ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಂಸತ್ತಿನಲ್ಲಿ 'ನಾಯಿ' ವಿವಾದ: ಕ್ಷಮೆಗೆ ಬಿಜೆಪಿ ಪಟ್ಟು, ಕ್ಷಮೆ ಕೇಳುವ ಅಗತ್ಯವಿಲ್ಲ ಎಂದ ಮಲ್ಲಿಕಾರ್ಜುನ ಖರ್ಗೆ

|
Google Oneindia Kannada News

ನವದೆಹಲಿ, ಡಿ. 20: ಸಂಸತ್ತಿನ ಚಳಿಗಾಲದ ಅಧಿವೇಶನದ 11 ನೇ ದಿನ ಮಂಗಳವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಾಯಿ ಹೇಳಿಕೆಗೆ ಕ್ಷಮೆ ಯಾಚಿಸಬೇಕು ಎಂದು ಬಿಜೆಪಿ ಪಟ್ಟು ಹಿಡಿದ ಕಾರಣ ಭಾರೀ ಗದ್ದಲ ನಡೆದಿದೆ.

ಸೋಮವಾರ ರಾಜಸ್ಥಾನದ ಭಾರತ್ ಜೋಡೋ ಯಾತ್ರೆಯ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ್ದ ಮಲ್ಲಿಕಾರ್ಜುನ ಖರ್ಗೆ ಅವರು, 'ಮನೆಯಲ್ಲಿರುವ ನಿಮ್ಮ ನಾಯಿಯೂ ದೇಶಕ್ಕಾಗಿ ಸತ್ತಿದೆಯೇ..?" ಎಂದು ಬಿಜೆಪಿಗರನ್ನು ಕುರಿತು ಟಿಖಿಸಿದ್ದರು. ಈ ಹೇಳಿಕೆಗೆ ಬಿಜೆಪಿ ಆಕ್ಷೇಪ ವ್ಯಕ್ತಪಡಿಸಿದ್ದು, ಸಂಸತ್ತಿನಲ್ಲಿ ಕ್ಷಮೆಯಾಚಿಸಬೇಕು ಎಂದು ಪಟ್ಟು ಹಿಡಿದಿದೆ.

 ಡಿಸೆಂಬರ್ 24ರಂದು ದೆಹಲಿ ಪ್ರವೇಶಿಸಲಿರುವ ಭಾರತ್ ಜೋಡೋ ಯಾತ್ರೆ: ಭಾಗಿಯಾಗಲಿರುವ ಗಣ್ಯರು ಯಾರು? ಡಿಸೆಂಬರ್ 24ರಂದು ದೆಹಲಿ ಪ್ರವೇಶಿಸಲಿರುವ ಭಾರತ್ ಜೋಡೋ ಯಾತ್ರೆ: ಭಾಗಿಯಾಗಲಿರುವ ಗಣ್ಯರು ಯಾರು?

ಕೇಂದ್ರ ಸಚಿವ ಪಿಯೂಷ್ ಗೋಯಲ್ ಮತ್ತು ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರು ಇದೇ ವಿಚಾರವಾಗಿ ತೀವ್ರ ವಾಗ್ವಾದದಲ್ಲಿ ತೊಡಗಿದ್ದರಿಂದ ರಾಜ್ಯಸಭೆ ಬಿರುಸಿನ ಆರಂಭವನ್ನು ಕಂಡಿತು.

Winter Session: Row over Congress chief Kharges Dog Remark

ಸ್ವಾತಂತ್ರ್ಯ ಚಳವಳಿಯಲ್ಲಿ ಕಾಂಗ್ರೆಸ್‌ನ ಹಲವು ನಾಯಕರು ತಮ್ಮ ಪ್ರಾಣ ತ್ಯಾಗ ಮಾಡಿದ್ದಾರೆ ಆದರೆ, ಬಿಜೆಪಿ ಯಾರನ್ನೂ ಕಳೆದುಕೊಂಡಿಲ್ಲ ಎಂದು ಮಮಲ್ಲಿಕಾರ್ಜುನ ಖರ್ಗೆ ಸೋಮವಾರ ಹೇಳಿಕೆ ನೀಡಿದ್ದರು.

'ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದು ಕಾಂಗ್ರೆಸ್, ಇಂದಿರಾಗಾಂಧಿ, ರಾಜೀವ್ ಗಾಂಧಿ ಸೇರಿದಂತೆ ಅದರ ಕಾಂಗ್ರೆಸ್ ನಾಯಕರು ಪ್ರಾಣ ತ್ಯಾಗ ಮಾಡಿದ್ದಾರೆ. ಆದರೇ, ನೀವೇನು ಮಾಡಿದ್ದಿರಿ...? ನಿಮ್ಮ ಮನೆಯಲ್ಲಿರುವ ನಾಯಿಯಾದರೂ ದೇಶಕ್ಕಾಗಿ ಸತ್ತಿದೆಯೇ..? ಆದರೂ, ಅವರು ದೇಶಭಕ್ತರೆಂದು ಹೇಳಿಕೊಳ್ಳುತ್ತಾರೆ. ನಾವು ಏನಾದರೂ ಹೇಳಿದರೆ ನಮ್ಮನ್ನು ದೇಶದ್ರೋಹಿ ಎಂದು ಕರೆಯುತ್ತಾರೆ" ಎಂದು ಕಾಂಗ್ರೆಸ್ ಅಧ್ಯಕ್ಷರು ರಾಜಸ್ಥಾನದ ಅಲ್ವಾರ್‌ನಲ್ಲಿ ಹೇಳಿದ್ದರು.

ಮಂಗಳವಾರ ಸಂಸತ್ತಿನಲ್ಲಿ ಕಲಾಪ ಆರಂಭವಾಗುತ್ತಿದ್ದಂತೆಯೇ ಬಿಜೆಪಿ ಕ್ಷಮೆಯಾಚಿಸುವಂತೆ ಪಟ್ಟು ಹಿಡಿದು ಪ್ರತಿಭಟನೆ ನಡೆಸಿತು. ಅಲ್ವಾರ್‌ನಲ್ಲಿ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಕ್ಕಾಗಿ ಮಲ್ಲಿಕಾರ್ಜುನ ಖರ್ಗೆ ಕ್ಷಮೆಯಾಚಿಸಬೇಕು ಎಂದು ಕೇಂದ್ರ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ರಾಜ್ಯಸಭೆಯಲ್ಲಿ ಆಗ್ರಹಿಸಿದರು.

ಈ ಗದ್ದಲ ಸದನದಲ್ಲಿ ಗೊಂದಲಕ್ಕೆ ಕಾರಣವಾಗುತ್ತಿದ್ದಂತೆ, ಉಪರಾಷ್ಟ್ರಪತಿ ಮತ್ತು ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನಕರ್ ಅವರು ಸಂಸತ್ತಿನ ಹೊರಗೆ ಈ ಹೇಳಿಕೆ ನೀಡಲಾಗಿದೆ ಎಂದು ಹೇಳಿದ್ದಾರೆ.

ಮಲ್ಲಿಕಾರ್ಕುನ ಖರ್ಗೆ ಕೂಡ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ಜೊತೆಗೆ "ರಾಜಸ್ಥಾನದ ಅಲ್ವಾರ್‌ನಲ್ಲಿ ಭಾರತ್ ಜೋಡೋ ಯಾತ್ರೆಯಲ್ಲಿ ನಾನು ಹೇಳಿದ್ದು ಸದನದ ಹೊರಗೆ. ಅದನ್ನು ಇಲ್ಲಿ ಚರ್ಚಿಸುವ ಅಗತ್ಯವಿಲ್ಲ. ನಾನು ಹೇಳಿದ್ದು ರಾಜಕೀಯವಾಗಿ ಸದನದ ಹೊರಗೆ, ಒಳಗೆ ಅಲ್ಲ. ಎರಡನೆಯದಾಗಿ, ಸ್ವಾತಂತ್ರ್ಯ ಹೋರಾಟದಲ್ಲಿ ಅವರ ಪಾತ್ರವಿಲ್ಲ ಎಂದು ನಾನು ಈಗಲೂ ಹೇಳಬಲ್ಲೆ" ಎಂದಿದ್ದಾರೆ.

English summary
Parliament Winter Session: A huge row in Parliament over Congress chief Mallikarjun Kharge's dog’ remarks. BJP demanded an apology, Mallikarjun Kharge Refuses. to know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X