ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Annamalai : ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈಗೆ Z ಶ್ರೇಣಿ ಭದ್ರತೆ

|
Google Oneindia Kannada News

ಚೆನ್ನೈ, ಜನವರಿ 13; ಮಾಜಿ ಐಪಿಎಸ್ ಅಧಿಕಾರಿ, ತಮಿಳುನಾಡು ಬಿಜೆಪಿಯ ರಾಜ್ಯಾಧ್ಯಕ್ಷ ಅಣ್ಣಾಮಲೈಗೆ Z ಶ್ರೇಣಿಯ ಭದ್ರತೆ ನೀಡಲಾಗುತ್ತದೆ. ಗುಪ್ತಚರ ಇಲಾಖೆ ವರದಿಯ ಅನ್ವಯ ಕೇಂದ್ರ ಗೃಹ ಇಲಾಖೆ ಈ ಭದ್ರತೆ ನೀಡಲಿದೆ.

ಅಣ್ಣಾಮಲೈಗೆ ಝೆಡ್ ಶ್ರೇಣಿ ಭದ್ರತೆ ನೀಡಲು ಕೇಂದ್ರ ಗೃಹ ಸಚಿವಾಲಯ ನಿರ್ಧರಿಸಿದೆ. ಒಟ್ಟು 33 ಕಮಾಂಡೋಗಳು ಅವರ ಭದ್ರತೆಗೆ ನಿಯೋಜನೆಗೊಳ್ಳಲಿದ್ದಾರೆ.

ಮಕರ ಸಂಕ್ರಾಂತಿ ವಿಶೇಷ ಪುಟ

ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈಗೆ ಮಾವೋವಾದಿಗಳು ಸೇರಿದಂತೆ ಇತರರಿಂದ ಜೀವ ಬೆದರಿಕೆ ಇದೆ ಎಂದು ಗುಪ್ತಚರ ಇಲಾಖೆ ಕೇಂದ್ರ ಗೃಹ ಸಚಿವಾಲಯಕ್ಕೆ ವರದಿ ನೀಡಿತ್ತು.

ಒಪಿಎಸ್ vs ಇಪಿಎಸ್; ಅಣ್ಣಾ ದ್ರಾವಿಡ ಪಕ್ಷದೊಳಗಿನ ತುಮುಲಕ್ಕೆ ತೆರೆ? ಒಪಿಎಸ್ vs ಇಪಿಎಸ್; ಅಣ್ಣಾ ದ್ರಾವಿಡ ಪಕ್ಷದೊಳಗಿನ ತುಮುಲಕ್ಕೆ ತೆರೆ?

Z Category Security For Tamil Nadu BJP President Annamalai

ಆದ್ದರಿಂದ ಗೃಹ ಇಲಾಖೆ ಝೆಡ್ ಶ್ರೇಣಿ ಭದ್ರತೆ ನೀಡಲಿದೆ. ಈ ಹಿಂದೆ ಅವರಿಗೆ 'ವೈ' ಶ್ರೇಣಿ ಭದ್ರತೆಯನ್ನು ನೀಡಲಾಗಿತ್ತು. ಈಗ ಝೆಡ್ ಶ್ರೇಣಿ ಭದ್ರತೆಯಲ್ಲಿ ಒಟ್ಟು 33 ಸಿಆರ್‌ಪಿಎಫ್ ಕಮಾಂಡೋಗಳು ಅಣ್ಣಾಮಲೈ ಭದ್ರತೆಗೆ ನಿಯೋಜನೆಗೊಳ್ಳಲಿದ್ದಾರೆ.

ಮೇಕೆದಾಟು ಯೋಜನೆ ವಿರೋಧಿಸಿ ಕೆ. ಅಣ್ಣಾಮಲೈ ಉಪವಾಸ ಮೇಕೆದಾಟು ಯೋಜನೆ ವಿರೋಧಿಸಿ ಕೆ. ಅಣ್ಣಾಮಲೈ ಉಪವಾಸ

ಅಣ್ಣಾಮಲೈಗೆ ಇರುವ ಜೀವ ಬೆದರಿಕೆ ಬಗ್ಗೆ ಪರಿಶೀಲನೆ ನಡೆಸಿದ್ದ ಗುಪ್ತಚರ ಇಲಾಖೆ ಅಧಿಕಾರಿಗಳು ಝೆಡ್ ಶ್ರೇಣಿ ಭದ್ರತೆ ಒದಗಿಸಲು ಕೇಂದ್ರ ಗೃಹ ಇಲಾಖೆಗೆ ಶಿಫಾರಸು ಮಾಡಿತ್ತು. ಇದಕ್ಕೆ ಇಲಾಖೆ ಒಪ್ಪಿಗೆ ನೀಡಿದೆ.

ತಮಿಳುನಾಡಿನಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರುವುದೇ ಗುರಿ ಎಂದ ಅಣ್ಣಾಮಲೈತಮಿಳುನಾಡಿನಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರುವುದೇ ಗುರಿ ಎಂದ ಅಣ್ಣಾಮಲೈ

ಮಾಜಿ ಐಪಿಎಸ್ ಅಧಿಕಾರಿ; 2011ರ ಕರ್ನಾಟಕ ಬ್ಯಾಚ್‌ನ ಐಪಿಎಸ್ ಅಧಿಕಾರಿ ಅಣ್ಣಾಮಲೈ ಕರ್ನಾಟಕದಲ್ಲಿ ವಿವಿಧ ಜಿಲ್ಲೆಯಲ್ಲಿ ಕಾರ್ಯ ನಿರ್ವಹಣೆ ಮಾಡಿದ್ದರು. ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿಯಾಗಿ ಕಾರ್ಯ ನಿರ್ವಹಣೆ ಮಾಡುತ್ತಿದ್ದ ಅವರು 28ನೇ ಮೇ 2019ರಲ್ಲಿ ರಾಜೀನಾಮೆ ನೀಡಿದ್ದರು.

ಗೃಹ ಇಲಾಖೆಯ ಕಾರ್ಯದರ್ಶಿಗೆ ಅವರು ರಾಜೀನಾಮೆ ಪತ್ರವನ್ನು ಸಲ್ಲಿಕೆ ಮಾಡಿದ್ದರು. ರಾಜೀನಾಮೆ ಅಂಗೀಕಾರವಾದ ಬಳಿಕ ಅವರು ಬಿಜೆಪಿ ಪಕ್ಷ ಸೇರಿ ರಾಜಕೀಯಕ್ಕೆ ಪಾದಾರ್ಪಣೆ ಮಾಡಿದರು.

ಮೊದಲು ತಮಿಳುನಾಡು ರಾಜ್ಯ ಘಟಕದ ಉಪಾಧ್ಯಕ್ಷರಾಗಿದ್ದರು. ತಮಿಳುನಾಡು ವಿಧಾನಸಭೆ ಚುನಾವಣೆ ಬಳಿಕ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ಮಾಡಲಾಯಿತು. ತಮಿಳುನಾಡು ವಿಧಾನಸಭೆ ಚುನಾವಣೆಗೆ ಅವರು ಅರಾವಕುರಿಚಿ ಕ್ಷೇತ್ರದಿಂದ ಕಣಕ್ಕಿಳಿದು ಸೋಲು ಕಂಡಿದ್ದಾರೆ.

ವಿಧಾನಸಭೆ ಚುನಾವಣೆಯಲ್ಲಿ ಸೋಲು ಕಂಡರೂ ಅಣ್ಣಾಮಲೈ ರಾಜ್ಯದಲ್ಲಿ ಪಕ್ಷ ಸಂಘಟನೆಯಲ್ಲಿ ತೊಡಗಿದ್ದಾರೆ. ರಾಜ್ಯದಲ್ಲಿ ಡಿಎಂಕೆ ಸರ್ಕಾರ ಅಧಿಕಾರದಲ್ಲಿದೆ ಬಿಜೆಪಿ ಪ್ರತಿಪಕ್ಷ ಸ್ಥಾನದಲ್ಲಿದೆ.

English summary
Tamil Nadu BJP president Annamalai will be provided Z-category security. A total of 33 CRPF commandos will be deployed to protect him.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X