ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಗಲ್ಲು ಶಿಕ್ಷೆಗೆ ತಡೆ ಕೋರಿ ಸುಪ್ರೀಂ ಮೊರೆ ಹೋದ ಯಾಕೂಬ್

By ವಿಕಾಸ್ ನಂಜಪ್ಪ
|
Google Oneindia Kannada News

ನವದೆಹಲಿ, ಜುಲೈ 23 : ತನಗೆ ವಿಧಿಸಿರುವ ಗಲ್ಲು ಶಿಕ್ಷೆಗೆ ತಡೆಯಾಜ್ಞೆ ನೀಡಬೇಕೆಂದು ಕೋರಿ 1993ರ ಮುಂಬೈ ಸರಣಿ ಬಾಂಬ್ ಸ್ಫೋಟದ ಪ್ರಮುಖ ಅಪರಾಧಿ ಯಾಕೂಬ್ ಅಬ್ದುಲ್ ರಜಾಕ್ ಮೆಮನ್ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾನೆ. ಎರಡು ದಿನಗಳ ಹಿಂದೆ ಯಾಕೂಬ್ ಕ್ಯೂರೇಟರ್ ಅರ್ಜಿಯನ್ನು ಕೋರ್ಟ್ ತಿರಸ್ಕರಿಸಿತ್ತು.

ಮಹಾರಾಷ್ಟ್ರ ಸರ್ಕಾರ ಜುಲೈ 30ರಂದು ಯಾಕೂಬ್‌ನನ್ನು ಗಲ್ಲಿಗೇರಿಸಲು ನಿರ್ಧರಿಸಿದೆ. ಆದ್ದರಿಂದ ಗುರುವಾರ ಯಾಕೂಬ್ ಸುಪ್ರೀಂಕೋರ್ಟ್ ಮೊರೆ ಹೋಗಿದ್ದು, ತನಗೆ ವಿಧಿಸಿರುವ ಗಲ್ಲುಶಿಕ್ಷೆಗೆ ತಡೆಯಾಜ್ಞೆ ನೀಡಬೇಕು ಎಂದು ಮನವಿ ಮಾಡಿದ್ದಾನೆ. [ಯಾಕೂಬ್ ಗೆ ಗಲ್ಲು ಖಾಯಂ]

death sentence

ರಾಜ್ಯಪಾಲರ ಮುಂದೆ ತನ್ನ ಕ್ಷಮಾದಾನ ಅರ್ಜಿ ಬಾಕಿ ಇದೆ. ಆದ್ದರಿಂದ ಗಲ್ಲು ಶಿಕ್ಷೆಗೆ ತಡೆಯಾಜ್ಞೆ ನೀಡಬೇಕು ಎಂದು ಯಾಕೂಬ್ ಸುಪ್ರೀಂಕೋರ್ಟ್‌ಗೆ ಸಲ್ಲಿಸಿರುವ ಅರ್ಜಿಯಲ್ಲಿ ಮನವಿ ಮಾಡಿದ್ದಾನೆ. ಯಾಕೂಬ್ ಸಲ್ಲಿಸಿದ್ದ ಕ್ಯೂರೇಟರ್ ಅರ್ಜಿಯನ್ನು ಸುಪ್ರೀಂಕೋರ್ಟ್ ಜುಲೈ 21ರಂದು ತಿರಸ್ಕರಿಸಿತ್ತು. [1993ರ ಮುಂಬೈ ಸ್ಫೋಟ 2 ದಶಕದ ನಂತರ ತೀರ್ಪು]

ಮಹಾರಾಷ್ಟ್ರ ಸರ್ಕಾರ ಜುಲೈ 30ರಂದು ನಾಗ್ಪುರ ಜೈಲಿನಲ್ಲಿ ಯಾಕೂಬ್‌ನನ್ನು ಗಲ್ಲಿಗೇರಿಸಲು ಸಿದ್ಧತೆ ನಡೆಸುತ್ತಿದೆ. ಆದರೆ, ಮಹಾರಾಷ್ಟ್ರ ರಾಜ್ಯಪಾಲರ ಮುಂದೆ ಯಾಕೂಬ್ ಸಲ್ಲಿಸಿರುವ ಕ್ಷಮಾದಾನ ಅರ್ಜಿ ಬಾಕಿ ಇದೆ. ಆದ್ದರಿಂದ ಗಲ್ಲು ಶಿಕ್ಷೆಗೆ ತಡೆಯಾಜ್ಞೆ ನೀಡಬೇಕು ಎಂದು ಯಾಕೂಬ್ ಕೋರ್ಟ್‌ಗೆ ಮನವಿ ಮಾಡಿದ್ದಾನೆ. ["ದಾವೂದ್ ಎಲ್ಲೇ ಇರಲಿ ಅವನನ್ನು ಹಿಡಿದು ಕಟಕಟೆ ಏರಿಸ್ತೇವೆ"]

ಮುಂಬೈ ಸರಣಿ ಬಾಂಬ್ ಸ್ಫೋಟ ಪ್ರಕರಣದಲ್ಲಿ ಯಾಕೂಬ್ ಸೇರಿದಂತೆ 10 ಮಂದಿಗೆ ಮುಂಬೈ ವಿಶೇಷ ಟಾಡಾ ಕೋರ್ಟ್ ಮರಣದಂಡನೆ ಶಿಕ್ಷೆ ವಿಧಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಯಾಕೂಬ್ ಸುಪ್ರೀಂಕೋರ್ಟ್‌ಗೆ ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್ 2015ರ ಏಪ್ರಿಲ್‌ನಲ್ಲಿ ತಿರಸ್ಕರಿಸಿತ್ತು.

1993ರ ಮಾರ್ಚ್ 12 ರಂದು ಮುಂಬೈನಲ್ಲಿ ಸರಣಿ ಬಾಂಬ್ ಸ್ಫೋಟ ನಡೆದಿತ್ತು. ಸ್ಫೋಟದಲ್ಲಿ 257 ಮಂದಿ ಮೃತಪಟ್ಟು, 713 ಮಂದಿ ಗಾಯಗೊಂಡಿದ್ದರು. ಸ್ಫೋಟದ ತನಿಖೆ ನಡೆಸಿದ ಸಿಬಿಐ ದಾವೂದ್ ಇಬ್ರಾಹಿಂ ಸೇರಿದಂತೆ ಹಲವರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿತ್ತು. ಯಾಕೂಬ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿಯಾಗಿದ್ದಾನೆ.

English summary
Yakub Memon who was sentenced to death after being found guilty in the 1993 Mumbai serial blasts has now moved the Supreme Court seeking a stay on his execution.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X