Get Updates
Get notified of breaking news, exclusive insights, and must-see stories!

Yumnam Khemchand Singh: ಮಣಿಪುರ ನೂತನ ಸಿಎಂ ಆಗಿ ಯುಮ್ನಮ್ ಖೇಮ್ಚಂದ್ ಸಿಂಗ್ ಪ್ರಮಾಣವಚನ ಸ್ವೀಕಾರ

Yumnam Khemchand Singh: ಮಣಿಪುರದ ನೂತನ ಮುಖ್ಯಮಂತ್ರಿಯಾಗಿ ಯುಮ್ನಮ್ ಖೇಮ್ಚಂದ್ ಸಿಂಗ್ ಅವರು ಇಂದು ಫೆಬ್ರವರಿ 4ರ ಬುಧವಾರ ಅಧಿಕೃತವಾಗಿ ಪ್ರಮಾಣವಚನ ಸ್ವೀಕರಿಸಿದರು. ಸುಮಾರು ಒಂದು ವರ್ಷ ಕಾಲ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಯಲ್ಲಿದ್ದ ನಂತರ ಹೊಸ ಸರ್ಕಾರ ರಚನೆಯಾಗಿದ್ದು, ಈ ಬೆಳವಣಿಗೆಯನ್ನು ರಾಜ್ಯದ ರಾಜಕೀಯದಲ್ಲಿ ಮಹತ್ವದ ತಿರುವು ಎಂದು ಕಾಣಲಾಗುತ್ತಿದೆ. ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದ ಖೇಮ್ಚಂದ್ ಸಿಂಗ್ ಅವರಿಗೆ ಎನ್‌ಡಿಎ ಮೈತ್ರಿಕೂಟದ ಇತರ ಪಕ್ಷಗಳ ಶಾಸಕರ ಬೆಂಬಲವೂ ದೊರೆತಿದೆ.

ಮೈತೇಯಿ ಸಮುದಾಯಕ್ಕೆ ಸೇರಿದ ಖೇಮ್ಚಂದ್ ಸಿಂಗ್ ಅವರು ರಾಜಕೀಯದಲ್ಲಿ ಉತ್ತಮ ಅನುಭವಿ ನಾಯಕನಾಗಿದ್ದು, ಹಿಂದೆ ವಿಧಾನಸಭಾ ಸ್ಪೀಕರ್ ಹಾಗೂ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ. ಅವರ ನಾಯಕತ್ವದಲ್ಲಿ ರಾಜ್ಯದಲ್ಲಿ ಶಾಂತಿ ಸ್ಥಾಪನೆ, ಅಭಿವೃದ್ಧಿ ಕಾರ್ಯಗಳಿಗೆ ವೇಗ ನೀಡುವುದು ಹಾಗೂ ಜನರ ವಿಶ್ವಾಸ ಮರಳಿ ಪಡೆಯುವುದು ಪ್ರಮುಖ ಸವಾಲಾಗಿ ಪರಿಣಮಿಸಿದೆ. ಹೊಸ ಮುಖ್ಯಮಂತ್ರಿ ಅಧಿಕಾರ ಸ್ವೀಕರಿಸಿರುವ ಹಿನ್ನೆಲೆ, ಮಣಿಪುರದಲ್ಲಿ ಸ್ಥಿರ ಆಡಳಿತ ಆರಂಭವಾಗಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.

Yumnam Khemchand Singh Takes Oath as New Manipur Chief Minister

ಮಣಿಪುರದಲ್ಲಿ ಜಾರಿಯಲ್ಲಿದ್ದ ರಾಷ್ಟ್ರಪತಿ ಆಡಳಿತ ಕೊನೆಗೊಂಡಿದ್ದು, ರಾಜ್ಯಕ್ಕೆ ಹೊಸ ಸರ್ಕಾರ ರಚನೆಯಾಗಿದೆ. ಬಿಜೆಪಿ ನಾಯಕ ಯುಮ್ನಮ್ ಖೇಮ್‌ಚಂದ್ ಸಿಂಗ್ ಅವರು ಮಣಿಪುರದ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಜನಾಂಗೀಯ ಸಂಘರ್ಷದಿಂದ ರಾಜ್ಯದಲ್ಲಿ ರಾಜಕೀಯ ಸ್ಥಿರತೆ ತರುವ ಉದ್ದೇಶದಿಂದ ಈ ಹೊಸ ಆಡಳಿತಕ್ಕೆ ಮಹತ್ವ ನೀಡಲಾಗುತ್ತಿದೆ.

ಇಬ್ಬರು ಡಿಸಿಎಂ ಆಗಿ ಪ್ರಮಾಣವಚನ ಸ್ವೀಕಾರ: ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ಖೇಮ್‌ಚಂದ್ ಸಿಂಗ್ ಮೈಟೈ ಸಮುದಾಯಕ್ಕೆ ಸೇರಿದ್ದು, ಅವರೊಂದಿಗೆ ಇಬ್ಬರು ಉಪಮುಖ್ಯಮಂತ್ರಿಗಳೂ ಪ್ರಮಾಣವಚನ ಸ್ವೀಕರಿಸಿದ್ದಾರೆ. ಕುಕಿ-ಝೋ ಸಮುದಾಯದ ಪ್ರತಿನಿಧಿ ಒಬ್ಬರು ಮತ್ತು ನಾಗಾ ಸಮುದಾಯದ ಪ್ರತಿನಿಧಿ ಇನ್ನೊಬ್ಬರು ಉಪಮುಖ್ಯಮಂತ್ರಿಗಳಾಗಿ ಸ್ಥಾನ ಪಡೆದಿದ್ದಾರೆ. ಇದರಿಂದ ವಿವಿಧ ಸಮುದಾಯಗಳಿಗೆ ಸಮಾನ ಪ್ರತಿನಿಧಿತ್ವ ನೀಡುವ ಪ್ರಯತ್ನ ನಡೆಯುತ್ತಿದೆ ಎಂಬ ಸಂದೇಶ ಹೊರಬಿದ್ದಿದೆ.

ಕೇಂದ್ರ ಸರ್ಕಾರದ ಅಧಿಸೂಚನೆಯೊಂದಿಗೆ ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ರದ್ದುಗೊಳಿಸಲಾಗಿದ್ದು, ಹೊಸ ಸರ್ಕಾರ ರಚನೆಗೆ ಅವಕಾಶ ದೊರೆತಿದೆ. 2025ರ ಫೆಬ್ರವರಿಯಲ್ಲಿ ಆಗಿನ ಮುಖ್ಯಮಂತ್ರಿ ಎನ್.ಬಿರೇನ್ ಸಿಂಗ್ ರಾಜೀನಾಮೆ ನೀಡಿದ ನಂತರ ರಾಜ್ಯದಲ್ಲಿ ಆಡಳಿತಾತ್ಮಕ ಶೂನ್ಯತೆ ಉಂಟಾಗಿತ್ತು. ಜನಾಂಗೀಯ ಹಿಂಸಾಚಾರ ಹಿನ್ನೆಲೆದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಯಾಗಿತ್ತು. ಇದೀಗ ಸುಮಾರು ಒಂದು ವರ್ಷದ ಬಳಿಕ ಹೊಸ ಸರ್ಕಾರ ಅಧಿಕಾರ ಸ್ವೀಕರಿಸಿದೆ.

60 ಸದಸ್ಯರ ವಿಧಾನಸಭೆಯಲ್ಲಿ ಬಿಜೆಪಿ ಬಹುಮತ ಹೊಂದಿದ್ದು, ಸರ್ಕಾರ ರಚನೆಗೆ ಅಗತ್ಯ ಸಂಖ್ಯಾಬಲವನ್ನು ಹೊಂದಿದೆ. ಎರಡು ಬಾರಿ ಶಾಸಕರಾಗಿರುವ ಖೇಮ್‌ಚಂದ್ ಸಿಂಗ್, ಈ ಹಿಂದೆ ವಿಧಾನಸಭಾ ಸ್ಪೀಕರ್ ಆಗಿಯೂ ಸೇವೆ ಸಲ್ಲಿಸಿದ್ದು, ಹಲವು ಖಾತೆಗಳನ್ನು ನಿರ್ವಹಿಸಿದ ಅನುಭವ ಹೊಂದಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಹೊಸ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳಿಗೆ ಅಭಿನಂದನೆ ಸಲ್ಲಿಸಿ, "ಮಣಿಪುರದಲ್ಲಿ ಶಾಂತಿ, ಅಭಿವೃದ್ಧಿ ಮತ್ತು ಸಮಗ್ರ ಪ್ರಗತಿಗೆ ಸರ್ಕಾರ ಶ್ರಮಿಸಲಿದೆ," ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಕುರಿತು ಅವರು ತಮ್ಮ ಟ್ವಿಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

"ಮಣಿಪುರದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಶ್ರೀ ಯುಮ್ನಮ್ ಖೇಮ್‌ಚಂದ್ ಸಿಂಗ್ ಜೀ ಅವರಿಗೆ ಹಾರ್ದಿಕ ಅಭಿನಂದನೆಗಳು. ರಾಜ್ಯದ ಉಪಮುಖ್ಯಮಂತ್ರಿಗಳಾಗಿ ಪ್ರಮಾಣವಚನ ಸ್ವೀಕರಿಸಿದ ಶ್ರೀಮತಿ ನೆಮ್ಚಾ ಕಿಪ್ಗೆನ್ ಹಾಗೂ ಲೋಸಿ ದಿಖೋ ಅವರಿಗೆ, ಜೊತೆಗೆ ಮಣಿಪುರ ಸರ್ಕಾರದಲ್ಲಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಕೊಂಥೌಜಮ್ ಗೋವಿಂದಾಸ್ ಸಿಂಗ್ ಮತ್ತು ಖುರೈಜಮ್ ಲೋಕೆನ್ ಸಿಂಗ್ ಅವರಿಗೆ ನನ್ನ ಅಭಿನಂದನೆಗಳು. ಅವರು ಮಣಿಪುರದ ನನ್ನ ಸಹೋದರರು ಹಾಗೂ ಸಹೋದರಿಯರ ಅಭಿವೃದ್ಧಿ ಮತ್ತು ಸಮೃದ್ಧಿಗಾಗಿ ಪರಿಶ್ರಮದಿಂದ ಕೆಲಸ ಮಾಡುವರು ಎಂಬ ವಿಶ್ವಾಸ ನನಗಿದೆ," ಎಂದು ತಿಳಿಸಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+