Wrestlers protest: ವಿಶ್ವಮಟ್ಟದಲ್ಲಿ ಸುದ್ದಿಯಾದ ಪ್ರತಿಭಟನೆ, WFI ಅಮಾನತು ಮಾಡುವ ಎಚ್ಚರಿಕೆ ನೀಡಿದ ವಿಶ್ವ ಕುಸ್ತಿ ಸಂಸ್ಥೆ!
ನವದೆಹಲಿ, ಮೇ. 31: ದೇಶದ ಕುಸ್ತಿಪಟುಗಳನ್ನು ಸರ್ಕಾರ, ಪೊಲಿಸರು ನಡೆಸಿಕೊಳ್ಳುತ್ತಿರುವ ಬಗ್ಗೆ ದೇಶದಲ್ಲಿ ಮಾತ್ರವಲ್ಲ ವಿಶ್ವದಾದ್ಯಂತ ಟೀಕೆಗಳು ವ್ಯಕ್ತವಾಗಿದ್ದು, ವಿಶ್ವ ಕುಸ್ತಿ ಸಂಸ್ಥೆಯು ಭಾರತೀಯ ಕುಸ್ತಿ ಫೆಡರೇಷನ್‌ಗೆ ಎಚ್ಚರಿಕೆ ನೀಡಿದೆ. ಕ್ರೀಡಾಪಟುಗಳ ಮೇಲೆ ನಡೆದ ಹಲ್ಲೆಗೆ ಖಂಡನೆ ವ್ಯಕ್ತಪಡಿಸಿರುವ ವಿಶ್ವಮಟ್ಟದ ಕುಸ್ತಿ ಆಡಳಿತ ಸಂಸ್ಥೆಯಾದ ಯುನೈಟೆಡ್ ವರ್ಲ್ಡ್ ವ್ರೆಸ್ಲಿಂಗ್ (UWW) ಭಾರತಕ್ಕೆ ಎಚ್ಚರಿಕೆ ನೀಡಿದೆ.
ವಿಶ್ವ ಕುಸ್ತಿ ಆಡಳಿತ ಮಂಡಳಿ (ಯುಡಬ್ಲ್ಯೂಡಬ್ಲ್ಯು) ಮಂಗಳವಾರ, ಮೇ 30 ರಂದು ಹೇಳಿಕೆಯನ್ನು ಬಿಡುಗಡೆ ಮಾಡಿದ್ದು, ಕುಸ್ತಿ ಫೆಡರೇಶನ್ ಆಫ್ ಇಂಡಿಯಾ (ಡಬ್ಲ್ಯುಎಫ್‌ಐ)ದ ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧದ ಪ್ರತಿಭಟನೆಯ ಸಂದರ್ಭದಲ್ಲಿ ಕುಸ್ತಿಪಟುಗಳನ್ನು ನಡೆಸಿಕೊಂಡ ರೀತಿಯನ್ನು ಖಂಡಿಸಿದೆ. ನವದೆಹಲಿಯ ಜಂತರ್ ಮಂತರ್‌ನಲ್ಲಿ ಕುಸ್ತಿಪಟುಗಳನ್ನು ತಾತ್ಕಾಲಿಕವಾಗಿ ಬಂಧಿಸಿರುವ ಬಗ್ಗೆ ನಿರಾಶೆಯನ್ನು ವ್ಯಕ್ತಪಡಿಸಿ, ಇತ್ತೀಚಿನ ಘಟನೆಗಳನ್ನು ಆಡಳಿತವು ಗಮನಿಸಿದೆ ಎಂದು ಯುನೈಟೆಡ್ ವರ್ಲ್ಡ್ ವ್ರೆಸ್ಲಿಂಗ್ ಹೇಳಿದೆ.

ಮುಂದಿನ ಚುನಾಯಿತ ಸಾಮಾನ್ಯ ಸಭೆಯ ಬಗ್ಗೆ ಮಾಹಿತಿ ನೀಡದಿದ್ದರೆ ಭಾರತದ ಕುಸ್ತಿ ಫೆಡರೇಶನ್ ಅನ್ನು ಅಮಾನತುಗೊಳಿಸುವುದಾಗಿ ವಿಶ್ವ ಕುಸ್ತಿ ಆಡಳಿತ ಮಂಡಳಿ ಬೆದರಿಕೆ ಹಾಕಿದೆ. ಕುಸ್ತಿಪಟುಗಳ ಆರಂಭಿಕ ಪ್ರತಿಭಟನೆಯ ನಂತರ ಕ್ರೀಡಾ ಸಚಿವಾಲಯವು ಡಬ್ಲ್ಯುಎಫ್‌ಐ ಮತ್ತು ಅದರ ಚಟುವಟಿಕೆಗಳನ್ನು ಅಮಾನತುಗೊಳಿಸಿದ ನಂತರ ಮುಂದಿನ ಚುನಾಯಿತ ಸಾಮಾನ್ಯ ಸಭೆಯನ್ನು ನಡೆಸಲು 45 ದಿನಗಳ ಗಡುವನ್ನು ಜನವರಿಯಲ್ಲಿ ನಿಗದಿಪಡಿಸಲಾಯಿತು.
ಒಲಿಂಪಿಕ್ ಪದಕ ವಿಜೇತರಾದ ಸಾಕ್ಷಿ ಮಲಿಕ್ ಮತ್ತು ಬಜರಂಗ್ ಪುನಿಯಾ ಸೇರಿದಂತೆ ವಿಶ್ವ ಪದಕ ವಿಜೇತೆ ವಿನೇಶ್ ಫೋಗಟ್, WFI ಮಾಜಿ ಮುಖ್ಯಸ್ಥ ಮತ್ತು ಭಾರತೀಯ ಜನತಾ ಪಕ್ಷದ (ಬಿಜೆಪಿ) ಸಂಸದ ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಹೊರೆಸಿದ್ದಾರೆ. ಇವರು ಪ್ರತಿಭಟನೆಯ ನೇತೃತ್ವ ವಹಿಸಿದ್ದಾರೆ.

ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ತ್ವರಿತ ಕ್ರಮಕ್ಕೆ ಆಗ್ರಹಿಸಿ ಮೇ 30 ರ ಮಂಗಳವಾರದಂದು ಭಾರತದ ಅಗ್ರ ಕುಸ್ತಿಪಟುಗಳು ತಮ್ಮ ಪದಕಗಳನ್ನು ಗಂಗಾ ನದಿಯಲ್ಲಿ ಮುಳುಗಿಸುವುದಾಗಿ ಹೇಳಿದ ಹಾಕಿದ ಕೆಲವೇ ಗಂಟೆಗಳ ನಂತರ ವಿಶ್ವ ಕುಸ್ತಿ ಆಡಳಿತ ಮಂಡಳಿ ಹೇಳಿಕೆ ಬಂದಿದೆ.
ಕುಸ್ತಿಪಟುಗಳು ತಮ್ಮ ಪದಕಗಳನ್ನು ಗಂಗೆಯಲ್ಲಿ ಮುಳುಗಿಸಲು ಮಂಗಳವಾರ ಹರಿದ್ವಾರದ ಹರ್ ಕಿ ಪೌರಿಗೆ ತಲುಪಿದ್ದರು. ಆದರೆ ರೈತ ಮುಖಂಡರಾದ ರಾಕೇಶ್ ಟಿಕಾಯತ್ ಮತ್ತು ನರೇಶ್ ಟಿಕಾಯತ್ ಸೇರಿದಂತೆ ರೈತ ಮಾತಿಗೆ ಒಪ್ಪಿಗೆ ಸೂಚಿಸಿ ತಮ್ಮ ನಿರ್ಧಾರ ಬದಲಿಸಿದ್ದರು. ಆರೋಪಿ ಬ್ರಿಜ್ ಭೂಷಣ್ ವಿರುದ್ಧ ಕ್ರಮ ಕೈಗೊಳ್ಳಲು ಸರ್ಕಾರಕ್ಕೆ 5 ದಿನಗಳ ಗಡುವು ನೀಡಿದ್ದಾರೆ.
ಇದಕ್ಕೂ ಮುನ್ನ ಜಂತರ್ ಮಂತರ್ ಸ್ಥಳದಲ್ಲಿ ಕುಸ್ತಿಪಟುಗಳು ಪ್ರತಿಭಟನೆ ನಡೆಸುತ್ತಿದ್ದ ವೇಳೆ ಅವರನ್ನು ಬಂಧಿಸಲಾಗಿತ್ತು. ಮೇ 28 ರ ಭಾನುವಾರದಂದು ಪೊಲೀಸರು ಪ್ರತಿಭಟನಾ ಪ್ರದೇಶವನ್ನು ತೆರವುಗೊಳಿಸಿದರು. ಜಂತರ್ ಮಂತರ್ ನಲ್ಲಿ ಕುಸ್ತಿಪಟುಗಳಿಗೆ ಪ್ರತಿಭಟನೆ ನಡೆಸಲು ಅವಕಾಶ ನೀಡುವುದಿಲ್ಲ ಎಂದು ದೆಹಲಿ ಪೊಲೀಸರು ಹೇಳಿಕೆ ನೀಡಿದ್ದಾರೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications