ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೇಂದ್ರದ 'ಆಧಾರ್ ಕಡ್ಡಾಯ'ಕ್ಕೆ ತಡೆ ನೀಡಲು ಸಾಧ್ಯವಿಲ್ಲ – ಸುಪ್ರಿಂ

By ವಿಕಾಸ್ ನಂಜಪ್ಪ
|
Google Oneindia Kannada News

ನವದೆಹಲಿ, ಜೂನ್ 27: ವಿವಿಧ ಸರಕಾರಿ ಯೋಜನೆಗಳ ಪ್ರಯೋಜನ ಪಡೆಯಲು ಆಧಾರ್ ಕಾರ್ಡ್ ಕಡ್ಡಾಯ ಮಾಡಿರುವ ಕೇಂದ್ರ ಸರಕಾರ ನಿರ್ಧಾರಕ್ಕೆ ತಡೆ ನೀಡಲು ಸಾಧ್ಯವಿಲ್ಲ ಎಂದು ಸುಪ್ರಿಂ ಕೋರ್ಟ್ ಹೇಳಿದೆ.

ಈ ಕುರಿತು ಮಧ್ಯಂತರ ಆದೇಶ ನೀಡಲು ನಿರಾಕರಿಸಿರುವ ಸುಪ್ರಿಂ ಕೋರ್ಟ್ ಅರ್ಜಿದಾರರಿಗೆ ಸೂಕ್ತ ದಾಖಲೆ ನೀಡುವಂತೆ ಕೇಳಿಕೊಂಡಿದೆ.

ಅರ್ಜಿದಾರರ ಬಳಿ "ಯಾವ ಶಾಲೆಯಲ್ಲಿ ಆಧಾರ್ ಕಾರ್ಡ್ ಇಲ್ಲ ಎಂಬ ಕಾರಣಕ್ಕೆ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಿಸಿಯೂಟ ನೀಡುತ್ತಿಲ್ಲ? ಇದಕ್ಕೆ ದಾಖಲೆ ಕೊಡಿ," ಎಂದು ಸುಪ್ರಿಂ ಕೋರ್ಟ್ ಹೇಳಿದೆ.

Wont tell Centre not to insist on Aadhaar card says SC

ಇನ್ನು, ಮುಂದಿನ ವಿಚಾರಣೆವರೆಗೂ ಕೇಂದ್ರ ಸರಕಾರ ಆಧಾರ್ ಇಲ್ಲ ಎಂಬ ಕಾರಣಕ್ಕೆ ಜನರಿಗೆ ನೀಡುತ್ತಿರುವ ಸೌಲಭ್ಯಗಳನ್ನು ಹಿಂತೆಗೆದುಕೊಳ್ಳುವಂತಿಲ್ಲ ಎಂದು ಸುಪ್ರಿಂ ಕೋರ್ಟ್ ಹೇಳಿದೆ.

ಇದೇ ವೇಳೆ ಆಧಾರ್ ಕಾರ್ಡ್ ಇಲ್ಲದೆ ಸರಕಾರದ ಯೋಜನೆಗಳ ಪ್ರಯೋಜನ ಪಡೆದುಕೊಳ್ಳಲು ಕೊನೆಯ ದಿನಾಂಕವನ್ನು ಸೆಪ್ಟೆಂಬರ್ 30ಕ್ಕೆ ಮುಂದೂಡಲಾಗಿದೆ ಎಂದು ಕೇಂದ್ರ ಸರಕಾರ ಸುಪ್ರಿಂ ಕೋರ್ಟಿಗೆ ಮಾಹಿತಿ ನೀಡಿದೆ.

English summary
The Supreme Court has refused to pass an interim order directing the Centre not to insist on Aadhaar card for getting benefits under social welfare schemes. The SC asked the petitioner to show proof of children being deprived of the mid-day meal scheme if they did not have Aadhaar.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X