ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕ್ಯಾಲಿಫೋರ್ನಿಯಾ ಮತಗಟ್ಟೆ ಕೇಂದ್ರದಲ್ಲಿ ಗುಂಡಿನ ದಾಳಿ

By Prithviraj
|
Google Oneindia Kannada News

ವಾಷಿಂಗ್ಟನ್, ನವೆಂಬರ್, 9: ಅಮೆರಿಕ ಅಧ್ಯಕ್ಷಿಯ ಚುನಾವಣೆ ಮತದಾನ ಪ್ರಕ್ರಿಯೆ ನಡೆಯುತ್ತಿರುವ ಕ್ಯಾಲಿಫೋರ್ನಿಯಾದ ರಾಜ್ಯ ಎರಡು ಮತಗಟ್ಟೆ ಕೇಂದ್ರಗಳ ಬಳಿ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ.

ಘಟನೆಯಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, ಮೂವರಿಗೆ ಗಂಭೀರ ಗಾಯಗಳಾಗಿವೆ ಎಂದು ಅಧಿಕಾರಿಗಳು ದೃಢಪಡಿಸಿರುವುದಾಗಿ ಇಲ್ಲಿಯ ಮಾಧ್ಯಮಗಳು ಮಂಗಳವಾರ ವರದಿ ಮಾಡಿವೆ.

ಪೂರ್ವ ಲಾಸ್ ಏಂಜಲೀಸ್ ನಲ್ಲಿರುವ ಅಜುಸಾ ನಗರದ ಬಳಿಯಿರುವ ಮತಗಟ್ಟೆ ಕೇಂದ್ರಗಳ ಬಳಿ ಬಂದ ದುಷ್ಕರ್ಮಿಗಳು ಪ್ರಬಲ ಮಾರಕಾಸ್ತ್ರಗಳಿಂದ ಏಕಾಏಕಿ ಗುಂಡಿನ ಮಳೆ ಸುರಿಸಿದ್ದಾರೆ. ಗುಂಡೇಟಿನಿಂದ ಓರ್ವ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

1 died 3 critically injured in Shooting near California pollinig station

ಮೃತಪಟ್ಟ ವ್ಯಕ್ತಿ ಸುಮಾರು 70 ವರ್ಷದ ವ್ಯಕ್ತಿಯಾಗಿದ್ದು, ಮಂಗಳವಾರ ಮಧ್ಯಾಹ್ನ 2 ಗಂಟೆ (ಸ್ಥಳೀಯ ಕಾಲಮಾನ) ಯಲ್ಲಿ ಈ ಘಟನೆ ನಡೆದಿದೆ ಎಂದು ಅಧಿಕಾರಿಳು ತಿಳಿಸಿದ್ದಾರೆ.

ಉಳಿದಂತೆ ಮೂವರು ಸಾರ್ವಜನಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಗಾಯಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಗಾಯಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

English summary
One person was killed and three others were wounded Tuesday when an assailant armed with a military-style rifle opened fire in a residential area of Azusa,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X