ಐಟಿ ಉದ್ಯೋಗಿಗಳು ಡಿ.31ರ ತನಕ ಮನೆಯಿಂದ ಕೆಲಸ ಮಾಡಲು ಒಪ್ಪಿಗೆ
ನವದೆಹಲಿ, ಜುಲೈ 22 : ಐಟಿ ಮತ್ತು ಬಿಪಿಒ ಉದ್ಯೋಗಿಗಳಿಗೆ ಡಿಸೆಂಬರ್ 31ರ ತನಕ ಮನೆಯಿಂದಲೇ ಕೆಲಸ ಮಾಡಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ. ಕೊರೊನಾ ವೈರಸ್ ಭೀತಿ ಹಿನ್ನಲೆಯಲ್ಲಿ ಹಲವು ಕಚೇರಿಗಳು ಇನ್ನೂ ಬಾಗಿಲು ತೆರೆದಿಲ್ಲ.
ಮಾರ್ಚ್‌ನಲ್ಲಿ ಲಾಕ್ ಡೌನ್ ಘೋಷಣೆ ಮಾಡಿದಾಗ ಏಪ್ರಿಲ್ 30ರ ತನಕ ಮನೆಯಿಂದಲೇ ಕೆಲಸ ಮಾಡಲು ಅವಕಾಶ ನೀಡಲಾಗಿತ್ತು. ಬಳಿಕ ಅದನ್ನು ಜುಲೈ 31ರ ತನಕ ವಿಸ್ತರಣೆ ಮಾಡಲಾಗಿತ್ತು. ಈಗ ಡಿಸೆಂಬರ್ 31ರ ತನಕ ಅವಕಾಶ ನೀಡಲಾಗಿದೆ.
ಪ್ರಸ್ತುತ ದೇಶದಲ್ಲಿ ಶೇ 85ರಷ್ಟು ಐಟಿ ಉದ್ಯೋಗಿಗಳು ಮನೆಯಿಂದಲೇ ಕೆಲಸ ಮಾಡುತ್ತಿದ್ದಾರೆ. ತೀರಾ ಅಗತ್ಯ ಇರುವವರು ಮಾತ್ರ ಕಚೇರಿಗೆ ತೆರಳುತ್ತಿದ್ದಾರೆ. ಡಿಸೆಂಬರ್ ತನಕ ಮನೆಯಿಂದಲೇ ಕೆಲಸ ಮಾಡಲು ಸರ್ಕಾರವೇ ಈಗ ಒಪ್ಪಿಗೆ ನೀಡಿದೆ.

ಭಾರತದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಲೇ ಇದೆ. ಆದ್ದರಿಂದ, ಹಲವು ರಾಜ್ಯಗಳಲ್ಲಿ ಐಟಿ ಕಂಪನಿಗಳು ಇನ್ನೂ ಬಾಗಿಲು ತೆರೆದಿಲ್ಲ. ಉದ್ಯೋಗಿಗಳಿಗೆ ಮನೆಯಿಂದಲೇ ಕೆಲಸ ಮಾಡುವಂತೆ ಸೂಚನೆಗಳನ್ನು ನೀಡಿವೆ.
ದೇಶದಲ್ಲಿ ಕಳೆದ 24 ಗಂಟೆಯಲ್ಲಿ 37,724 ಹೊಸ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ದಾಖಲಾಗಿವೆ. ಈ ಮೂಲಕ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 11,92,915ಕ್ಕೆ ಏರಿಕೆಯಾಗಿದೆ.












Click it and Unblock the Notifications