು ಮಸೂದೆಗಳನ್ನು ಪರಿಚಯಿಸುವ ಸಾಧ್ಯತೆಯಿದೆ.

ಸಾರ್ವತ್ರಿಕ ಪಿಂಚಣಿ ವ್ಯಾಪ್ತಿಯನ್ನು ಖಚಿತಪಡಿಸಿಕೊಳ್ಳಲು ರಾಷ್ಟ್ರೀಯ ಪಿಂಚಣಿ ವ್ಯವಸ್ಥೆ ಟ್ರಸ್ಟ್ ಅನ್ನು ಪಿಎಫ್‌ಆರ್‌ಡಿಎಯಿಂದ ಬೇರ್ಪಡಿಸಲು ಅನುಕೂಲವಾಗುವಂತೆ ಪಿಂಚಣಿ ನಿಧಿ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರ (ಪಿಎಫ್‌ಆರ್‌ಡಿಎ) ಕಾಯಿದೆ, 2013 ಅನ್ನು ತಿದ್ದುಪಡಿ ಮಾಡಲು ಮಸೂದೆಯನ್ನು ಮಂಡಿಸುವ ಸಾಧ್ಯತೆಯಿದೆ. NDPS ಕಾಯಿದೆಯಲ್ಲಿ ಕಠಿಣ ಶಿಕ್ಷೆಯ ನಿಬಂಧನೆಗಳಿಗಾಗಿ ಸೆಪ್ಟೆಂಬರ್ 30 ರಂದು ಪ್ರಕಟಿಸಲಾದ ನಾರ್ಕೋಟಿಕ್ ಡ್ರಗ್ಸ್ ಮತ್ತು ಸೈಕೋಟ್ರೋಪಿಕ್ ಸಬ್‌ಸ್ಟಾನ್ಸ್ (ತಿದ್ದುಪಡಿ) ಸುಗ್ರೀವಾಜ್ಞೆ, 2021 ಅನ್ನು ಬದಲಿಸುವ ಮಸೂದೆಯನ್ನು ಚಳಿಗಾಲದ ಅಧಿವೇಶನದಲ್ಲಿ ಮಂಡಿಸಬಹುದು. ಜೊತೆಗೆ ಸರ್ಕಾರವು ಎರಡನೇ ಬ್ಯಾಚ್‌ನ 'ಅನುದಾನಕ್ಕಾಗಿ ಪೂರಕ ಬೇಡಿಕೆಗಳು' ಅನ್ನು ಮಂಡಿಸುವ ಸಾಧ್ಯತೆಯಿದೆ. ಇದು ಹಣಕಾಸು ಮಸೂದೆಯನ್ನು ಹೊರತುಪಡಿಸಿ ಹೆಚ್ಚುವರಿ ವೆಚ್ಚವನ್ನು ಕೈಗೊಳ್ಳಲು ಅನುಮತಿ ನೀಡುತ್ತದೆ.

ಹಣದುಬ್ಬರ, ಜಮ್ಮು ಮತ್ತು ಕಾಶ್ಮೀರದಲ್ಲಿ ನಾಗರಿಕರ ಹತ್ಯೆ ಮತ್ತು ಲಖಿಂಪುರ ಖೇರಿ ಘಟನೆಯ ವಿಷಯದ ಬಗ್ಗೆ ಪ್ರತಿಪಕ್ಷಗಳು ಪ್ರಶ್ನಿಸುವ ಮೂಲಕ ಅಧಿವೇಶನದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆಯೂ ಇದೆ. ಮೂರು ಕೃಷಿ ಕಾನೂನುಗಳ ವಿರುದ್ಧ ರೈತರ ಆಂದೋಲನವನ್ನು ಸಹ ಎತ್ತಬಹುದು. ಜೊತೆಗೆ ಪೆಟ್ರೋಲ್ - ಡೀಸೆಲ್ ಬೆಲೆ ಏರಿಕೆ, ಖಾದ್ಯ ತೈಲಗಳ ಬೆಲೆ ಏರಿಕೆ, ಕಾಶ್ಮೀರದಲ್ಲಿ ಜನ ಸಾಮಾನ್ಯರ ಮೇಲೆ ಉಗ್ರರ ದಾಳಿ ಸೇರಿದಂತೆ ಇತ್ತೀಚಿನ ಹಲವು ವಿದ್ಯಮಾನಗಳು ಸಂಸತ್‌ನಲ್ಲೂ ಪ್ರತಿಧ್ವನಿಸಲು ಸಜ್ಜಾಗಿವೆ.

ಈ ಹಿಂದೆ ನಡೆದ ಮುಂಗಾರು ಅಧಿವೇಶನದಲ್ಲೂ ವಿಪಕ್ಷಗಳು ಸರಕಾರದ ವಿರುದ್ಧ ಮುಗಿಬಿದ್ದಿದ್ದವು. ಪೆಗಾಸಸ್ ಬೇಹುಗಾರಿಕಾ ಆರೋಪ, ಹಣದುಬ್ಬರ ಹಾಗೂ ಕೃಷಿ ಕಾಯ್ದೆಗಳ ವಿರುದ್ಧ ಸರ್ಕಾರವನ್ನು ವಿಪಕ್ಷಗಳು ತರಾಟೆಗೆ ತೆಗೆದುಕೊಂಡಿದ್ದವು. ಬಿಜೆಪಿ ವಿರುದ್ಧ ವಿಪಕ್ಷಗಳ ಸಂಘಟಿತ ಹೋರಾಟದ ಹಿನ್ನೆಲೆಯಲ್ಲಿ ಮುಂಗಾರು ಅಧಿವೇಶನವು 2 ದಿನ ಮೊದಲೇ ಮೊಟಕುಗೊಂಡಿತ್ತು.

ಮುಂದಿನ ವರ್ಷ ಪಂಚರಾಜ್ಯಗಳ ಚುನಾವಣೆ ಇರುವ ಹಿನ್ನೆಲೆಯಲ್ಲಿ ಈ ಬಾರಿಯ ಚಳಿಗಾಲದ ಅಧಿವೇಶನ ಭಾರೀ ಮಹತ್ವ ಪಡೆದುಕೊಂಡಿದೆ. ಅದರಲ್ಲೂ ಉತ್ತರ ಪ್ರದೇಶ ಚುನಾವಣೆಯ ಹೊಸ್ತಿಲಲ್ಲಿ ಇರುವ ಹಿನ್ನೆಲೆಯಲ್ಲಿ ಚಳಿಗಾಲದ ಅಧಿವೇಶನ ಹಾಗೂ ಬಜೆಟ್ ಅಧಿವೇಶನ ಎರಡರಲ್ಲೂ ಅಲ್ಲಿನ ರಾಜಕೀಯ ವಿದ್ಯಮಾನಗಳು ಪ್ರತಿಧ್ವನಿಸುವ ಸಾಧ್ಯತೆ ಇದೆ.

   Cricket ಪ್ರೇಮಿಗಳ ಮನ ಗೆದ್ದ Rishab Pant ! | Oneindia Kannada

   ಕೋವಿಡ್​-19 ಸಾಂಕ್ರಾಮಿಕ ರೋಗದಿಂದಾಗಿ ಕಳೆದ ವರ್ಷ ಸಂಸತ್ತಿನ ಚಳಿಗಾಲದ ಅಧಿವೇಶನ ನಡೆಯಲಿಲ್ಲ. ಅಲ್ಲದೆ ಬಜೆಟ್ ಮತ್ತು ಮಾನ್ಸೂನ್ ಅಧಿವೇಶನಗಳನ್ನೂ ಮೊಟಕುಗೊಳಿಸಲು ಕೊರೋನಾ ಕಾರಣವಾಯಿತು. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಾರಥ್ಯದಲ್ಲಿ ನಡೆದ ಸಂಸದೀಯ ವ್ಯವಹಾರಗಳ ಸಂಪುಟ ಸಮಿತಿ ಸಭೆಯಲ್ಲಿ ಚಳಿಗಾಲದ ಅಧಿವೇಶನದ ದಿನಾಂಕ ನಿಗದಿ ಮಾಡಲಾಗಿದೆ. ನವೆಂಬರ್ 29 ರಿಂದ ಡಿಸೆಂಬರ್ 23ರವರೆಗೆ ಅಂದರೆ, 25 ದಿನಗಳ ಅವಧಿಗೆ ಅಧಿವೇಶನ ನಡೆಯಲಿದೆ. ಲೋಕಸಭೆ ಹಾಗೂ ರಾಜ್ಯಸಭಾ ಕಲಾಪಗಳು ಒಟ್ಟೊಟ್ಟಿಗೆ ನಡೆಯಲಿದ್ದು, ಉಭಯ ಸದನಗಳ ಸದಸ್ಯರು ಸಾಮಾಜಿಕ ಅಂತರ, ಮಾಸ್ಕ್ ಧಾರಣೆ ಸೇರಿದಂತೆ ಎಲ್ಲಾ ರೀತಿಯ ಕೋವಿಡ್ ನಿಯಮಾವಳಿ ಪಾಲನೆ ಮಾಡಿ ಅಧಿವೇಶನದಲ್ಲಿ ಭಾಗಿಯಾಗಬೇಕೆಂದು ಮಾಹಿತಿ ನೀಡಲಾಗಿದೆ.

   English summary
   The Winter Session of the Parliament will commence from November 29 and will end on December 23, chaired by Defence Minister Rajnath Singh, decided on Monday.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X