Women Reservation Bill: ಮಹಿಳೆಯರಿಗೆ ಮೋದಿ ಬಿಗ್ ಗಿಫ್ಟ್; ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಮಂಡನೆ!
ದೆಹಲಿ,ಸೆಪ್ಟೆಂಬರ್ 19: ಸಂಸತ್ತಿನ ವಿಶೇಷ ಅಧಿವೇಶನದ ಉಭಯ ಸದನಗಳ ಮುಂದೆ ಪ್ರಧಾನಿ ನರೇಂದ್ರ ಮೋದಿ ಅವರು ಮಹಿಳಾ ಮೀಸಲಾತಿ ಮಸೂದೆಯನ್ನ ಮಂಗಳವಾರ ಮಂಡಿಸಿದ್ದಾರೆ.
ಭಾರತದ ಹೊಸ ಸಂಸತ್ ನಲ್ಲಿ ನಡೆದ ಕಲಾಪದ ಮೊದಲ ದಿನವಾದ ಇಂದು ಮಹಿಳಾ ಮೀಸಲಾತಿ ಮಸೂದೆಯನ್ನು ಪ್ರಧಾನಿ ಮೋದಿ ಮಂಡಿಸಿದರು. ಇದನ್ನು ನಾರಿ ಶಕ್ತಿ ವಂದನ್ ಅಧಿನಿಯಂ ಎಂದು ಕರೆಯಲಾಗುವುದು. ಮಹಿಳಾ ಮೀಸಲಾತಿ ಮಸೂದೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಲೋಕಸಭೆಯಲ್ಲಿ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಮಂಡಿಸಿದ್ದು, ಈ ಬಗ್ಗೆ ಲೋಕಸಭೆಯಲ್ಲಿ ಚರ್ಚೆಗಳು ನಡೆಯಲಿವೆ. 1996 ರಲ್ಲಿ ಮಹಿಳಾ ಮೀಸಲಾತಿ ವಿಧೇಯಕ ಮಂಡಿಸಿದ್ದ ದೇವೇಗೌಡರು. ರಾಜಕೀಯ ಪಕ್ಷಗಳ ಇಚ್ಛಾಶಕ್ತಿಯ ಕೊರತೆಯಿಂದಾಗಿ ಈ ಮಸೂದೆ ಅಂಗೀಕಾರವಾಗಿರಲಿಲ್ಲ. ಲೋಕಸಭೆ ಹಾಗೂ ರಾಜ್ಯ ವಿಧಾನಸಭೆಗಳಲ್ಲಿ ಹೆಚ್ಚು ಪ್ರಾತಿನಿಧ್ಯ ನೀಡುವ ಉದ್ದೇಶದಿಂದ ಈ ಬಿಲ್ ಮಂಡಿಸಲಾಗಿದೆ.
ಇನ್ನೂ ಕಳೆದ 27 ವರ್ಷಗಳಲ್ಲಿ ಹಲವಾರು ಬಾರಿ ಮಸೂದೆಯನ್ನು ಮಂಡಿಸಲಾಗಿದೆ ಆದರೆ ಪದೇ ಪದೇ ಅದಕ್ಕೆ ಸಾಕಷ್ಟು ಅಡ್ಡಿಯಾಗುತ್ತಿದ್ದು, ಮಂಗಳವಾರ ನೂತನ ಸಂಸತ್ ಭವನದಲ್ಲಿ ನಡೆದ ಮೊದಲ ದಿನದ ಕಲಾಪದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮಹಿಳಾ ಮೀಸಲಾತಿ ಮಸೂದೆಯನ್ನ ಪ್ರಸ್ತಾಪಿಸಿದ್ದಾರೆ.
ಮಹಿಳಾ ಮೀಸಲಾತಿ ಮಸೂದೆಗೆ ದೇವರು ಅವರನ್ನು ಆಯ್ಕೆ ಮಾಡಿದ್ದಾನೆ ಎಂದು ಮೋದಿ ಹೇಳಿದ್ದಾರೆ. ಹಿಂದಿನ ಸರ್ಕಾರಗಳ ವಿರುದ್ಧ ವಾಗ್ದಾಳಿ ನಡೆಸಿದ ಪ್ರಧಾನಿ ಮೋದಿ, ಅವರಿಗೆ ಮೀಸಲಾತಿ ಮಸೂದೆಯನ್ನು ಅಂಗೀಕರಿಸಲು ಸಾಧ್ಯವಾಗಲಿಲ್ಲ ಎಂದು ಹೇಳಿದರು.
ದೇಶದಲ್ಲಿ ಮಹಿಳಾ ನೇತೃತ್ವದ ಅಭಿವೃದ್ದಿಯನ್ನ ಜಗತ್ತು ಗುರುತಿಸಿದೆ. ಇದು ಕ್ರೀಡೆಯಿಂದ ಸ್ಟಾರ್ಟ್‌ಅಪ್‌ಗಳವರೆಗೆ ಜೀವನದ ವಿವಿಧ ಆಯಾಮಗಳಲ್ಲಿ ಭಾರತೀಯ ಮಹಿಳೆಯರು ನೀಡಿದ ಕೊಡುಗೆಗಳಿಗೆ ಸಾಕ್ಷಿಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ತಿಳಿಸಿದ್ದಾರೆ.
ಹಲವು ಬಾರಿ ಮಂಡನೆ ಆದರೂ ಮಹಿಳಾ ಮೀಸಲಾತಿ ಮಸೂದೆ ಅಂಗೀಕಾರ ಆಗಲಿಲ್ಲ. ಮಸೂದೆ ಅಂಗೀಕರಿಸಲು ಬಹುಮತ ಇರಲಿಲ್ಲ. ಎಲ್ಲಾ ಕಾರಣದಿಂದ ಮಸೂದೆ ಜಾರಿಯ ಕನಸು ಕನಸಾಗಿಯೇ ಉಳಿದಿತ್ತು. ಆದರೆ ಇಂದು ಈ ಕಾರ್ಯವನ್ನು ಮಾಡಲು ದೇವರೇ ನನಗೆ ಈ ಅವಕಾಶ ನೀಡಿದ್ದು, ಮಹಿಳಾ ಮೀಸಲಾತಿ ಮಸೂದೆಗೆ ಒಪ್ಪಿಗೆ ಸಿಗುತ್ತಿರುವುದು ಹೆಮ್ಮೆಯ ವಿಚಾರ ಎಂದು ಹೇಳಿದ್ದಾರೆ.
ದೇಶದ ಮಹಿಳೆಯರಿಗೆ ಮಸೂದೆ ಯಾವ ರೀತಿ ಸಹಾಯಕವಾಗಲಿದೆ ಎಂಬುದನ್ನು ವಿವರಿಸಿದ್ದಾರೆ. ಈ ಮಸೂದೆ ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ಮಹಿಳೆಯರ ಸದಸ್ಯತ್ವ ವಿಸ್ತರಿಸುವ ಗುರಿ ಹೊಂದಿದೆ. ಈ ಬಗ್ಗೆ ಪ್ರಧಾನಿ ಮೋದಿ ಅವರು, ಮಹಿಳಾ ಮೀಸಲಾತಿ ಮಸೂದೆಯ ಚರ್ಚೆ ಸಾಕಷ್ಟು ವರ್ಷಗಳಿಂದಲು ನಡೆದಿದೆ. ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಅವಧಿಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಹಲವಾರು ಬಾರಿ ಮಂಡಿಸಲಾಯಿತು ಎಂದು ಮೆಲುಕು ಹಾಕಿದರು.












Click it and Unblock the Notifications