Uttar Pradesh: ಗ್ರಾಮೀಣ ಮಟ್ಟದಲ್ಲಿ ಸ್ವಚ್ಛತೆ ಹೆಚ್ಚಿಸಲು ಯೋಗಿ ಆದಿತ್ಯನಾಥ್ ಸರ್ಕಾರದ ಹೊಸ ಹೆಜ್ಜೆ

ಲಕ್ನೋ ಜೂನ್ 8: ಉತ್ತರ ಪ್ರದೇಶದಲ್ಲಿ ಸ್ವಚ್ಛತೆಯನ್ನು ಉತ್ತಮವಾಗಿ ನಿರ್ವಹಿಸಲು ಯೋಗಿ ಆದಿತ್ಯನಾಥ್ ನೇತೃತ್ವದ ರಾಜ್ಯ ಸರ್ಕಾರ 'ಸ್ವಚ್ಛ ಭಾರತ ಯೋಜನೆ'ಯನ್ನು ಬಲಪಡಿಸಲು ಶ್ರಮಿಸುತ್ತಿದೆ.

ರಾಜ್ಯ ಸರ್ಕಾರ ಗ್ರಾಮೀಣ ಪ್ರದೇಶಗಳನ್ನು ಕಸ ಮುಕ್ತ ಮಾಡಲು ಬಯಸಿದೆ. ಇದಕ್ಕಾಗಿ ವಿಸ್ತೃತ ಕ್ರಿಯಾ ಯೋಜನೆಯನ್ನು ಕೂಡ ಪ್ರಸ್ತಾಪಿಸಿದೆ. ಅದರಂತೆ ಗ್ರಾಮಗಳಲ್ಲಿ ಸ್ವಚ್ಛತೆ ಮತ್ತು ನೈರ್ಮಲ್ಯ ವ್ಯಾಯಾಮಗಳನ್ನು ಕೈಗೊಳ್ಳಲು ಸುಮಾರು ಒಂದು ಲಕ್ಷ ಕಾರ್ಮಿಕರಿಗೆ ತರಬೇತಿ ನೀಡಲಾಗುವುದು. ಅವರ ಮೇಲೆ ನಿಗಾ ಇಡಲು ಆಡಳಿತಾಧಿಕಾರಿಗಳನ್ನೂ ನೇಮಿಸಲಾಗುವುದು. ಈ ಕ್ರಿಯಾ ಯೋಜನೆಯ ನಿಜವಾದ ಉದ್ದೇಶ ಕಸ ತೆಗೆಯುವುದಷ್ಟೇ ಅಲ್ಲ.

Yogi Adityanath government is a new step

ಬದಲಿಗೆ, ಕಸವನ್ನು ಸರಿಯಾಗಿ ವಿಲೇವಾರಿ ಮಾಡುವುದು ಹೇಗೆ ಎಂಬುದರ ಬಗ್ಗೆ ಕೂಡ ಆಗಿದೆ. ಇದರ ಬೆನ್ನಲ್ಲೇ ರಾಜ್ಯ ಸರ್ಕಾರ ಶೌಚಾಲಯ ನಿರ್ಮಾಣಕ್ಕೆ ಗಂಭೀರ ಪ್ರಯತ್ನ ಮಾಡುತ್ತಿದೆ. ಈ ಕುರಿತು ಮಾತನಾಡಿದ ಅಧಿಕಾರಿಗಳು, 'ರಾಜ್ಯದ ಅಭಿವೃದ್ಧಿಗೆ ಆರ್ಥಿಕತೆ ಎಷ್ಟು ಮುಖ್ಯ ಎಂಬುದು ಎಲ್ಲರಿಗೂ ಗೊತ್ತಿದೆ. ಅಂತೆಯೇ ರಾಜ್ಯಕ್ಕೆ ಸ್ವಚ್ಛತೆ ಎಂಬುದು ಮತ್ತೊಂದು ಅಗತ್ಯವಾದ ಅಮಶ. ಸ್ವಚ್ಛತೆ ಇಲ್ಲದಿದ್ದರೆ ಅಲ್ಲಿ ಏನೂ ಸಾಧನೆ ಮಾಡಲು ಸಾಧ್ಯವಿಲ್ಲ' ಹಾಗಾಗಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸರ್ಕಾರ ಸ್ವಚ್ಛ ಭಾರತ ಯೋಜನೆ ಸಾಧ್ಯವಾಗಿಸಲು ಸಕ್ರಿಯವಾಗಿ ಪ್ರಯತ್ನಿಸುತ್ತಿದೆ.

'ಮೊದಲ ಹಂತದಲ್ಲಿ ರಾಜ್ಯದಲ್ಲಿ ಒಟ್ಟು 2.16 ಕೋಟಿ ಶೌಚಾಲಯಗಳನ್ನು ನಿರ್ಮಿಸಲಾಗಿದೆ. ಅದೇ ರೀತಿ ಘನ ಮತ್ತು ದ್ರವ ತ್ಯಾಜ್ಯದ ಪರಿಣಾಮಕಾರಿ ನಿರ್ವಹಣೆ ಕುರಿತು ಎಲ್ಲ ಗ್ರಾಮಗಳಲ್ಲಿ ತರಬೇತಿ ನೀಡಲಾಗುತ್ತಿದೆ. ಕಳೆದ 6 ವರ್ಷಗಳ ಹಿಂದೆ ಬಯಲು ಶೌಚ ಮಾಡುವವರ ಸಂಖ್ಯೆ ಹೆಚ್ಚಾಗಿತ್ತು. ಆದರೆ ಈಗ ಅದು ಸಾಕಷ್ಟು ಕಡಿಮೆಯಾಗಿದೆ' ಎಂದರು.

ಹಾಲು ಉತ್ಪಾದನೆ ಹೆಚ್ಚಿಸಲು ಹೊಸ ಐಡಿಯಾ..

ಯುಪಿ ಸರ್ಕಾರ ಹೈನುಗಾರಿಕೆ ಕ್ಷೇತ್ರದ ಅಭಿವೃದ್ಧಿಗೆ ನಿರಂತರವಾಗಿ ಶ್ರಮಿಸುತ್ತಿದೆ. ಉತ್ತರ ಪ್ರದೇಶವನ್ನು ಹಾಲು ಉತ್ಪಾದನೆಯಲ್ಲಿ ಮುಂಚೂಣಿಯಲ್ಲಿರುವ ರಾಜ್ಯವನ್ನಾಗಿ ಮಾಡುತ್ತಿದೆ. ಹೀಗಾಗಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಈ ಉಪಕ್ರಮದ ಭಾಗವಾಗಿ 'ನಂದ್ ಬಾಬಾ ಪಾಲ್ ಮಿಷನ್' ಯೋಜನೆಗೆ ಚಾಲನೆ ನೀಡಿದ್ದಾರೆ.

ಈ ಯೋಜನೆಯ ಮೂಲಕ ಹಾಲು ಉತ್ಪಾದಕರು ತಮ್ಮ ಹಳ್ಳಿಗಳಲ್ಲಿ ಹಾಲು ಸಹಕಾರಿ ಸಂಘಗಳ ಮೂಲಕ ತಮ್ಮ ಹಾಲನ್ನು ಸಮಂಜಸವಾದ ಬೆಲೆಗೆ ಮಾರಾಟ ಮಾಡಬಹುದು. ಮೇಲಾಗಿ ಹಾಲಿನ ಉತ್ಪನ್ನಗಳನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಫ್ತು ಮಾಡಲು ಅವಕಾಶವಿರುತ್ತದೆ. ಈ ಮೂಲಕ ವಿದೇಶದಲ್ಲಿ ನೆಲೆಸಿರುವ ಭಾರತೀಯರು ತಮ್ಮ ಮಾತೃ ದೇಶದ ಹಸುಗಳಿಂದ ಪಡೆಯುವ ಹಾಲಿನಿಂದ ತಯಾರಿಸಿದ ಆಹಾರ ಉತ್ಪನ್ನಗಳ ರುಚಿ ನೋಡಬಹುದಾಗಿದೆ ಎಂದು ರಾಜ್ಯ ಸರ್ಕಾರದ ಅಧಿಕಾರಿಗಳು ತಿಳಿಸಿದ್ದಾರೆ.

ರಾಜ್ಯ ಪಶುಸಂಗೋಪನೆ ಮತ್ತು ಹೈನುಗಾರಿಕೆ ಅಭಿವೃದ್ಧಿ ಸಚಿವ ಧರಂಪಾಲ್ ಸಿಂಗ್ ಅವರು ನಿನ್ನೆ ಕಿಸಾನ್ ಬಜಾರ್‌ನಲ್ಲಿ 'ನಂದ್ ಪಾಲ್ ಮಿಷನ್' ಕಚೇರಿಯನ್ನು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ''ರಾಜ್ಯದಲ್ಲಿ ಗ್ರಾಮೀಣ ಆರ್ಥಿಕತೆಯನ್ನು ಸುಧಾರಿಸಲು, ರೈತರಿಗೆ ಹಾಲಿಗೆ ನ್ಯಾಯಯುತ ಬೆಲೆ ಒದಗಿಸಲು ಮತ್ತು ಕೃಷಿ ಮೂಲಸೌಕರ್ಯವನ್ನು ಬಲಪಡಿಸಲು ನಿರಂತರ ಪ್ರಯತ್ನಗಳನ್ನು ಮಾಡಲಾಗುತ್ತಿದೆ. ಇದಕ್ಕೆ ನಂದ ಹಾಲು ಯೋಜನೆ ಖಂಡಿತವಾಗಿಯೂ ಕೊಡುಗೆ ನೀಡುತ್ತದೆ. ಈ ಯೋಜನೆಯಲ್ಲಿ ರಾಜ್ಯಾದ್ಯಂತ 5 ಜಿಲ್ಲೆಗಳಲ್ಲಿ 5 ಡೈರಿ ಫಾರ್ಮ್‌ಗಳನ್ನು ಶೀಘ್ರದಲ್ಲೇ ಸ್ಥಾಪಿಸಲಾಗುವುದು'' ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+