ನೇಣು ಕುಣಿಕೆಗೆ ಹತ್ತಿರವಾದ ಮುಂಬೈ ಸ್ಫೋಟ ಆರೋಪಿ
ನವದೆಹಲಿ, ಏ.9: 1993ರ ಮುಂಬೈ ಸರಣಿ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಯಾಕೂಬ್ ಅಬ್ದುಲ್ ರಜಾಕ್ ಮೆಮೊನ್ ನೇಣು ಕುಣಿಕೆಗೆ ಹತ್ತಿರವಾಗುತ್ತಿದ್ದಾನೆ. ಮರಣದಂಡನೆ ಶಿಕ್ಷೆ ಪ್ರಶ್ನಿಸಿ ಮೆಮೊನ್ ಸಲ್ಲಿಸಿದ್ದ ಪುನರ್ ಪರಿಶೀಲನಾ ಅರ್ಜಿಯನ್ನು ಸುಪ್ರೀಂಕೋರ್ಟ್ ತ್ರಿಸದಸ್ಯ ಪೀಠ ಗುರುವಾರ ವಜಾಗೊಳಿಸಿದೆ.
ನ್ಯಾಯಮೂರ್ತಿ ಎ.ಆರ್.ದೇವಿ ನೇತೃತ್ವದ ತ್ರಿಸದಸ್ಯ ಪೀಠ ಮೆಮೊನ್ ಗೆ ನೀಡಿರುವ ಮರಣದಂಡನೆ ಶಿಕ್ಷೆಯನ್ನುಖಾಯಂಗೊಳಿಸಿ ಆದೇಶ ಹೊರಡಿಸಿದೆ. 1993ರಲ್ಲಿ ನಡೆದಿದ್ದ ಮುಂಬೈ ಸರಣಿ ಸ್ಫೋಟದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿದ್ದ ವಿಶೇಷ ಟಾಡಾ ನ್ಯಾಯಾಲಯ ಮೆನನ್ ಸೇರಿದಂತೆ 10 ಮಂದಿಗೆ ಮರಣದಂಡನೆ ಶಿಕ್ಷೆ ವಿಧಿಸಿತ್ತು. [1993ರ ಮುಂಬೈ ಸ್ಫೋಟ 2 ದಶಕದ ನಂತರ ತೀರ್ಪು]
1993ರಲ್ಲಿ ನಡೆದಿದ್ದ ಮುಂಬೈ ಸರಣಿ ಸ್ಫೋಟದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿದ್ದ ವಿಶೇಷ ಟಾಡಾ ನ್ಯಾಯಾಲಯ ಮೆನನ್ ಸೇರಿದಂತೆ 10 ಮಂದಿಗೆ ಮರಣದಂಡನೆ ಶಿಕ್ಷೆ ವಿಧಿಸಿತ್ತು.

ಮೆಮೊನ್ ಸಲ್ಲಿಸಿದ್ದ ಪುನರ್ ಪರಿಶೀಲನಾ ಅರ್ಜಿಗೆ 2014ರ ಜೂನ್ 2ರಂದು ಸುಪ್ರೀಂಕೋರ್ಟ್ ನ್ಯಾಯಪೀಠ ತಾತ್ಕಾಲಿಕ ತಡೆಯಾಜ್ಞೆ ನೀಡಿತ್ತು. ನಂತರ ವಿಚಾರಣೆ ನಡೆದು ಅರ್ಜಿ ತಿರಸ್ಕೃತಗೊಂಡಿದೆ. ಈಗ ರಾಷ್ಟ್ರಪತಿಗಳ ಬಳಿ ಕ್ಷಮಾದಾನ ಕೋರುವುದೊಂದೆ ಮೆಮೊನ್ ಗೆ ಉಳಿದಿರುವ ಏಕೈಕ ಮಾರ್ಗವಾಗಿದೆ.
ಪ್ರಕರಣದ ಹಿನ್ನೆಲೆ: ಟೈಗರ್ ಮೆಮೊನ್ ನ ಸೋದರನಾದ ಯಾಕೂಬ್ ಮೆಮನ್ ಚಾರ್ಟೆಡ್ ಅಕೌಂಟೆಂಟ್ ಕೆಲಸ ಮಾಡುತ್ತಿದ್ದ. ತನ್ನ ಅಣ್ಣನಿಗೆ ಈತ ಭಯೋತ್ಪಾದನೆಗೆ ಸಹಕಾರಿಯಾಗಿದ್ದ ಎಂದು ಪೊಲೀಸರು ಈತನನ್ನು 1994ರಲ್ಲಿ ನೇಪಾಳದ ಕಾಠ್ಮಂಡುವಿನಲ್ಲಿ ಬಂಧಿಸಲಾಗಿತ್ತು.
ಸುದೀರ್ಘ ವಿಚಾರಣೆ ನಡೆದು ಟಾಡಾ ನ್ಯಾಯಾಲಯ 2007ರಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಮರಣ ದಂಡನೆ ಶಿಕ್ಷೆ ವಿಧಿಸಿತ್ತು. ನಂತರ ಆತ ಮುಂಬೈ ಹೈಕೋರ್ಟ್ ಮೊರೆ ಹೋಗಿದ್ದ. ಅಲ್ಲೂ ಆತನ ಶಿಕ್ಷೆ ಖಾಯಂಗೊಂಡಿತ್ತು.
ನಂತರ 2013ರಲ್ಲಿ ಸುಪ್ರೀಂಕೋರ್ಟ್ ಅಂಗಳದಲ್ಲೂ ಪ್ರಕರಣದ ವಿಚಾರಣೆ ನಡೆದು ಕೆಳ ಹಂತದ ನ್ಯಾಯಾಲಯದ ಆದೇಶವನ್ನು ಎತ್ತಿ ಹಿಡಿಯಲಾಗಿತ್ತು. ಮುಂಬೈನಲ್ಲಿ ನಡೆದಿದ್ದ ಸರಣಿ ಬಾಂಬ್ ಸ್ಫೋಟದಲ್ಲಿ 257 ಮಂದಿ ಮೃತಪಟ್ಟು, 713 ಮಂದಿ ಗಾಯಗೊಂಡಿದ್ದರು. ಸಿಬಿಐ ಇದರ ತನಿಖೆ ನಡೆಸಿ ದಾವೂದ್ ಇಬ್ರಾಹಿಂ ಸೇರಿದಂತೆ ಹಲವರ ವಿರುದ್ಧ ದೋಷಾರೋಪಣ ಪಟ್ಟಿ ಸಲ್ಲಿಸಿತ್ತು.
ಸುದ್ದಿ ವಿಡಿಯೋದಲ್ಲಿ ನೋಡಿ:












Click it and Unblock the Notifications