• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ದೇಶದಲ್ಲಿ ದಿನಕ್ಕೆ 30 ಲಕ್ಷ ಮಂದಿಗೆ ಕೊರೊನಾ ಲಸಿಕೆ: ಇನ್ನೂ ಹೆಚ್ಚಲಿದೆ ಲಸಿಕೆ ವೇಗ

|

ನವದೆಹಲಿ, ಏಪ್ರಿಲ್ 7: ದೇಶದಲ್ಲಿ ನಿತ್ಯ 30 ಲಕ್ಷ ಮಂದಿಗೆ ಕೊರೊನಾ ಲಸಿಕೆ ನೀಡಲಾಗುತ್ತಿದ್ದು, ವೇಗ ಇನ್ನಷ್ಟು ಹೆಚ್ಚಲಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ವೇಗವಾಗಿ ಕೊರೊನಾ ಲಸಿಕೆ ನೀಡುವ ದೇಶಗಳಲ್ಲಿ ಭಾರತ ಮೊದಲ ಸ್ಥಾನದಲ್ಲಿದೆ. ಇನ್ನು ಭಾರತದಲ್ಲಿ ಒಂದೇ ದಿನ 12,08,329 ಮಂದಿಯನ್ನು ಕೊರೊನಾ ಪರೀಕ್ಷೆಗೊಳಪಡಿಸಲಾಗಿದ್ದು, ಈವರೆಗೂ ದೇಶದಲ್ಲಿ 25,14,39,598 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ದೇಶದಲ್ಲಿ ಮತ್ತೆ ಲಕ್ಷ ದಾಟಿದ ಕೊರೊನಾ; 1,15,736 ಹೊಸ ಪ್ರಕರಣ ದಾಖಲು

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಕೊರೊನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೊನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೊನಾ ವಾರಿಯರ್ಸ್‌ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಇದೀಗ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗುತ್ತಿದೆ.

ಇದರಂತೆ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 8,70,77,474 ಮಂದಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.

ಮಹಾರಾಷ್ಟ್ರದಲ್ಲಿ 55,469, ಛತ್ತೀಸ್‌ಗಢದಲ್ಲಿ 9921, ಕರ್ನಾಟಕದಲ್ಲಿ 6150 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ.

ಹೊಸ ಕೇಸ್ ಗಳು ಏರುಗತಿಯಲ್ಲಿರುವ ಕಾರಣ ದೇಶದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 8,43,473ಕ್ಕೆ ತಲುಪಿದೆ. ಒಂದೇ ದಿನ 59,856 ಹೊಸ ಪ್ರಕರಣಗಳು ಪತ್ತೆಯಾಗುವುದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 1,28,01,785ಕ್ಕೆ ಏರಿಕೆಯಾಗಿದೆ.

ಈ ನಡುವೆ ಕಳೆದ 24 ಗಂಟೆಗಳಲ್ಲಿ 59,856 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ 1,17,92,135ಕ್ಕೆ ತಲುಪಿದೆ. ದೇಶದಲ್ಲಿ ಕೊರೊನಾ ಲಸಿಕೆ ಪಡೆದ ಬಳಿಕವೂ ಕೊರೊನಾ ಸೋಂಕು ತಗುಲುತ್ತಿದ್ದು, ಈ ಕುರಿತು ಕೇಂದ್ರವು ಮಾಹಿತಿಯನ್ನು ಕಲೆ ಹಾಕುತ್ತಿದೆ. ಕೊರೊನಾ ಲಸಿಕೆ ಬಳಿಕವೂ ಯಾರಿಗೆ ಕೊರೊನಾ ತಗುಲುತ್ತದೋ ಅಂಥವರ ಮಾಹಿತಿಯನ್ನು ಪಡೆಯಲಿದೆ.

English summary
With greater than 30 lakh Covid-19 vaccine jabs administered in a day, India on Wednesday grew to become the quickest nation on the earth to vaccinate in opposition to coronavirus, as the federal government continues to scale the nationwide inoculation drive within the face of the rising variety of Covid-19 circumstances.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X