ಉತ್ತರ ಪ್ರದೇಶದ ಬ್ಲಾಕ್‌ಗಳಲ್ಲಿ ಆರೋಗ್ಯ ಮೂಲಸೌಕರ್ಯ ಅಭಿವೃದ್ಧಿಗೆ ಮುಂದಾದ ಯೋಗಿ ಆದಿತ್ಯನಾಥ್
ಲಕ್ನೋ ಮಾರ್ಚ್ 23: ರಾಜ್ಯದಲ್ಲಿ ಅದರಲ್ಲೂ ವಿಶೇಷವಾಗಿ ಗ್ರಾಮೀಣ ಭಾಗದಲ್ಲಿ ಆರೋಗ್ಯವನ್ನು ಕಾಪಾಡಲು ಯೋಗಿ ಆದಿತ್ಯನಾಥ್ ಸರ್ಕಾರ ನಿರ್ಧರಿಸಿದೆ. ಇದರ ಬೆನ್ನಲ್ಲೇ ಉತ್ತರ ಪ್ರದೇಶದ ಬ್ಲಾಕ್‌ಗಳಲ್ಲಿ ಆರೋಗ್ಯ ಮೂಲಸೌಕರ್ಯ ಅಭಿವೃದ್ಧಿಯ ಬಗ್ಗೆ ಹೆಚ್ಚು ಗಮನ ನೀಡಲಾಗುತ್ತಿದೆ.
ರಾಜ್ಯದಲ್ಲಿ ಆರೋಗ್ಯ ಸೇವೆಗಳ ಅಭಿವೃದ್ಧಿಯಲ್ಲಿ ಯೋಗಿ ಸರ್ಕಾರ ಸಕ್ರಿಯವಾಗಿದೆ. ಈ ಬಾರಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಬ್ಲಾಕ್‌ಗಳಲ್ಲಿ ಆರೋಗ್ಯ ಕೇಂದ್ರಗಳ ಅಭಿವೃದ್ಧಿಗೆ ಮುತುವರ್ಜಿ ವಹಿಸಿದ್ದಾರೆ. ಗ್ರಾಮೀಣ ಪ್ರದೇಶದ ಜನರು ಬ್ಲಾಕ್ ಆರೋಗ್ಯ ಕೇಂದ್ರಗಳಲ್ಲಿ ಸಮರ್ಪಕ ಆರೋಗ್ಯ ಸೇವೆಗಳನ್ನು ಪಡೆಯಬೇಕು ಎಂದು ಅವರು ಬಯಸುತ್ತಾರೆ. ಆಗ ನಗರದ ಆಸ್ಪತ್ರೆಗಳಲ್ಲಿ ಚಿಕಿತ್ಸೆಗಾಗಿ ಜನಸಂದಣಿ ಕಡಿಮೆ ಇರುತ್ತದೆ ಎನ್ನುವುದು ಅವರ ಆಲೋಚನೆಯಾಗಿದೆ.

ಹೀಗಾಗಿ ರಾಜ್ಯದ ಆರೋಗ್ಯ ಮೂಲಸೌಕರ್ಯವನ್ನು ಸುಧಾರಿಸುವಲ್ಲಿ ಯೋಗಿ ಸರ್ಕಾರ ಸಕ್ರಿಯವಾಗಿದ್ದು, ರಾಜ್ಯದ ಆಸ್ಪತ್ರೆಗಳ ವೈದ್ಯಕೀಯ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ಶ್ರದ್ಧೆಯಿಂದ ಕೆಲಸ ಮಾಡುವಂತೆ ನಿರ್ದೇಶನ ನೀಡಿದ್ದಾರೆ. ಯೋಗಿ ಸರ್ಕಾರವು ವಿಶೇಷವಾಗಿ ಗ್ರಾಮೀಣ ಆರೋಗ್ಯ ಕೇಂದ್ರಗಳು ಮತ್ತು ಬ್ಲಾಕ್ ಆರೋಗ್ಯ ಕೇಂದ್ರಗಳ ಅಭಿವೃದ್ಧಿಗೆ ಒತ್ತು ನೀಡುತ್ತಿದೆ. ಪ್ರತಿ ಬ್ಲಾಕ್‌ನ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರ ಕೊರತೆಯಾಗದಂತೆ ನೋಡಿಕೊಳ್ಳುವಂತೆ ತಿಳಿಸಿದ್ದಾರೆ.
ಆರೋಗ್ಯ ಮೂಲಸೌಕರ್ಯ ಅಭಿವೃದ್ಧಿ
ಯೋಗಿ ಸರ್ಕಾರ್ ಅವರ ಸೂಚನೆಯಂತೆ ಕೆಲಸ ನಡೆಯುತ್ತಿದೆಯೇ ಎಂದು ಪರಿಶೀಲಿಸಲು ಪ್ರಾರಂಭವಾಗಿದೆ. ಯೋಗಿ ಆದಿತ್ಯನಾಥ್ ಅವರು ಈಗಾಗಲೇ ರಾಜ್ಯದ 100 ಬ್ಲಾಕ್ ಆರೋಗ್ಯ ಕೇಂದ್ರಗಳ ಪ್ರಗತಿ ಪರಿಶೀಲನೆ ನಡೆಸಿದ್ದಾರೆ. 100 ಬ್ಲಾಕ್ ಆರೋಗ್ಯ ಕೇಂದ್ರಗಳ ಕಾಮಗಾರಿ ಪರಿಶೀಲಿಸಿದ್ದಾರೆ. ಪ್ರತಿ ಬ್ಲಾಕ್ ಆರೋಗ್ಯ ಕೇಂದ್ರದಲ್ಲಿ ಆರೋಗ್ಯ ಎಟಿಎಂ ಸೇವೆ ಆರಂಭಿಸಲಾಗುತ್ತಿದೆ. ಈ ಆರೋಗ್ಯ ಎಟಿಎಂ ಸೇವೆಯ ಮೂಲಕ ಗ್ರಾಮೀಣ ಪ್ರದೇಶದ ಜನರು ಸುಲಭವಾಗಿ ಆರೋಗ್ಯ ಸೇವೆಗಳನ್ನು ಪಡೆಯುತ್ತಾರೆ.

ಯೋಗಿ ಸರ್ಕಾರ ಯಾವ ಬ್ಲಾಕ್‌ಗಳಲ್ಲಿ ಯಾವ ಆರೋಗ್ಯ ಸೇವೆಗಳನ್ನು ಒದಗಿಸುತ್ತಿದೆ ಎಂಬುದರ ಕುರಿತು ಚಟುವಟಿಕೆಗಳನ್ನು ಪ್ರಾರಂಭಿಸಿದೆ. ಇದರೊಂದಿಗೆ ಎಲ್ಲಾ ಕಾರ್ಯಗಳ ಮೇಲ್ವಿಚಾರಣೆ ಮಾಡಲಾಗುತ್ತಿದೆ. ಆರೋಗ್ಯ ಎಟಿಎಂ ಕೆಲಸ ಎಲ್ಲಿಯವರೆಗೆ ಸಾಗಿದೆ ಎಂದು ಅವರು ವಿಚಾರಿಸುತ್ತಿದ್ದಾರೆ. ಆರೋಗ್ಯ ಮೂಲಸೌಕರ್ಯಗಳ ವಿಷಯದಲ್ಲಿ ಉತ್ತರ ಪ್ರದೇಶದ ಗ್ರಾಮ ಪಂಚಾಯತ್‌ಗಳನ್ನು ಸ್ವಾವಲಂಬಿಯನ್ನಾಗಿ ಮಾಡಲು ಯೋಗಿ ಸರ್ಕಾರ ವಿಶೇಷ ಗಮನ ಹರಿಸುತ್ತಿದೆ. ಗ್ರಾಮೀಣ ಭಾಗದ ಜನರು ಸಣ್ಣಪುಟ್ಟ ಚಿಕಿತ್ಸೆಗೂ ನಗರಗಳಿಗೆ ಓಡಬೇಕಿಲ್ಲ. ಅವರು ಹೆಚ್ಚುವರಿ ಸೇವೆಗಳು ಮತ್ತು ಮೂಲಸೌಕರ್ಯಗಳ ಕೊರತೆಯಿಂದಾಗಿ ನಗರದ ಆಸ್ಪತ್ರೆಗಳಿಗೆ ಉಲ್ಲೇಖಿಸದಿರುವ ಬಗ್ಗೆ ಹೆಚ್ಚು ಗಮನ ಹರಿಸಲಾಗುತ್ತಿದೆ.
ಗ್ರಾಮೀಣ ಭಾಗದಲ್ಲಿ ಆರೋಗ್ಯಕ್ಕೆ ಹೆಚ್ಚು ಒತ್ತು
ಯೋಗಿ ಸರ್ಕಾರ ಆರಂಭವಾಗುವವರೆಗೆ ಉತ್ತರ ಪ್ರದೇಶದಲ್ಲಿ ಆರೋಗ್ಯ ಸೇವೆಗಳು ತುಂಬಾ ಕಳಪೆಯಾಗಿತ್ತು. ಆ ಪರಿಸ್ಥಿತಿಯಿಂದ ರಾಜ್ಯವನ್ನು ಹೊರತರಲು ಯೋಗಿ ಸರ್ಕಾರ ಪ್ರಯತ್ನಿಸುತ್ತಿದೆ. ಅದಕ್ಕಾಗಿಯೇ ಯೋಗಿ ಆದಿತ್ಯನಾಥ್ ಅವರು ಗ್ರಾಮೀಣ ಪ್ರದೇಶಗಳಲ್ಲಿ ಆರೋಗ್ಯ ಮೂಲಸೌಕರ್ಯಗಳ ಅಭಿವೃದ್ಧಿಯಲ್ಲಿ ಹೆಚ್ಚು ಸಕ್ರಿಯರಾಗಿದ್ದಾರೆ. ಈ ನಿಟ್ಟಿನಲ್ಲಿ ಅವರು ರಾಜ್ಯದ ಆರೋಗ್ಯ ಇಲಾಖೆ ಶ್ರದ್ಧೆಯಿಂದ ಕೆಲಸ ಮಾಡುವಂತೆ ಸೂಚಿಸಿದರು. ಸ್ವಾವಲಂಬಿ ಗ್ರಾಮ ಪಂಚಾಯಿತಿ ನಿರ್ಮಾಣದ ಗುರಿಯೊಂದಿಗೆ ಮುನ್ನಡೆಯುತ್ತಿದ್ದಾರೆ.

ಕಾಮಗಾರಿ ಪ್ರಗತಿ ಪರಿಶೀಲನೆಗೆ ಒಬ್ಬ ನೋಡಲ್ ಅಧಿಕಾರಿಯನ್ನು ನೇಮಿಸಲಾಗಿದೆ. ಅವರ ಉಸ್ತುವಾರಿಯಲ್ಲಿ ಸಂಪೂರ್ಣ ಕೆಲಸ ನಡೆಯುತ್ತಿದೆ. ಆರೋಗ್ಯ ಸೇವೆಗಳ ಹೊರತಾಗಿ ಗ್ರಾಮೀಣ ಭಾಗದಲ್ಲಿ ಮಕ್ಕಳಿಗೆ ಮತ್ತು ತಾಯಂದಿರಿಗೆ ಪೌಷ್ಠಿಕ ಆಹಾರ ಲಭ್ಯವಾಗುವಂತೆ ನೋಡಿಕೊಳ್ಳಲು ನಿರ್ದೇಶನ ನೀಡಲಾಗಿದೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರೇ ಆ ಕೆಲಸ ನೋಡತೊಡಗಿದ್ದಾರೆ. ಆರೋಗ್ಯ ಇಲಾಖೆ ಸಿಬ್ಬಂದಿಗೂ ತರಬೇತಿ ನೀಡಲಾಗುತ್ತಿದೆ.












Click it and Unblock the Notifications