ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಭಾರತದಲ್ಲಿ ಒಂದೇ ದಿನ 4,329 ಜನ ಕೊರೊನಾ ವೈರಸ್‌ಗೆ ಬಲಿ

|
Google Oneindia Kannada News

ನವದೆಹಲಿ, ಮೇ 18: ಭಾರತದಲ್ಲಿ ಕೊರೊನಾ ವೈರಸ್ ಪ್ರಕರಣಗಳ ಸಂಖ್ಯೆಯಲ್ಲಿ ಭಾರೀ ಇಳಿಕೆ ಕಂಡು ಬಂದಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ 2,63,533 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿದೆ. ಇದು ಕಳೆದ 26 ದಿನಗಳಲ್ಲಿ ಅತ್ಯಂತ ಕನಿಷ್ಠವಾಗಿದೆ. ಸೋಮವಾದ ನೀಡಿದ ಅಂಕಿಅಂಶಗಳಲ್ಲಿ ಏಪ್ರಿಲ್ 21ರ ನಂತರ ಮೊದಲ ಬಾರಿಗೆ 3ಲಕ್ಷಕ್ಕಿಂತ ಕಡಿಮೆ ಪ್ರಕರಣಗಳು ದಾಖಲಾಗಿತ್ತು.

ಆದರೆ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 4,329ಕ್ಕೆ ಏರಿಕೆಯಾಗಿರುವುದು ಆತಂಕವನ್ನು ಮೂಡಿಸಿದೆ. ಇದು ದೇಶದಲ್ಲಿ 24 ಗಟೆಗಳ ಅಂತರದಲ್ಲಿ ಮೃತಪಟ್ಟ ಸಂಖ್ಯೆಯಲ್ಲಿ ಹೊಸ ದಾಖಲೆಯಾಗಿದೆ. ಇದಕ್ಕೂ ಮೊದಲು ಮೇ 12ರಂದು 4,205 ಸಾವಿನ ಪ್ರಕರಣಗಳು ದಾಖಲಾಗಿದ್ದು ಈವರೆಗಿನ ಅತಿ ದೊಡ್ಡ ಸಂಖ್ಯೆಯಾಗಿತ್ತು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ನೀಡಿದ ಅಂಕಿಅಂಶಗಳ ಪ್ರಕಾರ ಕಳೆದ 24 ಗಂಟೆಗಳ ಅವಧಿಯಲ್ಲಿ ಸೋಂಕಿನಿಂದ ಗುಣಮುಖರಾದವರ ಪ್ರಮಾಣವೂ ದಾಖಲೆ ಮಟ್ಟದಲ್ಲಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ 4,22,436 ಕೊರೊನಾ ಸೋಂಕಿತರು ಗುಣಮುಖರಾಗಿದ್ದಾರೆ. ಈ ಮೂಲಕ ದೇಶದಲ್ಲಿ ಒಟ್ಟಾರೆ 2,15,96,512 ಜನರು ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದಾರೆ.

worst day for India in fatality count with 4,329 die of Covid in 24 hours

ಆರೋಗ್ಯ ಸಚಿವಾಲಯ ನೀಡಿದ ಈ ಮಾಹಿತಿಯಲ್ಲಿರುವ ಮತ್ತೊಂದು ಪ್ರಮುಖ ಸಕಾರಾತ್ಮಕ ಸಂಗತಿಯೆಂದರೆ ಕೊರೊನಾ ಸೋಂಕಿನಿಂದ ಕೆಟ್ಟ ಸ್ಥಿತಿಯನ್ನು ಅನುಭವಿಸುತ್ತಿರುವ ಮಹಾರಾಷ್ಟ್ರದಲ್ಲಿ ಸೋಂಕಿನ ಸಂಖ್ಯೆ 30 ಸಾವಿರಕ್ಕಿಂತ ಕಡಿಮೆ ದಾಖಲಾಗಿದೆ. ಮಹಾರಾಷ್ಟ್ರದಲ್ಲಿ ಕಳೆದ 24 ಗಂಟೆಗಳಲ್ಲಿ 26,616 ಕೊರೊನಾ ಪ್ರಕರಣಗಳು ಪತ್ತೆಯಾಗಿದೆ.

ಇನ್ನು ಆರೋಗ್ಯ ಇಲಾಖೆ ನೀಡಿದ ಮಾಹಿತಿಯ ಪ್ರಕಾರ ದೇಶದಲ್ಲಿ ಈವರೆಗೆ 18,44,53,149 ಜನರು ಕೊರೊನಾ ಲಸಿಕೆಯನ್ನು ಪಡೆದುಕೊಂಡಿದ್ದಾರೆ. 15,10,418 ಜನರು ಕಳೆದ 24 ಗಂಟೆಗಳಲ್ಲಿ ಲಸಿಕೆಯನ್ನು ಪಡೆದುಕೊಂಡಿದ್ದಾರೆ.

English summary
With 4,329 people died in last 24 hours, India on may 18 recorded highest fatalities from coronavirus.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X