ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೇಂದ್ರ ಮಾಹಿತಿ ಆಯೋಗಕ್ಕೆ ಯಶವರ್ಧನ್ ಸಿನ್ಹಾ ಸಾರಥಿ?

|
Google Oneindia Kannada News

ನವದೆಹಲಿ, ಅಕ್ಟೋಬರ್ 29: ಕೇಂದ್ರ ಮಾಹಿತಿ ಆಯೋಗದ ಮುಖ್ಯ ಮಾಹಿತಿ ಆಯುಕ್ತರಾಗಿ ಯಶವರ್ಧನ್ ಸಿನ್ಹಾ ನೇಮಕವಾಗುವ ಸಾಧ್ಯತೆ ಇದೆ. ಆಗಸ್ಟ್ 27ರಿಂದ ಈ ಹುದ್ದೆ ಖಾಲಿಯಾಗಿಯೇ ಇದೆ.

ಮಾಜಿ ಐಎಫ್‌ಎಸ್ ಅಧಿಕಾರಿಯಾದ ಯಶವರ್ಧನ್ ಸಿನ್ಹಾ ಮುಖ್ಯ ಮಾಹಿತಿ ಆಯುಕ್ತರಾಗಿ ನೇಮಕಗೊಳ್ಳಲಿದ್ದಾರೆ ಎಂದು ರಾಷ್ಟ್ರೀಯ ಸುದ್ದಿ ವಾಹಿನಿ ವರದಿ ಮಾಡಿದೆ. ಆಗಸ್ಟ್‌ನಲ್ಲಿ ಬಿಮುಲ್ ಜಿಲ್ಕಾ ನಿವೃತ್ತರಾದ ಬಳಿಕ ಹುದ್ದೆ ಖಾಲಿ ಇದೆ.

1981ನೇ ಬ್ಯಾಚ್ ಐಎಫ್‌ಎಸ್ ಅಧಿಕಾರಿ ಯಶವರ್ಧನ್ ಸಿನ್ಹಾ ನೇಮಕಗೊಳ್ಳುವುದು ಬಹುತೇಕ ಖಚಿತವಾಗಿದೆ. ಅಚ್ಚರಿಯ ಸಂಗತಿಯೊಂದರಲ್ಲಿ ಕಾಂಗ್ರೆಸ್ ಕೇಂದ್ರ ಸರ್ಕಾರಕ್ಕೆ ಮುಖ್ಯ ಮಾಹಿತಿ ಆಯುಕ್ತರ ನೇಮಕಾತಿ ಕುರಿತು ಪತ್ರವೊಂದನ್ನು ಬರೆದಿತ್ತು.

 Yashvardhan Sinha May Next Chief Information Commissioner

ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವರು, ಲೋಕಸಭೆಯ ವಿರೋಧ ಪಕ್ಷದ ನಾಯಕರನ್ನು ಒಳಗೊಂಡಿರುವ ಉನ್ನತ ಮಟ್ಟದ ಸಮಿತಿ ಮುಖ್ಯ ಮಾಹಿತಿ ಆಯುಕ್ತರ ನೇಮಕದ ಕುರಿತು ಕಳೆದ ವಾರ ಸಭೆಗಳನ್ನು ನಡೆಸಿದ್ದಾರೆ.

ರಾಷ್ಟ್ರೀಯ ಸುದ್ದಿ ವಾಹಿನಿ ವರದಿ ಪ್ರಕಾರ ಮುಖ್ಯ ಮಾಹಿತಿ ಆಯುಕ್ತರ ಹುದ್ದೆಗೆ 139 ಹೆಸರುಗಳ ಪೈಕಿ ಎರಡು ಹೆಸರುಗಳನ್ನು ಅಂತಿಮಗೊಳಿಸಲಾಗಿದೆ. ಆದರೆ, ಲೋಕಸಭೆ ಪ್ರತಿಪಕ್ಷ ನಾಯಕ ಅಧೀರ್ ರಂಜನ್ ಉನ್ನತ ಮಟ್ಟದ ಸಭೆಯಲ್ಲಿ ಹೆಸರು ಅಂತಿಮಗೊಳಿಸುವ ವೇಳೆ ಸುಪ್ರೀಂಕೋರ್ಟ್ ನಿಯಮ ಪಾಲನೆ ಮಾಡಿಲ್ಲ ಎಂದು ಆರೋಪಿಸಿದ್ದರು.

ಅಧೀರ್ ರಂಜನ್ ಸರ್ಕಾರಕ್ಕೆ ಬರೆದಿದ್ದ ಪತ್ರದಲ್ಲಿ ಅಧಿಕಾರಿಗಳನ್ನು ಹೊರತುಪಡಿಸಿ ಇತರರನ್ನು ಸಹ ಹುದ್ದೆಗೆ ಪರಿಗಣಿಸಬೇಕು ಎಂಬ ಸುಪ್ರೀಂಕೋರ್ಟ್ ಆದೇಶವನ್ನು ಸರ್ಚ್ ಕಮಿಟಿ ಪಾಲನೆ ಮಾಡಿಲ್ಲ ಎಂದು ಆರೋಪಿಸಿದ್ದರು.

English summary
Yashvardhan Sinha is all set to be the next chief information commissioner (CIC). The position had been lying vacant since August. Yashvardhan Sinha 1981 batch former IFS officer.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X