ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಲೈಂಗಿಕ ಕಿರುಕುಳ ಪ್ರಕರಣ; ಕೇಂದ್ರ ಸರ್ಕಾರದ ಭರವಸೆಯ ಮೇರೆಗೆ ಧರಣಿ ಕೈ ಬಿಟ್ಟ ಕುಸ್ತಿಪಟುಗಳು

|
Google Oneindia Kannada News

ಹೊಸದಿಲ್ಲಿ, ಜನವರಿ21: ಲೈಂಗಿಕ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಸ್ತಿಪಡುಗಳ ನಡೆಸುತ್ತಿದ್ದ ಧರಣಿಯನ್ನ ಕೇಂದ್ರ ಸರ್ಕಾರ ಭರವಸೆ ನೀಡದ ಹಿನ್ನೆಲೆ ಧರಣಿಯನ್ನ ಅಂತ್ಯಗೊಳಿಸಿದ್ದಾರೆ.

ಲೈಂಗಿತ ಕಿರುಕುಳ ಆರೋಪ ಎದುರಿಸುತ್ತಿರುವ ಕುಸ್ತಿ ಫೆಡರೇಷನ್ ಅಧ್ಯಕ್ಷ ಬೃಜ್ ಭೂಷಣ್ ಶರಣ್ ಸಿಂಗ್ ತಮ್ಮ ರಾಜೀನಾಮೆ ನೀಡುವುದೂ ಸೇರಿದಂತೆ ಕುಸ್ತಿಪಟುಗಳ ಬೇಡಿಕೆಗಳನ್ನು ಈಡೇರಿಸುವುದಾಗಿ ಕೇಂದ್ರ ಸರ್ಕಾರ ಭರವಸೆ ನೀಡಿದ ಹಿನ್ನೆಲೆಯಲ್ಲಿ ಕುಸ್ತಿಪಟುಗಳು ಎರಡು ದಿನಗಳಿಂದ ನಡೆಸುತ್ತಿದ್ದ ಧರಣಿಯನ್ನ ಶುಕ್ರವಾರ ರಾತ್ರಿ ಕೈಬಿಟ್ಟಿದ್ದಾರೆ.

ವಿನೇಶ್ ಫೋಗಟ್, ಬಜರಂಗ್ ಪುನಿಯಾ, ಸಾಕ್ಷಿ ಮಲಿಕ್ ಮತ್ತು ರವಿ ದಹಿಯಾ ಸೇರಿದಂತೆ ಹಲವು ಕುಸ್ತಿಪಟುಗಳು ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಅವರೊಂದಿಗೆ ಶುಕ್ರವಾರ ರಾತ್ರಿ ಎರಡನೇ ಸುತ್ತಿನ ಮಾತುಕತೆಯ ನಡೆಸಿದರು. ಇನ್ನೂ ಮಾತುಕತೆ ವೇಳೆ ಸರ್ಕಾರ ಹೋರಾಟಗಾರರ ದೂರುಗಳನ್ನು ಪರಿಶೀಲಿಸುವುದಾಗಿ ಭರವಸೆ ನೀಡಿದೆ. ಅದೇ ಹಿನ್ನೆಲೆಯಲ್ಲಿ ಪ್ರತಿಭಟನೆಯನ್ನು ಕೊನೆಗೊಳಿಸಲು ಹೋರಾಟಗಾರರು ನಿರ್ಧರಿಸಿದರು. ದೂರುಗಳ ತನಿಖೆಗೆ ಮೇಲುಸ್ತುವಾರಿ ಸಮಿತಿ ರಚಿಸಲಾಗುವುದು. ಆರೋಪಗಳ ತನಿಖೆ ಮಾಡುವವರೆಗೆ ಡಬ್ಲ್ಯುಎಫ್‌ಐ ಮುಖ್ಯಸ್ಥರು ತಮ್ಮ ಸ್ಥಾನದಿಂದ ಕೆಳಗಿಳಿಯಲಿದ್ದಾರೆ ಎಂದು ಸಚಿವ ಅನುರಾಗ್ ಠಾಕೂರ್ ಹೇಳಿದ್ದಾರೆ.

Wrestlers End Protest After Assurances Central Government

ಮೇಲುಸ್ತುವಾರಿ ಸಮಿತಿಯನ್ನು ರಚಿಸಲು ನಿರ್ಧರಿಸಲಾಗಿದೆ. ಈ ಸಮಿತಿ ಸದಸ್ಯರ ಹೆಸರುಗಳನ್ನು ನಾಳೆ ಪ್ರಕಟಿಸಲಾಗುತ್ತದೆ. ಸಮಿತಿ ನಾಲ್ಕು ವಾರಗಳಲ್ಲಿ ತನಿಖೆ ಪೂರ್ಣಗೊಳಿಸಲಿದೆ. ಇದು ಹಣಕಾಸು ಅವ್ಯವಹಾರ ಮತ್ತು ಲೈಂಗಿಕ ಕಿರುಕುಳ ಸೇರಿದಂತೆ ಎಲ್ಲ ಆರೋಪಗಳ ಬಗ್ಗೆ ಸಮಗ್ರ ತನಿಖೆ ನಡೆಸಲಿದೆ ಎಂದು ಅನುರಾಗ್ ಠಾಕೂರ್ ಮ್ಯಾರಥಾನ್ ಸಭೆ ಬಳಿಕ ಹೇಳಿದ್ದಾರೆ.

ತನಿಖೆ ಪೂರ್ಣಗೊಳ್ಳುವವರಗೆ ಸಿಂಗ್ ಅವರು ಹುದ್ದೆಯಿಂದ ಹೊರಗಿದ್ದು, ತನಿಖೆಗೆ ಸಹಕರಿಸಲಿದ್ದಾರೆ. ಮೇಲುಸ್ತುವಾರಿ ಸಮಿತಿ ಡಬ್ಲ್ಯುಎಫ್‍ಐನ ದೈನಂದಿನ ವ್ಯವಹಾರಗಳನ್ನು ನಿರ್ವಹಿಸಲಿದೆ ಎಂದು ಸ್ಪಷ್ಟಪಡಿಸಿದರು.

ಏಷ್ಯನ್ ಗೇಮ್ಸ್ ಮತ್ತು ಒಲಂಪಿಕ್ ಅರ್ಹತಾ ಪಂದ್ಯಗಳೊಂದಿಗೆ ಇದು ಪ್ರಮುಖ ವರ್ಷವಾಗಿದೆ. ಹೀಗಾಗಿ ಸರ್ಕಾರದಿಂದ ಭರವಸೆ ಸಿಕ್ಕ ನಂತರ ಪ್ರತಿಭಟನೆ ಅಂತ್ಯಗೊಳಿಸಲು ನಿರ್ಧರಿಸಿದ್ದೇವೆ. ಇನ್ನೂ ಸಮಿತಿಯು ನಿಷ್ಪಕ್ಷಪಾತ ತನಿಖೆ ನಡೆಸುತ್ತದೆ ಎಂಬುದು ನಮಗೆ ಖಚಿತವಾಗಿದೆ. ನಮ್ಮ ಸುರಕ್ಷತೆಗೆ ಸಂಬಂಧಪಟ್ಟಂತೆ, ಅದು ಅವರ ಜವಾಬ್ದಾರಿ ಎಂದು ಸಚಿವರು ಭರವಸೆ ನೀಡಿದ್ದಾರೆ ಎಂದು ಕುಸ್ತಿ ಪಟುಗಳು ಹೇಳಿದ್ದಾರೆ.

English summary
case of sexual harassment; Wrestlers who gave up their strike on the promise of the central government,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X