Parliament Winter Session: ಸಂಸತ್ತಿನ ಚಳಿಗಾಲದ ಅಧಿವೇಶನ ಇಂದಿನಿಂದ ಆರಂಭ: ಮಾಧ್ಯಮಗಳಿಗೆ ಮೋದಿ ಮಾಹಿತಿ

ನವದೆಹಲಿ, ಡಿಸೆಂಬರ್‌ 01: ಸಂಸತ್ತಿನ ಚಳಿಗಾಲದ ಅಧಿವೇಶನ ಇಂದು (ಸೋಮವಾರ) ಆರಂಭವಾಗಲಿದೆ. ಈ ಅಧಿವೇಶನಕ್ಕೆ ಆಡಳಿತ ಮತ್ತು ವಿರೋಧ ಪಕ್ಷಗಳು ತಮ್ಮದೇ ಆದ ರೀತಿಯಲ್ಲಿ ತಯಾರಿ ನಡೆಸಿದ್ದು, ವಿಪಕ್ಷಗಳು ಮತದಾರರ ಪಟ್ಟಿ ಪರಿಷ್ಕರಣೆಯನ್ನು ತಮ್ಮ ಪ್ರಮುಖ ಅಸ್ತ್ರವಾಗಿಸಿಕೊಂಡಿದ್ದರೆ, ಆಡಳಿತ ಪಕ್ಷವು ನ್ಯಾಷನಲ್‌ ಹೆರಾಲ್ಡ್‌ ಪ್ರಕರಣವನ್ನು ಬಳಸಲಿದೆ ಎಂದು ನೀರಿಕ್ಷಿಸಲಾಗಿದೆ.

ಡಿಸೆಂಬರ್ 1 ರಂದು (ಸೋಮವಾರ) ಬೆಳಿಗ್ಗೆ 10:00 ಗಂಟೆಗೆ ಹದಿನೆಂಟನೇ ಲೋಕಸಭೆಯ ಅಧಿವೇಶನ ಆರಂಭಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ಮಾನ್ಯತೆ ಪಡೆದ ಮಾಧ್ಯಮ ಪ್ರತಿನಿಧಿಗಳಿಗೆ ಸಂಸತ್ ಭವನದ ಹನ್ಸ್ ದ್ವಾರದಲ್ಲಿ ಮಾಹಿತಿ ನೀಡಲಿದ್ದಾರೆ. ಸಂಸತ್ತಿನ ಚಳಿಗಾಲದ ಅಧಿವೇಶನ ಡಿಸೆಂಬರ್ 1 ರಂದು ಪ್ರಾರಂಭವಾಗಲಿದ್ದು, ಡಿಸೆಂಬರ್ 19 ರವರೆಗೆ ನಡೆಯಲಿದೆ.

Winter Session of Parliament to begin PM Modi to brief media at 10 00 am

ಮೂಲಗಳ ಪ್ರಕಾರ, ಸಂಸತ್ತು ಹಲವಾರು ಶಾಸಕಾಂಗ ಮತ್ತು ಹಣಕಾಸು ವ್ಯವಹಾರಗಳನ್ನು ಕೈಗೆತ್ತಿಕೊಳ್ಳಲು ಸಜ್ಜಾಗಿದ್ದು, ರಾಷ್ಟ್ರಪತಿಗಳು ಆರೋಗ್ಯ ಭದ್ರತೆ ಮತ್ತು ರಾಷ್ಟ್ರೀಯ ಭದ್ರತಾ ಸೆಸ್ ಮಸೂದೆ, 2025, ಮಣಿಪುರ ಸರಕು ಮತ್ತು ಸೇವಾ ತೆರಿಗೆ (ಎರಡನೇ ತಿದ್ದುಪಡಿ) ಮಸೂದೆ 2025, ಮತ್ತು ಕೇಂದ್ರ ಅಬಕಾರಿ (ತಿದ್ದುಪಡಿ) ಮಸೂದೆ, 2025 ಸೇರಿದಂತೆ ಪ್ರಮುಖ ಮಸೂದೆಗಳನ್ನು ಪರಿಚಯಿಸಲು ಶಿಫಾರಸು ಮಾಡುತ್ತಾರೆ ಎನ್ನಲಾಗಿದೆ.

ಈ ಬಾರಿಯ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ, ಪಶ್ಚಿಮ ಬಂಗಾಳದಲ್ಲಿ ನಡೆಸಲು ಉದ್ದೇಶಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ ಬಗ್ಗೆ ಪ್ರತಿಪಕ್ಷಗಳು ಚರ್ಚೆಗೆ ಪಟ್ಟು ಹಿಡಿಯಲಿವೆ. ಪಶ್ಚಿಮ ಬಂಗಾಳದಲ್ಲಿ ಓರ್ವ ಚುನಾವಣಾಧಿಕಾರಿಯ ಸಾವು, ಸಂಸತ್ತಿನಲ್ಲಿ ಪ್ರತಿಧ್ವನಿಸಲಿರುವುದು ನಿಶ್ಚಿತವಾಗಿದೆ. ಅದರಲ್ಲೂ ಪ್ರಮುಖವಾಗಿ ಟಿಎಂಸಿ ಈ ಪ್ರಕರಣದ ಬಗ್ಗೆ ಏರು ಧ್ವನಿಯಲ್ಲಿ ಮಾತನಾಡಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+