ಮಹಾರಾಷ್ಟ್ರ ರಾಜ್ಯ ಕಾಂಗ್ರೆಸ್ ಎಟಿಎಂ ಆಗಲು ಬಿಡುವುದಿಲ್ಲ: ನರೇಂದ್ರ ಮೋದಿ

ಮುಂಬೈ, ನವೆಂಬರ್ 09: ಪ್ರಧಾನಿ ನರೇಂದ್ರ ಮೋದಿ ಮಹಾರಾಷ್ಟ್ರ ವಿಧಾನಸಭೆ ಚುನಾವಣೆ-2024ಕ್ಕೆ ಪ್ರಚಾರ ನಡೆಸಿದರು. 288 ಸದಸ್ಯ ಬಲದ ಮಹಾರಾಷ್ಟ್ರ ವಿಧಾನಸಭೆಗೆ ನವೆಂಬರ್ 20ರಂದು ಮತದಾನ ನಡೆಯಲಿದೆ. ನವೆಂಬರ್ 23ರಂದು ಮತ ಎಣಿಕೆ ನಡೆಯಲಿದೆ. ನರೇಂದ್ರ ಮೋದಿ ಒಟ್ಟು 9 ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ.

ಮಹಾರಾಷ್ಟ್ರ ರಾಜ್ಯದಲ್ಲಿ ಬಿಜೆಪಿ 'ಮಹಾಯತಿ' ಮೈತ್ರಿಕೂಟದ ಮೂಲಕ ಚುನಾವಣೆಯನ್ನು ಎದುರಿಸುತ್ತಿದೆ. ನವೆಂಬರ್ 9ರ ಶನಿವಾರ ನರೇಂದ್ರ ಮೋದಿ ಅಕೋಲ ಮತ್ತು ನಾಂದೇಡ್‌ನಲ್ಲಿ ಸಮಾವೇಶ ಉದ್ದೇಶಿಸಿ ಮಾತನಾಡುವ ಮೂಲಕ ಪ್ರಚಾರ ನಡೆಸಿದರು.

Wont Let Maharashtra To Become Congress ATM Narednra Modi

ಕಾಂಗ್ರೆಸ್ ಎಟಿಎಂ ಆಗಲು ಬಿಡಲ್ಲ: ನರೇಂದ್ರ ಮೋದಿ ಅಕೋಲದಲ್ಲಿ ಸಮಾವೇಶ ಉದ್ದೇಶಿಸಿ ಮಾತನಾಡಿ ಕಾಂಗ್ರೆಸ್ ವಿರುದ್ದ ವಾಗ್ದಾಳಿ ನಡೆಸಿದರು. "ಮಹಾರಾಷ್ಟ್ರ ರಾಜ್ಯ ಕಾಂಗ್ರೆಸ್ ಪಕ್ಷದ ಎಟಿಎಂ ಆಗಲು ಬಿಡುವುದಿಲ್ಲ" ಎಂದು ಹೇಳುವ ಮೂಲಕ ಮೋದಿ ಕಾಂಗ್ರೆಸ್ ಆಡಳಿತದಲ್ಲಿರುವ ರಾಜ್ಯಗಳಲ್ಲಿ ಪಕ್ಷ ಲೂಟಿ ಮಾಡುತ್ತಿದೆ ಎಂದು ಪರೋಕ್ಷವಾಗಿ ಟೀಕಿಸಿದರು.

"ದೇಶವನ್ನು ಜಾತಿಯ ಆಧಾರದ ಮೇಲೆ ವಿಭಜನೆ ಮಾಡುವ ಮೂಲಕ ಅದನ್ನು ಒಡೆಯುವ ಗುರಿ ಕಾಂಗ್ರೆಸ್ ಪಕ್ಷದ್ದಾಗಿದೆ. ಇಂತಹ ಪ್ರಯತ್ನಗಳಿಗೆ ನಾವು ಅವಕಾಶ ನೀಡುವುದಿಲ್ಲ" ಎಂದು ಮೋದಿ ವಾಗ್ದಾಳಿ ನಡೆಸಿದರು.

"ಒಂದು ವೇಳೆ ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಸರ್ಕಾರ ರಚನೆ ಮಾಡಿದರೆ ರಾಜ್ಯ ಪಕ್ಷದ ನಾಯಕರ ಎಟಿಎಂ ಆಗಲಿದೆ. ಮಹಾರಾಷ್ಟ್ರ ರಾಜ್ಯ ಕಾಂಗ್ರೆಸ್ ಪಕ್ಷದ ಎಟಿಎಂ ಆಗಲು ನಾವು ಬಿಡುವುದಿಲ್ಲ" ಎಂದು ಮೋದಿ ಹೇಳಿದರು.

"ನಾವು ಪಂಚತೀರ್ಥ ಎಂದು ಘೋಷಣೆ ಮಾಡಿದ ಡಾ. ಬಿ. ಆರ್. ಅಂಬೇಡ್ಕರ್ ಅವರ ಕ್ಷೇತ್ರಕ್ಕೆ ಕಾಂಗ್ರೆಸ್ ನಾಯಕರು ಯಾವಾಗ ಭೇಟಿ ನೀಡಿದ್ದಾರೆ? ಎಂದು ಬಹಿರಂಗವಾಗಿ ತಿಳಿಸಿ" ಎಂದು ನರೇಂದ್ರ ಮೋದಿ ಸವಾಲು ಹಾಕಿದರು.

"ನಾವು ಒಗ್ಗಟ್ಟಾಗಿದ್ದೇವೆ, ಒಂದಾಗಿ ಸಾಗುತ್ತೇವೆ ಎಂಬ ಸಂದೇಶವನ್ನು ಕಾಂಗ್ರೆಸ್ ಪಕ್ಷಕ್ಕೆ ಹರಿಯಾಣದ ಜನರು ಚುನಾವಣೆಯಲ್ಲಿ ನೀಡಿದ್ದಾರೆ. ಅದಕ್ಕಾಗಿ ನಾನು ಅವರಿಗೆ ಧನ್ಯವಾದ ಸಲ್ಲಿಸುತ್ತೇನೆ" ಎಂದು ಮೋದಿ ಹೇಳಿದರು.

"ಮಹಾರಾಷ್ಟ್ರದ ವಿರೋಧ ಪಕ್ಷಗಳು ಸೇರಿರುವ ಮಹಾವಿಕಾಸ್ ಅಘಾಡಿ (ಎಂವಿಎ) ಮೈತ್ರಿಕೂಟ ಭ್ರಷ್ಟಾಚಾರ ಮತ್ತು ಹಗರದಲ್ಲಿ ತೊಡಗಿತ್ತು" ಎಂದು ನರೇಂದ್ರ ಮೋದಿ ಟೀಕಿಸುವ ಮೂಲಕ ಮೋದಿ ಕಾಂಗ್ರೆಸ್, ಶಿವಸೇನೆ (ಉದ್ಧವ್ ಠಾಕ್ರೆ ಬಣ), ಎನ್‌ಸಿಪಿ (ಶರದ್ ಪವಾರ್) ನೇತೃತ್ವದ ಪಕ್ಷಗಳ ಮೈತ್ರಿಕೂಟವನ್ನು ಗುರಿಯಾಗಿಸಿ ವಾಗ್ದಾಳಿ ನಡೆಸಿದರು.

"ದೇಶವನ್ನು ಜಾತಿಗಳ ಆಧಾರದ ಮೇಲೆ ಒಡೆಯುವುದು ಕಾಂಗ್ರೆಸ್ ಗುರಿಯಾಗಿದೆ. ನವೆಂಬರ್ 9, 2019ರ ಸುಪ್ರೀಂಕೋರ್ಟ್‌ ತೀರ್ಪಿನ ಬಳಿಕ ರಾಮ ಮಂದಿರ ನಿರ್ಮಾಣ ಮಾಡಲು ಅವಕಾಶ ಸಿಕ್ಕಿತು. ಈ ತೀರ್ಪಿನ ಬಳಿಕ ರಾಷ್ಟ್ರ ಒಗ್ಗಟ್ಟಾಗಿದೆ" ಎಂದು ಮೋದಿ ಬಣ್ಣಿಸಿದರು.

"ಬಿಜೆಪಿಯ ದೂರದೃಷ್ಟಿ, ರಾಜಕೀಯ ನಡೆ, ಅಭಿವೃದ್ಧಿಯನ್ನು ಗಮನಿಸಿ ಸದಾಕಾಲ ಮಹಾರಾಷ್ಟ್ರದ ಜನರು ರಾಜ್ಯದಲ್ಲಿ ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿಯೂ ಪಕ್ಷವನ್ನು ಬೆಂಬಲಿಸಿ" ಎಂದು ಮೋದಿ ಕರೆ ನೀಡಿದರು.

ಮಹಾರಾಷ್ಟ್ರ ರಾಜ್ಯದಲ್ಲಿ ಬಿಜೆಪಿ ಎಂವಿಎ ಮೈತ್ರಿಕೂಟದ ಮೂಲಕ ಚುನಾವಣೆ ಎದರುಸುತ್ತಿದೆ. ಶಿವಸೇನೆ (ಏಕನಾಥ್ ಶಿಂಧೆ ಬಣ), ಎನ್‌ಸಿಪಿ (ಅಜಿತ್ ಪವಾರ್ ಬಣ) ಸೇರಿರುವ 'ಮಹಾಯುತಿ' ಮೈತ್ರಿಕೂಟ ಸೀಟು ಹಂಚಿಕೆ ಮಾಡಿಕೊಂಡಿವೆ. ಬಿಜೆಪಿ 150ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ.

ಚುನಾವಣೆಯಲ್ಲಿ ಮಹಾವಿಕಾಸ್ ಅಘಾಡಿ (ಎಂವಿಎ) ಮೈತ್ರಿಕೂಟ ಎದುರಾಳಿ. ಈ ಮೈತ್ರಿಕೂಟದಲ್ಲಿ ಕಾಂಗ್ರೆಸ್, ಶಿವಸೇನೆ (ಉದ್ಧವ್ ಠಾಕ್ರೆ ಬಣ), ಎನ್‌ಸಿಪಿ (ಶರದ್ ಪವಾರ್) ನೇತೃತ್ವದ ಪಕ್ಷಗಳಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+