• search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸರ್ಕಾರದ ವಿರುದ್ಧ ಮಾತನಾಡಿದ್ದಕ್ಕೆ 1 ಲಕ್ಷ ಶಿಕ್ಷಕರು ಸಸ್ಪೆಂಡ್!

|
Google Oneindia Kannada News

ಗುರು ಬ್ರಹ್ಮ ಗುರು ವಿಷ್ಣು ಗುರು ದೇವೋ ಮಹೇಶ್ವರ; ಹೀಗೆ ಭಾರತದಲ್ಲಿ ಗುರುವಿಗೆ ಅತ್ಯುನ್ನತ ಸ್ಥಾನವಿದೆ. ಸಾವಿರಾರು ವರ್ಷಗಳಿಂದ ಗುರುವಿಗೆ ಪೂಜ್ಯನೀಯ ಸ್ಥಾನ ನೀಡಲಾಗಿದೆ. ಆದರೆ ಭಾರತದ ನೆರೆಯ ರಾಷ್ಟ್ರ ಮಾತ್ರ ಗುರುಗಳಿಗೆ ದ್ರೋಹ ಬಗೆದು, ಶಿಕ್ಷಕರ ವಿರುದ್ಧವೇ ಸಮರ ಸಾರಿದೆ.

ಹೌದು, ನಾವು ಹೇಳ್ತಿರೋದು ಮ್ಯಾನ್ಮಾರ್‌ ಶಿಕ್ಷಕರ ವ್ಯಥೆಯನ್ನು. ಫೆಬ್ರುವರಿ ತಿಂಗಳಲ್ಲಿ ನಡೆದಿದ್ದ ಸೇನಾ ದಂಗೆ ವಿರೋಧಿಸಲು ಪ್ರತಿಭಟನೆ ನಡೆಸುತ್ತಿದ್ದವರ ಜೊತೆ ಸೇರಿದ್ದಕ್ಕಾಗಿ ಮ್ಯಾನ್ಮಾರ್‌ನ 1.25 ಲಕ್ಷಕ್ಕೂ ಹೆಚ್ಚು ಶಾಲಾ ಶಿಕ್ಷಕರನ್ನ ಅಮಾನತು ಮಾಡಿದ್ದಾರಂತೆ ಸೇನಾಧಿಕಾರಿಗಳು. ಫೆಬ್ರವರಿ 1ರಂದು ಮ್ಯಾನ್ಮಾರ್‌ ಸೇನೆ ಪ್ರಧಾನಿ ಸೂಕಿ ನಿವಾಸಕ್ಕೆ ನುಗ್ಗಿತ್ತು.

ಬಳಿಕ ಮ್ಯಾನ್ಮಾರ್‌ ಪ್ರಧಾನಿ ಆಂಗ್ ಸಾನ್ ಸೂಕಿ ಸೇರಿದಂತೆ ಸಂಪುಟ ಸಚಿವರು ಮತ್ತು ಸಂಸದರನ್ನು ಗೃಹ ಬಂಧನದಲ್ಲಿ ಇರಿಸಿತ್ತು. ಹೀಗೆ ದೇಶ ಸೇನೆ ಹಿಡಿತಕ್ಕೆ ಹೋದ ನಂತರ ಮ್ಯಾನ್ಮಾರ್‌ ಅಕ್ಷರಶಃ ನರಕವಾಗಿದ್ದು, ಸೇನೆ ವಿರುದ್ಧ ಪ್ರತಿಭಟನೆಗಳು ಭುಗಿಲೆದ್ದಿವೆ. ಈಗಾಗಲೇ 800ಕ್ಕೂ ಹೆಚ್ಚು ಅಮಾಯಕರ ರಕ್ತಪಾತ ನಡೆದಿದೆ. ಆದರೆ ಇಷ್ಟಕ್ಕೂ ಸುಮ್ಮನಾಗದ ಅಲ್ಲಿನ ಸೇನಾಧಿಕಾರಿಗಳು ಲಕ್ಷಾಂತರ ಶಿಕ್ಷಕರನ್ನ ಸಸ್ಪೆಂಡ್ ಮಾಡಿದ್ದಾರೆ.

ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾರಾ..?

ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾರಾ..?

ಈ ನಿರ್ಧಾರದ ಬಗ್ಗೆ ಬಹುತೇಕ ಶಿಕ್ಷಕರ ಆರೋಪವೆಂದರೆ, ನಮ್ಮನ್ನು ಸರ್ಕಾರ ಕೆಲಸಕ್ಕೆ ಕರೆಯುತ್ತಿದೆ. ಆದರೆ ಬೆದರಿಕೆಗೆ ನಾವು ಹೆದರುತ್ತಿಲ್ಲ. ಹೀಗಾಗಿಯೇ ನಮನ್ನು ಬ್ಲ್ಯಾಕ್ ಮೇಲ್ ಮಾಡಲು ಸಸ್ಪೆಂಡ್ ಮಾಡಿದ್ದಾರೆ, ಆದರೂ ನಾವು ಕೆಲಸಕ್ಕೆ ಹೋಗಲ್ಲ ಎನ್ನುತ್ತಿದ್ದಾರೆ. ಹಲವು ದಶಕಗಳ ಕಾಲ ಮ್ಯಾನ್ಮಾರ್‌ ಸೇನೆ ಹಿಡಿತದಲ್ಲೇ ಇತ್ತು.

ಕೆಲ ವರ್ಷಗಳ ಹಿಂದೆ ಆಂಗ್ ಸಾನ್ ಸೂಕಿ ಹೋರಾಟದ ಫಲವಾಗಿ ಮ್ಯಾನ್ಮಾರ್‌ ಪ್ರಜಾಪ್ರಭುತ್ವದ ತೆಕ್ಕೆಗೆ ವಾಲಿತ್ತು. ಆದರೆ ಆಂಗ್ ಸಾನ್ ಸೂಕಿ ಆಡಳಿತದಲ್ಲಿ ರೊಹಿಂಗ್ಯಾ ಮುಸ್ಲೀಮರ ಮೇಲೆ ಮ್ಯಾನ್ಮಾರ್‌ನ ಸೇನೆ ದೌರ್ಜನ್ಯ ನಡೆಸಿತ್ತು ಎಂಬ ಆರೋಪವಿದೆ. ಆದರೂ ಸೂಕಿ ತೆಪ್ಪಗಿದ್ದ ಕಾರಣಕ್ಕೆ ಸೂಕಿ ವಿರುದ್ಧ ತೀವ್ರ ಆಕ್ರೋಶ ಕೂಡ ವ್ಯಕ್ತವಾಗಿತ್ತು. ಈಗ ಸ್ವತಃ ಸೂಕಿಯೇ ಮ್ಯಾನ್ಮಾರ್‌ ಸೇನೆ ಕೈಯಲ್ಲಿ ಸಿಲುಕಿ ನರಳುತ್ತಿದ್ದಾರೆ.

ಪೊಲೀಸರನ್ನು ವಾಪಸ್ ಕಳಿಸಿ..!

ಪೊಲೀಸರನ್ನು ವಾಪಸ್ ಕಳಿಸಿ..!

ಕೆಲ ತಿಂಗಳ ಹಿಂದೆ ಭಾರತಕ್ಕೆ ಓಡಿ ಬಂದಿರುವ ಮ್ಯಾನ್ಮಾರ್ ಪೊಲೀಸರನ್ನು ವಶಕ್ಕೆ ನೀಡಿ ಎಂದು ಒತ್ತಾಯಿಸಿ ಮ್ಯಾನ್ಮಾರ್‌ ಪತ್ರ ಬರೆದಿತ್ತು. ಉಭಯ ರಾಷ್ಟ್ರಗಳ ಸಂಬಂಧ ಮುಂದುವರಿಯಲು ಪೊಲೀಸ್‌ ಅಧಿಕಾರಿಗಳನ್ನು ಮ್ಯಾನ್ಮಾರ್‌ಗೆ ಹಸ್ತಾಂತರಿಸಿ ಅಂತಾ ಮಿಜೋರಾಂ ರಾಜ್ಯದ ಚಂಪೈ ಜಿಲ್ಲೆಯ ಉಪ ಆಯುಕ್ತೆಗೆ ಮ್ಯಾನ್ಮಾರ್‌ನ ಅಧಿಕಾರಿಗಳು ಪತ್ರ ಬರೆದಿದ್ದರು. ಪತ್ರ ಬರೆದ ಕೆಲವೇ ದಿನದಲ್ಲಿ ಆಘಾತಕಾರಿ ಅಂಶ ಬಯಲಾಗಿದೆ. ಭಾರತಕ್ಕೆ ಓಡಿ ಬಂದಿರುವ ಮ್ಯಾನ್ಮಾರ್ ಪೊಲೀಸರು ಅಲ್ಲಿನ ಭಯಾನಕ ಸ್ಥಿತಿಯನ್ನ ಬಿಡಿಸಿಟ್ಟಿದ್ದಾರೆ. ಮ್ಯಾನ್ಮಾರ್ ಜನರ ಸದ್ಯದ ಪರಿಸ್ಥಿತಿ ಹಾಗೂ ಹಿಂಸೆಯ ಬಗ್ಗೆ ಎಳೆ ಎಳೆಯಾಗಿ ವಿವರಿಸಿದ್ದಾರೆ.

ಮಿಲಿಟರಿ ಆಡಳಿತ ಶುರು..!

ಮಿಲಿಟರಿ ಆಡಳಿತ ಶುರು..!

ಮ್ಯಾನ್ಮಾರ್‌ನಲ್ಲಿ 2020ರಲ್ಲಿ ನಡೆದಿದ್ದ ಸಾರ್ವತ್ರಿಕ ಚುನಾವಣೆಯಲ್ಲಿ ಅಕ್ರಮ ನಡೆದಿದ್ದರೂ ಅದನ್ನ ತಡೆಯಲು ಚುನಾವಣಾ ಆಯೋಗ ವಿಫಲವಾಗಿದೆ ಎಂದು ಆರೋಪಿಸಲಾಗಿತ್ತು. ಈ ಕಾರಣಕ್ಕಾಗಿ ಮ್ಯಾನ್ಮಾರ್‌ ಮಿಲಿಟರಿ ತುರ್ತು ಪರಿಸ್ಥಿತಿ ಹೇರಿದೆ. ದೇಶದಲ್ಲಿ ಮಿಲಿಟರಿ 1 ವರ್ಷದವರೆಗೂ ತುರ್ತು ಪರಿಸ್ಥಿತಿ ಘೋಷಿಸಿ ಹಂಗಾಮಿ ಅಧ್ಯಕ್ಷರನ್ನೂ ನೇಮಿಸಿದೆ. ಮತ್ತೊಂದ್ಕಡೆ ದೇಶದ ಸಂವಹನ ಸಾಧನಗಳನ್ನೂ ಕಂಟ್ರೋಲ್‌ಗೆ ತೆಗೆದುಕೊಂಡಿದೆ ಸೇನೆ. ಫೋನ್ ಕಾಲ್ ಹೋಗುತ್ತಿಲ್ಲ, ಇಂಟರ್ನೆಟ್ ಸಂಪರ್ಕ ಕೂಡ ಬಂದ್ ಆಗಿದೆ. ಜನ ಪರದಾಡುವ ಸ್ಥಿತಿ ನಿರ್ಮಾಣವಾಗಿದ್ದು, ಪರಿಸ್ಥಿತಿ ಅತಿಸೂಕ್ಷ್ಮವಾಗಿದೆ. ಕಂಡಲ್ಲಿ ಗುಂಡಿಟ್ಟು ಜನರನ್ನ ಕೊಲೆ ಮಾಡುತ್ತಿದೆ ಸೇನೆ.

Recommended Video

  Yas ಚಂಡಮಾರುತದಿಂದ ರಾಜ್ಯದಲ್ಲಿ 5 ದಿನ ಮಳೆ | Oneindia Kannada
  800ಕ್ಕೂ ಹೆಚ್ಚು ಹೋರಾಟಗಾರರು ಬಲಿ..?

  800ಕ್ಕೂ ಹೆಚ್ಚು ಹೋರಾಟಗಾರರು ಬಲಿ..?

  ಈಗಾಗಲೇ ಪ್ರತಿಭಟನೆ ನಡೆಸುತ್ತಿದ್ದ ಸುಮಾರು 800ಕ್ಕೂ ಹೆಚ್ಚು ಜನರನ್ನು ಮ್ಯಾನ್ಮಾರ್ ಸೇನೆ ಬಲಿಪಡೆದಿರುವ ಆರೋಪವಿದೆ. ಹೀಗಾಗಿ ನಾಗರಿಕರನ್ನ ಕೊಂದು ಹಾಕಿರುವ ಮ್ಯಾನ್ಮಾರ್ ಸೇನೆ ವಿರುದ್ಧ ಜಗತ್ತಿನಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಪ್ರಜಾಪ್ರಭುತ್ವವಾದಿ ರಾಷ್ಟ್ರಗಳು ಮ್ಯಾನ್ಮಾರ್ ಮಿಲಿಟರಿ ಕ್ರಮವನ್ನು ಟೀಕಿಸಿವೆ. ಆದರೆ ಇದ್ಯಾವುದಕ್ಕೂ ತಲೆಕೆಡಿಸಿಕೊಳ್ಳದ ಅಲ್ಲಿನ ಸೇನಾಧಿಕಾರಿಗಳು, ಪ್ರತಿಭಟನೆ ನಡೆಸುತ್ತಿರುವ ಜನರ ನಿಯಂತ್ರಣ ಹಾಗೂ ಹೋರಾಟಗಾರನ್ನು ಚದುರಿಸಲು ಬಲಪ್ರಯೋಗ ಮಾಡುತ್ತಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಹಲವರು ಸಾವು, ಬದುಕಿನ ಮಧ್ಯೆ ಹೋರಾಡುತ್ತಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಆತಂಕ ಆವರಿಸಿದೆ.

  English summary
  1.25 lakh Myanmar teachers allegedly suspended after participating in protest against military coup.
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X