Yumnam Khemchand Singh: ಮಣಿಪುರ ನೂತನ ಸಿಎಂ ಆಗಿ ಯುಮ್ನಮ್ ಖೇಮ್ಚಂದ್ ಸಿಂಗ್ ಪ್ರಮಾಣವಚನ ಸ್ವೀಕಾರ
Yumnam Khemchand Singh: ಮಣಿಪುರದ ನೂತನ ಮುಖ್ಯಮಂತ್ರಿಯಾಗಿ ಯುಮ್ನಮ್ ಖೇಮ್ಚಂದ್ ಸಿಂಗ್ ಅವರು ಇಂದು ಫೆಬ್ರವರಿ 4ರ ಬುಧವಾರ ಅಧಿಕೃತವಾಗಿ ಪ್ರಮಾಣವಚನ ಸ್ವೀಕರಿಸಿದರು. ಸುಮಾರು ಒಂದು ವರ್ಷ ಕಾಲ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಯಲ್ಲಿದ್ದ ನಂತರ ಹೊಸ ಸರ್ಕಾರ ರಚನೆಯಾಗಿದ್ದು, ಈ ಬೆಳವಣಿಗೆಯನ್ನು ರಾಜ್ಯದ ರಾಜಕೀಯದಲ್ಲಿ ಮಹತ್ವದ ತಿರುವು ಎಂದು ಕಾಣಲಾಗುತ್ತಿದೆ. ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದ ಖೇಮ್ಚಂದ್ ಸಿಂಗ್ ಅವರಿಗೆ ಎನ್ಡಿಎ ಮೈತ್ರಿಕೂಟದ ಇತರ ಪಕ್ಷಗಳ ಶಾಸಕರ ಬೆಂಬಲವೂ ದೊರೆತಿದೆ.
ಮೈತೇಯಿ ಸಮುದಾಯಕ್ಕೆ ಸೇರಿದ ಖೇಮ್ಚಂದ್ ಸಿಂಗ್ ಅವರು ರಾಜಕೀಯದಲ್ಲಿ ಉತ್ತಮ ಅನುಭವಿ ನಾಯಕನಾಗಿದ್ದು, ಹಿಂದೆ ವಿಧಾನಸಭಾ ಸ್ಪೀಕರ್ ಹಾಗೂ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ. ಅವರ ನಾಯಕತ್ವದಲ್ಲಿ ರಾಜ್ಯದಲ್ಲಿ ಶಾಂತಿ ಸ್ಥಾಪನೆ, ಅಭಿವೃದ್ಧಿ ಕಾರ್ಯಗಳಿಗೆ ವೇಗ ನೀಡುವುದು ಹಾಗೂ ಜನರ ವಿಶ್ವಾಸ ಮರಳಿ ಪಡೆಯುವುದು ಪ್ರಮುಖ ಸವಾಲಾಗಿ ಪರಿಣಮಿಸಿದೆ. ಹೊಸ ಮುಖ್ಯಮಂತ್ರಿ ಅಧಿಕಾರ ಸ್ವೀಕರಿಸಿರುವ ಹಿನ್ನೆಲೆ, ಮಣಿಪುರದಲ್ಲಿ ಸ್ಥಿರ ಆಡಳಿತ ಆರಂಭವಾಗಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.

ಮಣಿಪುರದಲ್ಲಿ ಜಾರಿಯಲ್ಲಿದ್ದ ರಾಷ್ಟ್ರಪತಿ ಆಡಳಿತ ಕೊನೆಗೊಂಡಿದ್ದು, ರಾಜ್ಯಕ್ಕೆ ಹೊಸ ಸರ್ಕಾರ ರಚನೆಯಾಗಿದೆ. ಬಿಜೆಪಿ ನಾಯಕ ಯುಮ್ನಮ್ ಖೇಮ್ಚಂದ್ ಸಿಂಗ್ ಅವರು ಮಣಿಪುರದ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಜನಾಂಗೀಯ ಸಂಘರ್ಷದಿಂದ ರಾಜ್ಯದಲ್ಲಿ ರಾಜಕೀಯ ಸ್ಥಿರತೆ ತರುವ ಉದ್ದೇಶದಿಂದ ಈ ಹೊಸ ಆಡಳಿತಕ್ಕೆ ಮಹತ್ವ ನೀಡಲಾಗುತ್ತಿದೆ.
ಇಬ್ಬರು ಡಿಸಿಎಂ ಆಗಿ ಪ್ರಮಾಣವಚನ ಸ್ವೀಕಾರ: ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ಖೇಮ್ಚಂದ್ ಸಿಂಗ್ ಮೈಟೈ ಸಮುದಾಯಕ್ಕೆ ಸೇರಿದ್ದು, ಅವರೊಂದಿಗೆ ಇಬ್ಬರು ಉಪಮುಖ್ಯಮಂತ್ರಿಗಳೂ ಪ್ರಮಾಣವಚನ ಸ್ವೀಕರಿಸಿದ್ದಾರೆ. ಕುಕಿ-ಝೋ ಸಮುದಾಯದ ಪ್ರತಿನಿಧಿ ಒಬ್ಬರು ಮತ್ತು ನಾಗಾ ಸಮುದಾಯದ ಪ್ರತಿನಿಧಿ ಇನ್ನೊಬ್ಬರು ಉಪಮುಖ್ಯಮಂತ್ರಿಗಳಾಗಿ ಸ್ಥಾನ ಪಡೆದಿದ್ದಾರೆ. ಇದರಿಂದ ವಿವಿಧ ಸಮುದಾಯಗಳಿಗೆ ಸಮಾನ ಪ್ರತಿನಿಧಿತ್ವ ನೀಡುವ ಪ್ರಯತ್ನ ನಡೆಯುತ್ತಿದೆ ಎಂಬ ಸಂದೇಶ ಹೊರಬಿದ್ದಿದೆ.
ಕೇಂದ್ರ ಸರ್ಕಾರದ ಅಧಿಸೂಚನೆಯೊಂದಿಗೆ ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ರದ್ದುಗೊಳಿಸಲಾಗಿದ್ದು, ಹೊಸ ಸರ್ಕಾರ ರಚನೆಗೆ ಅವಕಾಶ ದೊರೆತಿದೆ. 2025ರ ಫೆಬ್ರವರಿಯಲ್ಲಿ ಆಗಿನ ಮುಖ್ಯಮಂತ್ರಿ ಎನ್.ಬಿರೇನ್ ಸಿಂಗ್ ರಾಜೀನಾಮೆ ನೀಡಿದ ನಂತರ ರಾಜ್ಯದಲ್ಲಿ ಆಡಳಿತಾತ್ಮಕ ಶೂನ್ಯತೆ ಉಂಟಾಗಿತ್ತು. ಜನಾಂಗೀಯ ಹಿಂಸಾಚಾರ ಹಿನ್ನೆಲೆದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಯಾಗಿತ್ತು. ಇದೀಗ ಸುಮಾರು ಒಂದು ವರ್ಷದ ಬಳಿಕ ಹೊಸ ಸರ್ಕಾರ ಅಧಿಕಾರ ಸ್ವೀಕರಿಸಿದೆ.
60 ಸದಸ್ಯರ ವಿಧಾನಸಭೆಯಲ್ಲಿ ಬಿಜೆಪಿ ಬಹುಮತ ಹೊಂದಿದ್ದು, ಸರ್ಕಾರ ರಚನೆಗೆ ಅಗತ್ಯ ಸಂಖ್ಯಾಬಲವನ್ನು ಹೊಂದಿದೆ. ಎರಡು ಬಾರಿ ಶಾಸಕರಾಗಿರುವ ಖೇಮ್ಚಂದ್ ಸಿಂಗ್, ಈ ಹಿಂದೆ ವಿಧಾನಸಭಾ ಸ್ಪೀಕರ್ ಆಗಿಯೂ ಸೇವೆ ಸಲ್ಲಿಸಿದ್ದು, ಹಲವು ಖಾತೆಗಳನ್ನು ನಿರ್ವಹಿಸಿದ ಅನುಭವ ಹೊಂದಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಹೊಸ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳಿಗೆ ಅಭಿನಂದನೆ ಸಲ್ಲಿಸಿ, "ಮಣಿಪುರದಲ್ಲಿ ಶಾಂತಿ, ಅಭಿವೃದ್ಧಿ ಮತ್ತು ಸಮಗ್ರ ಪ್ರಗತಿಗೆ ಸರ್ಕಾರ ಶ್ರಮಿಸಲಿದೆ," ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಕುರಿತು ಅವರು ತಮ್ಮ ಟ್ವಿಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
Congratulations to Shri Yumnam Khemchand Singh Ji on taking oath as the Chief Minister of Manipur.
— Narendra Modi (@narendramodi) February 4, 2026
I would like to congratulate Smt. Nemcha Kipgen Ji and Shri Losii Dikho Ji on taking oath as the Deputy Chief Ministers of the state and Shri Konthoujam Govindas Singh Ji as well…
"ಮಣಿಪುರದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಶ್ರೀ ಯುಮ್ನಮ್ ಖೇಮ್ಚಂದ್ ಸಿಂಗ್ ಜೀ ಅವರಿಗೆ ಹಾರ್ದಿಕ ಅಭಿನಂದನೆಗಳು. ರಾಜ್ಯದ ಉಪಮುಖ್ಯಮಂತ್ರಿಗಳಾಗಿ ಪ್ರಮಾಣವಚನ ಸ್ವೀಕರಿಸಿದ ಶ್ರೀಮತಿ ನೆಮ್ಚಾ ಕಿಪ್ಗೆನ್ ಹಾಗೂ ಲೋಸಿ ದಿಖೋ ಅವರಿಗೆ, ಜೊತೆಗೆ ಮಣಿಪುರ ಸರ್ಕಾರದಲ್ಲಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಕೊಂಥೌಜಮ್ ಗೋವಿಂದಾಸ್ ಸಿಂಗ್ ಮತ್ತು ಖುರೈಜಮ್ ಲೋಕೆನ್ ಸಿಂಗ್ ಅವರಿಗೆ ನನ್ನ ಅಭಿನಂದನೆಗಳು. ಅವರು ಮಣಿಪುರದ ನನ್ನ ಸಹೋದರರು ಹಾಗೂ ಸಹೋದರಿಯರ ಅಭಿವೃದ್ಧಿ ಮತ್ತು ಸಮೃದ್ಧಿಗಾಗಿ ಪರಿಶ್ರಮದಿಂದ ಕೆಲಸ ಮಾಡುವರು ಎಂಬ ವಿಶ್ವಾಸ ನನಗಿದೆ," ಎಂದು ತಿಳಿಸಿದ್ದಾರೆ.
-
ಬಾಗಲಕೋಟೆ, ದಾವಣಗೆರೆ ಉಪಚುನಾವಣೆ: ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತ-ಬಿ.ಎಸ್.ಯಡಿಯೂರಪ್ಪ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ












Click it and Unblock the Notifications