ವಾಷಿಂಗ್ಟನ್ ಶಾಲೆಯಲ್ಲಿ ಗುಂಡಿನ ದಾಳಿ: ಒಬ್ಬ ಬಲಿ, ಐವರಿಗೆ ಗಾಯ

Posted By:
Subscribe to Oneindia Kannada

ವಾಷಿಂಗ್ಟನ್, ಸೆಪ್ಟೆಂಬರ್ 14: ಇಲ್ಲಿನ ಶಾಲೆಯೊಂದರಲ್ಲಿ ಅಪರಿಚಿತ ವ್ಯಕ್ತಿಯು ಏಕಾಏಕಿ ನಡೆಸಿದ ಗುಂಡಿನ ದಾಳಿಗೆ ಒಬ್ಬ ಬಲಿಯಾಗಿ, ಐವರು ಗಾಯಗೊಂಡಿರುವ ಘಟನೆ ನಡೆದಿದೆ.

ಸ್ಪೋಕೇನ್ ಜಿಲ್ಲೆಯ ದಕ್ಷಿಣ ಪ್ರಾಂತ್ಯದಲ್ಲಿರುವ ರಾಕ್ ಫೋರ್ಡ್ ಪ್ರಾಂತ್ಯದಲ್ಲಿರುವ ಫ್ರೀಮನ್ ಹೈ ಸ್ಕೂಲ್ ನಲ್ಲಿ ಈ ಶೂಟೌಟ್ ನಡೆದಿದ್ದು, ಘಟನೆ ಬಗ್ಗೆ ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಧಾವಿಸಿದ ಪೊಲೀಸರು ದಾಳಿಕೋರನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

1 Dead, 5 Injured After Shooting At High School In Washington

ಶೂಟೌಟ್ ಆರಂಭವಾಗುತ್ತಿದ್ದಂತೆ, ಎಚ್ಚೆತ್ತ ಶಾಲೆಯ ಆಡಳಿತ ಮಂಡಳಿಯು ಶಾಲೆಯಲ್ಲಿನ ವಿದ್ಯಾರ್ಥಿಗಳಿಗೆ ಧ್ವನಿವರ್ಧಕದ ಮೂಲಕ ಶಾಲೆಯಿಂದ ಹೊರಹೋಗುವಂತೆ ಸೂಚನೆ ನೀಡಿದ್ದರಿಂದಾಗಿ, ಹೆಚ್ಚಿನ ಅನಾಹುತ ತಪ್ಪಿದೆ ಎಂದು ಹೇಳಲಾಗಿದೆ.

ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಶಾಲೆಯ ಬಳಿಗೆ ಹೆಚ್ಚೆಚ್ಚು ಆ್ಯಂಬುಲೆನ್ಸ್ ಗಳನ್ನು ರವಾನಿಸಿರುವ ಸ್ಥಳೀಯ ಸರ್ಕಾರ, ಗಾಯಾಳುಗಳಿಗೆ ತತ್ ಕ್ಷಣದ ವೈದ್ಯಕೀಯ ನೆರವಿನ ಹಸ್ತ ಚಾಚಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಈ ಘಟನೆಯಿಂದ ದಿಗ್ಭ್ರಾಂತರಾಗಿರುವ ಸ್ಪೋಕೇನ್ ಜಿಲ್ಲೆಯ ಇತರ ಶಾಲಾ ಆಡಳಿತ ಮಂಡಳಿಗಳು ತಮ್ಮ ಶಾಲೆಗಳಿಗೆ ರಜೆ ಘೋಷಿಸಿವೆ ಎಂದು ಮೂಲಗಳು ತಿಳಿಸಿವೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
One person was killed and five injured after a shooting at a high school south of Spokane, Washington. Local media reports said the suspect had been taken into custody.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ