ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವಿಶ್ವ ಜೀವವೈವಿಧ್ಯ ದಿನ: ನಿಸರ್ಗ ಎಂಬ ವಿಸ್ಮಯದ ಗೂಡು

|
Google Oneindia Kannada News

ನಿಸರ್ಗ ಎಂದರೆ ಪ್ರಶ್ನಾತೀತ ವಿಸ್ಮಯ. ಹಸಿರು ಕಾನನದ ನಡುವಲ್ಲಿ ಚಿಲಿಪಿಲಿಗುಟ್ಟುವ ಹಕ್ಕಿಗಳು, ಗರ್ಜಿಸುವ ಹುಲಿ, ಘೀಳಿಡುವ ಆನೆ ಎಲ್ಲವೂ ರುದ್ರ ರಮಣೀಯವೇ. ವಿಸ್ಮಯಗಳ ತವರೂರು ಈ ಭೂಮಿಯಲ್ಲಿ ಅದೆಷ್ಟು ಜೀವಜಂತುಗಳಿವೆಯೋ, ಲೆಕ್ಕಕ್ಕೆ ಸಿಕ್ಕವು ಒಂದಷ್ಟಾದರೆ, ಲೆಕ್ಕದ ಪರಿಧಿಗೇ ಬಾರದವು ಮತ್ತೆಷ್ಟೋ. ಈ ಜಗತ್ತಿನ ಸೌಂದರ್ಯ ಅಡಗಿರುವುದೇ ಜೀವ ವೈವಿಧ್ಯಗಳಿಂದಾಗಿ.

ಆಹಾರ ಸರಪಣಿಯಲ್ಲಿ ಯಾವುದೇ ಕೊಂಡಿ ಕಳಚಿದರೂ ಈ ಭೂಮಿಗೆ ಅಪಾಯ ತಪ್ಪಿದ್ದಲ್ಲ. ಆಹಾರ ಸರಪಳಿಯ ಕೊಂಡಿ ಎಂದಿಗೂ ಮುರಿಯದಂತೆ, ಅಡಿಗಡಿಗೆ ಸಲಹೆ ಜತನ ಮಾಡುತ್ತಿರುವ ಸೃಷ್ಟಿಶಕ್ತಿಯೆದುರು ಮನುಷ್ಯ ತಲೆಬಾಗಲೇಬೇಕು.

ವಿಶ್ವ ವನ್ಯಜೀವಿ ದಿನ: ಕಣ್ಮನಸೆಳೆವ ವನ್ಯಪ್ರಪಂಚದ 10 ಚಿತ್ರಗಳು ವಿಶ್ವ ವನ್ಯಜೀವಿ ದಿನ: ಕಣ್ಮನಸೆಳೆವ ವನ್ಯಪ್ರಪಂಚದ 10 ಚಿತ್ರಗಳು

ಅದಕ್ಕೆಂದೇ ಈ ಜೀವವೈವಿಧ್ಯವನ್ನು ಕಾಪಾಡುವ, ಅವನ್ನು ಉಳಿಸಿ, ಬೆಳೆಸುವ ಸಂಕಲ್ಪದೊಂದಿಗೆ ಪ್ರತಿ ವರ್ಷ ಮೇ 22 ಅನ್ನು ಅಂತಾರಾಷ್ಟ್ರೀಯ ಜೀವವೈವಿಧ್ಯ ದಿನವನ್ನಾಗಿ ಆಚರಿಸಲಾಗುತ್ತದೆ.

ಜೀವ ವೈವಿಧ್ಯದಿನ

ಜೀವ ವೈವಿಧ್ಯದಿನ

1993ರ ಡಿಸೆಂಬರ್ ನಲ್ಲಿ ಮೊದಲ ಬಾರಿಗೆ ಜೀವ ವೈವಿಧ್ಯ ದಿನವನ್ನು ಆಚರಿಸಲಾಯಿತು. ಇದೀಗ 25 ವರ್ಷಗಳಿಂದ ಈ ದಿನವನ್ನು ಆಚರಿಸಲಾಗುತ್ತಿದ್ದು, ರಾಷ್ಟ್ರೀಯ ಮತ್ತು ಜಾಗತಿಕ ಮಟ್ಟದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಿ, ಜೀವ ವೈವಿಧ್ಯ ಸಂರಕ್ಷಣೆಯ ಕುರಿತು ಜಾಗೃತಿ ಮೂಡಿಸಲು ಸಂಕಲ್ಪ ಮಾಡಲಾಗುತ್ತಿದೆ.

ಮರಗಳ ಮಾರಣಹೋಮ

ಮರಗಳ ಮಾರಣಹೋಮ

ಅಭಿವೃದ್ಧಿಯ ಹೆಸರಿನಲ್ಲಿ ಅವ್ಯಾಹತವಾಗಿ ನಡೆದ ಮರಗಳ ಮಾರಣಹೋಮದಿಂದಾಗಿ ಕಾಡು ಖಾಲಿ ಖಾಲಿಯಾಗುತ್ತಿದೆ. ಆದ್ದರಿಂದಲೇ ಇಂದು ಹಲವು ಪ್ರಾಣಿಗಳು ಅಳಿವಿನಂಚಿಗೆ ತಲುಪಿವೆ. ಹಲವು ಅಪರೂಪದ ಪ್ರಭೇದದ ಜೀವಿಗಳನ್ನು ಉಳಿಸಿಕೊಳ್ಳುವುದು ಹರಸಾಹಸ ಎನ್ನಿಸಿದೆ. ಆಹಾರವಿಲ್ಲದೆ, ನೀರಿಲ್ಲದೆ ಪ್ರಾಣಿ-ಪಕ್ಷಿಗಳು ಸಾಯುತ್ತಿವೆ.

ಮೂಕ ಪ್ರಾಣಿಗಳ ಪರ ನಿಲ್ಲಿ

ಜೀವ ವೈವಿಧ್ಯವನ್ನು ರಕ್ಷಿಸುವುದು ಎಂದರೆ ಅಳಿವಿನಂಚಿನಲ್ಲಿರುವ ಪ್ರಭೇದಗಳನ್ನು ಕಅಪಾಡುವುದು. ಅದಕ್ಕೆಂದೇ ನಾವು ನಮ್ಮ ಅರಣ್ಯ ಮತ್ತು ಸಮುದ್ರವನ್ನು ರಕ್ಷಿಸಬೇಕಿದೆ. ತಮ್ ಕುರಿತು ಮಾತನಾಡಲಾಗದವರ ಪರವಾಗಿ ನಿಲ್ಲೋಣ ಎಂದು ಗ್ರೀನ್ ಪೀಸ್ ಎಂಬುವವರು ಟ್ವೀಟ್ ಮಾಡಿದ್ದಾರೆ.

ಸರ್ಕಾರಗಳು ಇನ್ನೂ ಹೆಚ್ಚಿನದನ್ನು ಮಾಡಬೇಕಿದೆ

ಸರ್ಕಾರಗಳು ಇನ್ನೂ ಹೆಚ್ಚಿನದನ್ನು ಮಾಡಬೇಕಿದೆ

ವನ್ಯಜೀವಿಗಳ ರಕ್ಷಣೆ ಮತ್ತು ಪರಿಸರ ರಕ್ಷಣೆಗಾಗಿ ಸರ್ಕಾರಗಳು ಸಾಕಷ್ಟನ್ನು ಮಾಡುತ್ತಿವೆ. ಆದರೆ ಇನ್ನೂ ಹೆಚ್ಚಿನದನ್ನು ಮಾಡಬಹುದು. ಯಾವುದೇ ಪ್ರಾಣಿಗಳೂ ಅಳಿವಿನಂಚಿಗೆ ಹೋಗುವುದಕ್ಕೆ ಬಿಡಕೂಡದು ಎಂದು ಮಿಚ್ ಆಡಮ್ಸ್ ಎಂಬುವವರು ಟ್ವೀಟ್ ಮಾಡಿದ್ದಾರೆ.

English summary
The International Day for Biological Diversity (or World Biodiversity Day) is a United Nations–sanctioned international day for the promotion of biodiversity issues. It is currently held on May 22
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X