Wrestlers protest: ಬಿಜೆಪಿ ಸಂಸದ ಬ್ರಿಜ್ ಭೂಷಣ್ ಸಿಂಗ್ ಮನೆಗೆ ತೆರಳಿದ ದೆಹಲಿ ಪೊಲೀಸರು- ಬಂಧನ ಸಾಧ್ಯತೆ?
ನವದೆಹಲಿ, ಜೂನ್ 6: ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಡಬ್ಲ್ಯುಎಫ್‌ಐ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ಮನೆಗೆ ದೆಹಲಿ ಪೊಲೀಸರು ತೆರಳಿದ್ದಾರೆ. ಉತ್ತರ ಪ್ರದೇಶದ ಗೊಂಡಾದಲ್ಲಿರುವ ಅವರ ನಿವಾಸದಲ್ಲಿ ಕೆಲಸ ಮಾಡುತ್ತಿರುವವರ ಹೇಳಿಕೆಗಳನ್ನು ದೆಹಲಿ ಪೊಲೀಸರು ದಾಖಲಿಸಿದ್ದಾರೆ. ತನಿಖೆಯ ಭಾಗವಾಗಿ ಬ್ರಿಜ್ ಭೂಷನ್ ಅವರ ನೌಕರರ ಹೇಳಿಕೆಗಳನ್ನು ದಾಖಲಿಸಿಕೊಂಡಿದ್ದಾಗಿ ಪೊಲೀಸ್ ಅಧಿಕಾರಿಗಳು ಮಂಗಳವಾರ ಮಾಹಿತಿ ನೀಡಿದ್ದಾರೆ.
ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ ಸಿಂಗ್ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ಇದಕ್ಕೆ ಸಂಬಂಧಿಸಿದಂತೆ ಬಾಲಕಿ, ಕ್ರಿಮಿನಲ್ ಪ್ರಕ್ರಿಯೆ ಸಂಹಿತೆ (ಸಿಆರ್‌ಪಿಸಿ) ಸೆಕ್ಷನ್ 164 ರ ಅಡಿಯಲ್ಲಿ ಹೊಸ ಹೇಳಿಕೆಯನ್ನು ದಾಖಲಿಸಿದ್ದಾಗಿ ಪೊಲೀಸರು ಹೇಳಿದ್ದಾರೆ.

ಬಿಜೆಪಿ ಸಂಸದರ ವಿರುದ್ಧ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸಾಕ್ಷ್ಯಗಳನ್ನು ಸಂಗ್ರಹಿಸುತ್ತಿದ್ದು, ಅದರಂತೆ ನ್ಯಾಯಾಲಯಕ್ಕೆ ವರದಿ ಸಲ್ಲಿಸಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
'ದೆಹಲಿ ಪೊಲೀಸರ ತಂಡವು ಗೊಂಡಾಗೆ ಭೇಟಿ ನೀಡಿದೆ. ಸಿಂಗ್ ಅವರ ಸಹಚರರು ಮತ್ತು ಅವರ ಚಾಲಕ ಸೇರಿದಂತೆ ಅವರ ಮನೆಯಲ್ಲಿ ಕೆಲಸ ಮಾಡುವವರ ಹೇಳಿಕೆಗಳನ್ನು ದಾಖಲಿಸಿದೆ' ಎಂದು ಅಧಿಕಾರಿಯೊಬ್ಬರು ಬಹಿರಂಗ ಪಡಿಸಿದ್ದಾರೆ.
ಪ್ರಕರಣದ ದೂರುದಾರರ ಸಾಕ್ಷ್ಯಗಳನ್ನು ಸಂಗ್ರಹಿಸಲು ಮತ್ತು ಸಾಕ್ಷಿಗಳ ಆವೃತ್ತಿಗಳನ್ನು ದೃಢೀಕರಿಸಲು ಹೆಚ್ಚಿನ ತನಿಖೆಯ ಭಾಗವಾಗಿ ಇದನ್ನು ಮಾಡಲಾಗುತ್ತಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

'ಪ್ರಕರಣವು ತುಂಬಾ ಸೂಕ್ಷ್ಮವಾಗಿರುವುದರಿಂದ, ನಾವು ಅದರ ಬಗ್ಗೆ ಯಾವುದೇ ಮಾಹಿತಿಯನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ" ಎಂದು ಅವರು ಹೇಳಿದ್ದಾರೆ.
ತಂಡವು ಅವರ ಐಡಿಗಳನ್ನು ಪರಿಶೀಲಿಸಿದೆ ಮತ್ತು ಹೇಳಿಕೆಗಳನ್ನು ದಾಖಲಿಸುವಾಗ ಅವರ ವಿಳಾಸಗಳನ್ನು ಗಮನಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಒಲಿಂಪಿಕ್ ಪದಕ ವಿಜೇತರಾದ ಸಾಕ್ಷಿ ಮಲಿಕ್ ಮತ್ತು ಬಜರಂಗ್ ಪುನಿಯಾ ಸೇರಿದಂತೆ ದೇಶದ ಅಗ್ರ ಕುಸ್ತಿಪಟುಗಳು ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪವನ್ನು ಮಾಡಿದ್ದಾರೆ. ಕಳೆದ ಹಲವು ದಿನಗಳಿಂದ ಭಾರತ ಕುಸ್ತಿ ಫೆಡರೇಶನ್ (ಡಬ್ಲ್ಯುಎಫ್‌ಐ) ಮುಖ್ಯಸ್ಥರ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ.












Click it and Unblock the Notifications