ಮಾರ್ಚ್ 8 ರೊಳಗೆ ಮಹಿಳೆಯರ ಖಾತೆಗೆ ಬರಲಿದೆ 2500 ರೂಪಾಯಿ

ನವದೆಹಲಿ, ಫೆಬ್ರವರಿ 20: ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಮುನ್ನ, ಬಿಜೆಪಿ ಸರ್ಕಾರವು ಮಹಿಳೆಯರಿಗೆ ಮಾಸಿಕ 2,500 ರೂ. ಆರ್ಥಿಕ ನೆರವು ನೀಡುವ ಚುನಾವಣಾ ಭರವಸೆಯನ್ನು ಈಡೇರಿಸುವುದಾಗಿ ನಿಯೋಜಿತ ಮುಖ್ಯಮಂತ್ರಿ ರೇಖಾ ಗುಪ್ತಾ ಗುರುವಾರ ಭರವಸೆ ನೀಡಿದರು.

ಮಹಿಳೆಯವರಿಗೆ ಮಾಸಿಕ 2500 ಆರ್ಥಿಕ ನೆರವು ನೀಡುವ ಚುನಾವಣಾ ಭರವಸೆಯನ್ನು ಬಿಜೆಪಿ ಸರ್ಕಾರದ ಆದ್ಯತೆಯ ಮೇರೆಗೆ ಈಡೇರಿಸುವುದಾ ರೇಖಾ ಗುಪ್ತಾ ಹೇಳಿದ್ದಾರೆ. ಮೊದಲ ಕಂತನ್ನು ಮಾರ್ಚ್ 8 ರೊಳಗೆ ಅವರ ಖಾತೆಗಳಿಗೆ ಜಮಾ ಮಾಡಲಾಗುವುದು ಎಂದು ನಿಯೋಜಿತ ಮುಖ್ಯಮಂತ್ರಿ ರೇಖಾ ಗುಪ್ತಾ ಅವರು ತಿಳಿಸಿದರು. ಬುಧವಾರ ಬಿಜೆಪಿ ಶಾಸಕಾಂಗ ಪಕ್ಷದ ನಾಯಕಿಯಾಗಿ ಆಯ್ಕೆಯಾದ ರೇಖಾ ಗುಪ್ತಾ, ತಮ್ಮ ಭರವಸೆಗಳನ್ನು ಈಡೇರಿಸುವುದು ತಮ್ಮ ಪ್ರಮುಖ ಆದ್ಯತೆಯಾಗಿದೆ ಎಂದು ಹೇಳಿದರು.

Women to get Rs 2 500 monthly aid by March 8 says Delhi CM-designate Rekha Gupta

ಇನ್ನೂ ಪ್ರಧಾನಿ ನರೇಂದ್ರ ಮೋದಿಯವರ ಕನಸನ್ನು ನನಸಾಗಿಸುವುದು ರಾಜಧಾನಿಯಲ್ಲಿರುವ ಎಲ್ಲಾ 48 ಬಿಜೆಪಿ ಶಾಸಕರ ಜವಾಬ್ದಾರಿಯಾಗಿದೆ. ಮಹಿಳೆಯರಿಗೆ ಆರ್ಥಿಕ ನೆರವು ಸೇರಿದಂತೆ ನಮ್ಮ ಎಲ್ಲಾ ಭರವಸೆಗಳನ್ನು ನಾವು ಖಂಡಿತವಾಗಿಯೂ ಈಡೇರಿಸುತ್ತೇವೆ. ಮಾರ್ಚ್ 8 ರೊಳಗೆ ಮಹಿಳೆಯರಿಗೆ ಅವರ ಖಾತೆಗಳಿಗೆ 100 ಪ್ರತಿಶತದಷ್ಟು ಹಣಕಾಸಿನ ನೆರವು ಸಿಗುತ್ತದೆ ಎಂದು ರೇಖಾ ಗುಪ್ತಾ ಅವರು ಹೇಳಿದರು.

ಮಾರ್ಚ್ 8 ಅನ್ನು ಅಂತರರಾಷ್ಟ್ರೀಯ ಮಹಿಳಾ ದಿನವೆಂದು ಆಚರಿಸಲಾಗುತ್ತದೆ. ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯ ಸಾಧಿಸಿತು, 70 ಸ್ಥಾನಗಳಲ್ಲಿ 48 ಸ್ಥಾನಗಳನ್ನು ಗೆದ್ದಿತು ಮತ್ತು ಎಎಪಿಯ ದಶಕದ ಆಳ್ವಿಕೆಯನ್ನು ಕೊನೆಗೊಳಿಸಿತು. ಕಾಂಗ್ರೆಸ್‌ ಒಂದು ಕ್ಷೇತ್ರದಲ್ಲೂ ಗೆಲುವು ಸಾಧಿಸದೇ ಹೀನಾಯವಾಗಿ ಸೋಲು ಅನುಭವಿಸಿದೆ.

ಇನ್ನೂ ಬಿಜೆಪಿ ಚುನಾವಣಾ ವೇಳೆ ಪಕ್ಷದ ಪ್ರಣಾಳಿಕೆಯಲ್ಲಿ ಸಂಕಲ್ಪ ಪತ್ರವನ್ನ ಬಿಡುಗಡೆ ಮಾಡಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಅವರು, ಮಹಿಳೆಯರಿಗೆ ಮಾಸಿಕ 2500 ರೂಪಾಯಿ ಆರ್ಥಿಕ ನೆರವು, ಗರ್ಭಿಣಿಯರಿಗೆ 21,000 ರೂಪಾಯಿ ನೆರವು ಹಾಗೂ ಹಿರಿಯ ನಾಗರಿಕರಿಗೆ 2500 ಪಿಂಚಣಿ ನೀಡುವುದಾಗಿ ಘೋಷಿಸಿತ್ತು.

ಇನ್ನೂ ಬಿಜೆಪಿ ಶಾಸಕರಾದ ಪರ್ವೇಶ್ ಸಾಹಿಬ್ ಸಿಂಗ್ ವರ್ಮಾ, ಆಶಿಶ್ ಸೂದ್, ಮಂಜಿಂದರ್ ಸಿಂಗ್ ಸಿರ್ಸಾ, ರವೀಂದರ್ ಇಂದ್ರಜ್ ಸಿಂಗ್, ಕಪಿಲ್ ಮಿಶ್ರಾ ಮತ್ತು ಪಂಕಜ್ ಸಿಂಗ್ ಅವರು ಮುಖ್ಯಮಂತ್ರಿ ರೇಖಾ ಗುಪ್ತಾ ಅವರ ಸಂಪುಟದ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸ್ದಾರೆ. ಇನ್ನೂ ಪ್ರಮಾಣವಚನ ಸ್ವೀಕಾರಕ್ಕೂ ಮುನ್ನ ಮಾತನಾಡಿದ ಕಪಿಲ್ ಮಿಶ್ರಾ, ರಾಜಧಾನಿಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರ ದೃಷ್ಟಿಕೋನವನ್ನು ಸಾಕಾರಗೊಳಿಸುವತ್ತ ಹೊಸ ಸರ್ಕಾರ ಕೆಲಸ ಮಾಡುತ್ತದೆ ಎಂದು ಹೇಳಿದರು.

ಸಚಿವರಾಗಿ ನೇಮಕಗೊಂಡಿರುವ ಪಂಕಜ್ ಸಿಂಗ್ ಅವರು ಮಾತನಾಡಿ, ಪಕ್ಷವು ನೀಡಿದ ಜವಾಬ್ದಾರಿಗಳನ್ನು ನಾನು ಕರ್ತವ್ಯದಿಂದ ನಿರ್ವಹಿಸುತ್ತೇನೆ ಎಂದು ಹೇಳಿದರು. ಇನ್ನೂ ಈ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಅಮಿತ್‌ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಜೆ ಪಿ ನಡ್ಡಾ ಸೇರಿದಂತೆ ಹಿರಿಯ ಬಿಜೆಪಿ ನಾಯಕರು ಪ್ರಮಾಣವಚನ ಸಮಾರಂಭದಲ್ಲಿ ಭಾಗವಹಿಸಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+