ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ; ಯೋಗಿ ಆದಿತ್ಯನಾಥ ಭರವಸೆ

|
Google Oneindia Kannada News

ಲಖನೌ, ಜೂನ್ 7: ಅಯೋಧ್ಯಾದಲ್ಲಿ ರಾಮಮಂದಿರವನ್ನು ನಿರ್ಮಿಸುವುದಾಗಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಭರವಸೆ ನೀಡಿದ್ದಾರೆ ಎಂದು ಅರ್ಚಕರ ತಂಡವೊಂದು ತಿಳಿಸಿದೆ.

ಗುರುವಾರ ಯೋಗಿ ಆದಿತ್ಯನಾಥ ಅವರನ್ನು ಭೇಟಿ ಮಾಡಿದ ಅರ್ಚಕರ ಗುಂಪು, ರಾಮಮಂದಿರದ ಭವಿಷ್ಯದ ಕುರಿತು ಸಮಾಲೋಚನೆ ನಡೆಸಿತು.

'ಅಯೋಧ್ಯೆಯಲ್ಲಿ ರಾಮಮಂದಿರ ಕಟ್ಟದಿದ್ದರೆ ಬಿಜೆಪಿಯನ್ನು ಸೋಲಿಸುತ್ತೇವೆ''ಅಯೋಧ್ಯೆಯಲ್ಲಿ ರಾಮಮಂದಿರ ಕಟ್ಟದಿದ್ದರೆ ಬಿಜೆಪಿಯನ್ನು ಸೋಲಿಸುತ್ತೇವೆ'

ರಾಮಮಂದಿರ ನಿರ್ಮಾಣದ ಕುರಿತಂತೆ ಮುಖ್ಯಮಂತ್ರಿ ಅವರೊಂದಿಗೆ ನಾವು ಮಾತುಕತೆ ನಡೆಸಿದ್ದೇವೆ. ಶೀಘ್ರದಲ್ಲಿಯೇ ದೇವಸ್ಥಾನ ನಿರ್ಮಾಣ ಮಾಡುವುದಾಗಿ ಅವರು ಭರವಸೆ ನೀಡಿದ್ದಾರೆ ಎಂದು ಮಹಾಂತ ಸುರೇಶ್ ದಾಸ್ ತಿಳಿಸಿದರು.

yogi adityanath assured to built ram temple in ayodhya

ಸಭೆಗೂ ಮುನ್ನ ಮಾತನಾಡಿದ್ದ ಸುರೇಶ್ ದಾಸ್ ಅವರು, ಒಂದು ವೇಳೆ ಸರ್ಕಾರವು ರಾಮಮಂದಿರ ವಿಚಾರವನ್ನು ಗಂಭೀರವಾಗಿ ಪರಿಗಣಿಸದೆಯೇ ಇದ್ದಲ್ಲಿ, ಅದರ ಪರಿಣಾಮವನ್ನು 2019ರ ಲೋಕಸಭೆ ಚುನಾವಣೆಯಲ್ಲಿ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದರು.

ಅಯೋಧ್ಯೆಯ ವಿವಾದಕ್ಕೆ ಸಂಬಂಧಿಸಿದಂತೆ ವಿವಿಧ ಸಂಘಟನೆಗಳು, ಸಂಘಸಂಸ್ಥೆಗಳು ಸಲ್ಲಿಸಿರುವ ಅರ್ಜಿಗಳು ಸುಪ್ರೀಂಕೋರ್ಟ್‌ನಲ್ಲಿ ವಿಚಾರಣೆ ಹಂತದಲ್ಲಿವೆ.

English summary
A group of Uttarpradesh priests said that the chief minister Yogi Adityanath has assured them the ram mandir will be constructed soon.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X