UP Budget 2023: ಮೆಟ್ರೋ ಯೋಜನೆ ಸೇರಿ ಮೂಲಸೌಕರ್ಯ ಅಭಿವೃದ್ಧಿಗೆ ₹ 55000 ಕೋಟಿ ಘೋಷಣೆ
ಉತ್ತರ ಪ್ರದೇಶ ಸರ್ಕಾರ ಮೂಸೌಕರ್ಯಗಳಿಗಾಗಿ ಕೋಟ್ಯಂತರ ರೂ. ಹಣ ಘೋಷಣೆ ಮಾಡಿದೆ. ಪ್ರತಿ ನಗರ, ಜಿಲ್ಲೆಗಳಿಗೆ ಮೆಟ್ರೋ ಯೋಜನೆ ವಿಸ್ತರಣೆಗೆ ಚಿಂತನೆ ನಡೆಸಿದೆ. ಯಾವ ಯೋಜನೆಗಳಿಗೆ ಅನುದಾನ ಎಷ್ಟು ಹಂಚಿಕೆ ತಿಳಿಯಿರಿ.
ಲಖನೌ, ಫೆಬ್ರವರಿ 26: ಉತ್ತರ ಪ್ರದೇಶದ ರಾಜ್ಯ ಸರ್ಕಾರವು ಇಲ್ಲಿನ ಸರ್ವ ಅಭಿವೃದ್ಧಿಗೆ ಒತ್ತು ನೀಡುತ್ತಿದೆ. ಅದರ ಭಾಗವಾಗಿ ಯೋಜನೆಗಳಿಗೆ ಅನುದಾನ ನೀಡುತ್ತಿದ್ದು, ಮೆಟ್ರೋ ರೈಲು ಮತ್ತು ಎಕ್ಸ್‌ಪ್ರೆಸ್‌ವೇ ಸೇರಿ ಮೂಲಸೌಲಭ್ಯಗಳ ಅಭಿವೃದ್ಧಿ ಯೋಜನೆಗಳಿಗೆ ಸಾವಿರಾರು ಕೋಟಿ ರೂಪಾಯಿ ಅನುದಾನ ಘೋಷಿಸಿದೆ.
ರಾಜ್ಯ ಬಜೆಟ್ ನಾಲ್ಕು ದಿನಗಳ ಹಿಂದೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮಂಡಿಸಿದ್ದಾರೆ. ಮೆಟ್ರೋ ರೈಲು ಮತ್ತು ಎಕ್ಸ್‌ಪ್ರೆಸ್‌ವೇ ಸೇರಿ ಮೂಲಸೌಲಭ್ಯಗಳ ಯೋಜನೆಗೆ ಅವರು, 55,000 ಕೋಟಿ ರೂ. ಹಣವನ್ನು ಒದಗಿಸುವುದಾಗಿ ಘೋಷಣೆ ಮಾಡಿದ್ದಾರೆ.
ಇವುಗಳ ಜೊತೆಗೆ ಶಿಕ್ಷಣ ಹಾಗೂ ಇತರ ವಲಯಗಳ ಅಭಿವೃದ್ಧಿಗೆ ಯೋಜನೆ ರೂಪಿಸಿದ್ದು, ಅವುಗಳಿಗೆ ಬಜೆಟ್‌ನಲ್ಲಿ ಹೆಚ್ಚು ಹಣ ಒದಗಿಸಲಾಗಿದೆ. ದೇಶದ ದಕ್ಷಿಣದ ರಾಜ್ಯಗಳು ಶಿಕ್ಷಣ, ಆರೋಗ್ಯ ಮತ್ತು ಅಭಿವೃದ್ಧಿಯಲ್ಲಿ ಯಾವಾಗಲೂ ಅಗ್ರಸ್ಥಾನದಲ್ಲಿವೆ. ಅದೇ ರೀತಿ ದೇಶದ ಉತ್ತರ ಭಾಗದ ರಾಜ್ಯಗಳು ಈ ವಲಯಗಳಲ್ಲಿ ಸೂಚ್ಯಂಕಗಳಲ್ಲಿ ಹಿಂದುಳಿದಿವೆ ಎನ್ನಲಾಗಿದೆ.
ದೇಶದ ಉತ್ತರ ಭಾಗದ ಪ್ರಮುಖ ರಾಜ್ಯಗಳಲ್ಲಿ ಉತ್ತರ ಪ್ರದೇಶ ಹಾಗೂ ಬಿಹಾರದಂತಹ ರಾಜ್ಯಗಳು ಕೆಟ್ಟ ಸ್ತರದಲ್ಲಿವೆ. ಈ ಸಂದರ್ಭದಲ್ಲಿ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಉತ್ತರ ಪ್ರದೇಶವನ್ನು ಎಲ್ಲಾ ಹಂತಗಳಲ್ಲಿ ರಾಜ್ಯವನ್ನು ಅಗ್ರಸ್ಥಾನಕ್ಕೆ ಕೊಂಡೊಯ್ಯುವಲ್ಲಿ ಶ್ರಮಿಸುತ್ತಿದ್ದು, ಅದಕ್ಕಾಗಿ ಹಲವು ಯೋಜನೆಗಳನ್ನು ಘೋಷಣೆ ಮಾಡಿದ್ದಾರೆ.
ಆ ನಿಟ್ಟಿನಲ್ಲಿ ಅಗತ್ಯ ಕ್ರಮಗಳಲ್ಲಿ ಯುಪಿ ಸರ್ಕಾರ ಇತ್ತೀಚೆಗೆ ಹೆಚ್ಚಿನ ಗಮನ ಹರಿಸುತ್ತಿದೆ.

ಯುಪಿ ಪ್ರತಿ ಜಿಲ್ಲೆ, ನಗರದಲ್ಲಿ ಮೆಟ್ರೋ: ಚಿಂತನೆ
ಮಂಡಿಸಲಾದ ಯುಪಿ 2023-24ನೇ ಸಾಲಿನ ಬಜೆಟ್‌ನಲ್ಲಿ ಶಿಕ್ಷಣ ಮತ್ತು ಅಭಿವೃದ್ಧಿ ಯೋಜನೆಗಳಿಗೆ ಎಲ್ಲ ಕ್ಷೇತ್ರಗಳಿಗಿಂತ ಹೆಚ್ಚಿನ ಹಣ ಮೀಸಲಿಡಲಾಗಿದೆ. ಮೂಲಸೌಲಭ್ಯಗಳು ಯಾವವು ಎಂದು ನೋಡುವುದಾದರೆ ಮುಖ್ಯವಾಗಿ ಮೆಟ್ರೋ ರೈಲು, ಹೊಸ ರಸ್ತೆಗಳು, ರಸ್ತೆ ವಿಸ್ತರಣೆ, ರೂ. 55,000 ಕೋಟಿ ಹಂಚಿಕೆಯಾಗಿದೆ. ಈ ಎಲ್ಲವುಗಳು ರಾಜ್ಯದ ಅಭಿವೃದ್ಧಿಯನ್ನು ಸೂಚಿಸುತ್ತವೆ ಎಂದು ಯುಪಿ ಸರ್ಕಾರದ ಅಭಿಪ್ರಾಯವಾಗಿದೆ.
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಭಿವೃದ್ಧಿ ವಿಚಾರದಲ್ಲಿ ದೃಢವಾಗಿದ್ದರಿಂದಲೇ ರಾಜ್ಯದಲ್ಲಿ ಹೊಸ ವಿಮಾನ ನಿಲ್ದಾಣಗಳು ಸ್ಥಾಪನೆಯಾಗಲಿವೆ. ಅದರಂತೆ ಮುಂದಿನ ಕೆಲವೇ ವರ್ಷಗಳಲ್ಲಿ ರಾಜ್ಯದಲ್ಲಿ ಪ್ರತಿ ಜಿಲ್ಲೆಗಳು, ನಗರಗಳು ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ಮೆಟ್ರೋ ರೈಲಿನಂತೆ ಆಧುನಿಕ ಸಾರಿಗೆ ಸೌಲಭ್ಯಗಳನ್ನು ಒದಗಿಸಲು ಮುಖ್ಯಮಂತ್ರಿಗಳು ಯೋಜನೆ ರೂಪಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಕೈಗಾರಿಕಾ ಕಾರಿಡಾರ್ ಸ್ಥಾಪನೆ
ಮೊದಲ ಹಂತದಲ್ಲಿ, ರಾಜ್ಯದ ಪ್ರಮುಖ ಭಾಗಗಳಿಗೆ ಸಂಪರ್ಕ ಕಲ್ಪಿಸಲು ರಸ್ತೆಗಳು ಮತ್ತು ಎಕ್ಸ್‌ಪ್ರೆಸ್‌ವೇಗಳನ್ನು ನಿರ್ಮಿಸಲು ಯೋಜಿಸಲಾಗಿದೆ. ನಂತರ, ಹೊಸ ವಿಮಾನ ನಿಲ್ದಾಣಗಳ ಬಂದರುಗಳು, ರಫ್ತು-ಆಮದು ಕೇಂದ್ರಗಳು ಮತ್ತು ಕೈಗಾರಿಕಾ ಕಾರಿಡಾರ್‌ಗಳನ್ನು ಸ್ಥಾಪಿಸುವ ಚಿಂತನೆ ನಡೆಸಲಾಗಿದೆ ಎಂದು ಅವರು ಬಜೆಟ್ ವೇಳೆ ತಿಳಿಸಿದ್ದಾರೆ.

ಪ್ರವಾಸೋದ್ಯಮಕ್ಕೆ ಸುಧಾರಣೆಗೆ ಆದ್ಯತೆ
ರಾಜ್ಯದ ಪ್ರವಾಸೋದ್ಯಮದ ಸುಧಾರಣವಾಗಿ ಉತ್ತರ ಪ್ರದೇಶದ ಆಧ್ಯಾತ್ಮಿಕ ಪ್ರವಾಸಿ ಸ್ಥಳಗಳನ್ನು ಎಲ್ಲ ಪ್ರದೇಶಗಳಿಗೆ ಸಂಪರ್ಕ ಸಾಧಿಸುವಂತೆ ಹೊಸ ರಸ್ತೆಗಳ ನಿರ್ಮಾಣ ಕಾರ್ಯ ಚುರುಕಾಗಿದೆ. ಇದಕ್ಕಾಗಿ 1,000 ಕೋಟಿ ಮೀಸಲಿಡಲಾಗಿದೆ. ಅದೇ ರೀತಿ ಕೈಗಾರಿಕಾ ನಗರಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳ ನಿರ್ಮಾಣಕ್ಕೆ 50 ಕೋಟಿ ರೂ. ಕಾನ್ಪುರ್ ಹಾಗೂ ಆಗ್ರಾ ನಗರದಲ್ಲಿ ಮೆಟ್ರೋ ರೈಲು ಯೋಜನೆಗಳಿಗೆ ಕ್ರಮವಾಗಿ 585 ಕೋಟಿ ಹಾಗೂ 465 ಕೋಟಿ ರೂ.ಮೀಸಲಿಡಲಾಗಿದೆ.

ಯುಪಿ 1 ಟ್ರಲಿಯನ್ ಡಾಲರ್
ಇನ್ನು ದೆಹಲಿ-ಗಾಜಿಯಾಬಾದ್-ಮೀರತ್ ಎಕ್ಸ್‌ಪ್ರೆಸ್‌ವೇ ರಸ್ತೆ ಯುಪಿಗೆ ರೂ.1,300 ಕೋಟಿ ಹಣ ಮಂಜೂರಾಗಿದೆ. ಮುಂದಿನ ನಾಲ್ಕು ವರ್ಷ (2027)ಗಳಲ್ಲಿ ಒಂದು ಟ್ರಿಲಿಯನ್ ಡಾಲರ್ ಆರ್ಥಿಕ ಗುರಿ ತಲುಪಿದಾಗ ಕೇಂದ್ರವು 5 ಟ್ರಿಲಿಯನ್ ಡಾಲರ್ (350 ಲಕ್ಷ ಕೋಟಿ ರೂ.) ಆರ್ಥಿಕ ಗುರಿಯನ್ನು ಸಾಧಿಸಲಿದೆ. ದೇಶದ ಅತಿದೊಡ್ಡ ರಾಜ್ಯವಾಗಿರುವ ನಮ್ಮ ಉತ್ತರ ಪ್ರದೇಶವು 1 ಟ್ರಿಲಿಯನ್ ಡಾಲರ್ ಆರ್ಥಿಕತೆ ತಲುಪಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಹೀಗಾಗಿಯೇ ಬಜೆಟ್ ನಲ್ಲಿ ರಾಜ್ಯದ ಮೂಲ ಸೌಕರ್ಯಗಳ ವೃದ್ಧಿಗೆ ಒತ್ತು ನೀಡಿರುವುದಾಗಿ ಅವರು ತಿಳಿಸಿದ್ದಾರೆ.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications