• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಕಿರಾತಕರ ಕ್ಷಿಪಣಿ ದಾಳಿಗೆ ಕಂದಮ್ಮಗಳು ಸೇರಿ 12 ಮಂದಿ ಬಲಿ

|

ಅರ್ಮೇನಿಯ ನಡೆಸಿದ ಮಿಸೈಲ್ ಅಟ್ಯಾಕ್‌ನಲ್ಲಿ ಮಕ್ಕಳು ಸೇರಿದಂತೆ 12 ಜನರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸಾಕು ಸಾಕು ಎಂದರೂ ಯುದ್ಧ ನಿಲ್ಲಸದೆ ಅರ್ಮೇನಿಯ ಹಾಗೂ ಅಜೆರ್ಬೈಜಾನ್ ಬಡಿದಾಡುತ್ತಿವೆ. ಈಗಲೂ ಅರ್ಮೇನಿಯ ಪಡೆಗಳು ಅಜೆರ್ಬೈಜಾನ್ ಮೇಲೆ ಕ್ಷಿಪಣಿ ದಾಳಿ ನಡೆಸಿದ್ದು, ಗಂಜಾ ನಗರದಲ್ಲಿ ಮಕ್ಕಳು ಸೇರಿ 12 ಜನರು ಮೃತಪಟ್ಟಿದ್ದಾರೆ. ಅಜೆರ್ಬೈಜಾನ್ ಅಧ್ಯಕ್ಷ ಈ ಬಗ್ಗೆ ಅರ್ಮೇನಿಯ ವಿರುದ್ಧ ನೇರ ಆರೋಪವನ್ನು ಮಾಡಿದ್ದು, ಪ್ರತಿದಾಳಿಯ ಎಚ್ಚರಿಕೆ ನೀಡಿದ್ದಾರೆ.

ಸರಿಸುಮಾರು 2 ತಿಂಗಳಿಂದಲೂ ಎರಡೂ ದೇಶಗಳ ನಡುವೆ ಇದೇ ರೀತಿಯ ಕಿತ್ತಾಟ ನಡೆಯುತ್ತಿದೆ. ನಗೊರ್ನೊ-ಕರಬಾಖ್ ವಿವಾದಾತ್ಮಕ ಪ್ರದೇಶದ ಮೇಲೆ ಪ್ರಭುತ್ವ ಸಾಧಿಸಲು ಹೀಗೆ ಅರ್ಮೇನಿಯ ಮತ್ತು ಅಜೆರ್ಬೈಜಾನ್ ಕಿತ್ತಾಡುತ್ತಿವೆ. ಎರಡೂ ದೇಶಗಳ ನಾಯಕರು ಜಿದ್ದಿಗೆ ಬಿದ್ದು ಅಟ್ಯಾಕ್ ಮಾಡುತ್ತಿವೆ.

ಯುದ್ಧ ನಿಲ್ಲಿಸುವ ಪ್ರಯತ್ನ ವಿಫಲ, ಸೈನಿಕರು ಸೇರಿ ಸಾವಿರಾರು ಮಂದಿ ಬಲಿ

ಆದರೆ ಇವರ ಆಟಾಟೋಪಕ್ಕೆ ಬಲಿಯಾಗುತ್ತಿರುವುದು ಸಾಮಾನ್ಯ ನಾಗರಿಕರು. ಅರ್ಮೇನಿಯ ಮತ್ತು ಅಜೆರ್ಬೈಜಾನ್ ಸರ್ಕಾರದ ಮಾಹಿತಿ ಪ್ರಕಾರ ಈವರೆಗೂ 633 ಮಂದಿ ಹಿಂಸಾಚಾರಕ್ಕೆ ಬಲಿಯಾಗಿದ್ದಾರೆ. ಆದರೆ ಲೆಕ್ಕವೇ ಸಿಗದಷ್ಟು ಮಂದಿ ಕಾಣೆಯಾಗಿದ್ದು, ಕಟ್ಟಡಗಳ ಅವಶೇಷಗಳ ಅಡಿ ಸಿಲುಕಿ ಮಣ್ಣಾಗಿದ್ದಾರೆ. ಇಷ್ಟೆಲ್ಲದರ ಮಧ್ಯೆ ಅರ್ಮೇನಿಯ ಪಡೆಗಳು ಅಜೆರ್ಬೈಜಾನ್ ಮೇಲೆ ನಡೆಸಿದ ಕ್ಷಿಪಣಿ ದಾಳಿಗೆ ಏನೂ ಅರಿಯದ ಕಂದಮ್ಮಗಳು ಜೀವಬಿಟ್ಟಿವೆ.

ಡಿಸೆಂಬರ್ ವೇಳೆಗೆ ಅಸಹನೀಯ ಚಳಿ

ಡಿಸೆಂಬರ್ ವೇಳೆಗೆ ಅಸಹನೀಯ ಚಳಿ

ಅರ್ಮೇನಿಯ ಹಾಗೂ ಅಜೆರ್ಬೈಜಾನ್ ಉತ್ತರ ಧ್ರುವ ಪ್ರದೇಶಕ್ಕೆ ಹತ್ತಿರದಲ್ಲೇ ಇರುವ ಕಾರಣ ಡಿಸೆಂಬರ್ ವೇಳೆಗೆಲ್ಲಾ ಅಲ್ಲಿ ಅಸಹನೀಯ ಚಳಿ ತಾಗಲಿದೆ. ಕೆಲವು ಸಂದರ್ಭದಲ್ಲಿ ಉಷ್ಣಾಂಶ ಮೈನಸ್‌ ಡಿಗ್ರಿ ಮುಟ್ಟಲಿದೆ. ಕೆಲವೆಡೆ -40 ಡಿಗ್ರಿಗೆ ಉಷ್ಣಾಂಶ ಕುಸಿದರೆ, ಮತ್ತೆ ಕೆಲವು ಕಡೆ ಉಷ್ಣಾಂಶ (+) ಚಿಹ್ನೆ ಮುಟ್ಟುವುದೇ ಇಲ್ಲ.

ಹೀಗೆ ಕೊರೆಯುವ ಚಳಿಯಲ್ಲಿ ಅಲ್ಲಿನ ಜನ ಬೆಚ್ಚನೆಯ ಮನೆಯಿದ್ದರೂ ನಡುಗುತ್ತಲೇ ಬದುಕುತ್ತಾರೆ. ಆದರೆ ಈಗ ಅರ್ಮೇನಿಯ ಹಾಗೂ ಅಜೆರ್ಬೈಜಾನ್ ಯುದ್ಧದ ಪರಿಣಾಮ ಸಾವಿರಾರು ಮನೆಗಳು ನಾಶವಾಗಿಬಿಟ್ಟಿವೆ. ಲಕ್ಷಾಂತರ ನಿರಾಶ್ರಿತರಿಗೆ ಚಳಿಯದ್ದೇ ಚಿಂತೆಯಾಗಿ ಹೋಗಿದೆ. ಮಕ್ಕಳು, ಸಂಸಾರ ಕರೆದುಕೊಂಡು ಎಲ್ಲಿಗೆ ಹೋಗೋದು ಅಂತಾ ಕಣ್ಣೀರು ಹಾಕುತ್ತಿದ್ದಾರೆ, ಜೊತೆಗೆ ಸಂತ್ರಸ್ತರ ಉಸಿರಲ್ಲಿ ಹಿಡಿ ಶಾಪವೂ ಇದೆ.

 ರಷ್ಯಾ ಹೇಳಿದರೂ ಯುದ್ಧ ನಿಲ್ಲಲಿಲ್ಲ

ರಷ್ಯಾ ಹೇಳಿದರೂ ಯುದ್ಧ ನಿಲ್ಲಲಿಲ್ಲ

ಅರ್ಮೇನಿಯ ಹಾಗೂ ಅಜೆರ್ಬೈಜಾನ್ ನಡುವೆ ರಷ್ಯಾ ಒಂದು ಸುತ್ತಿನ ಶಾಂತಿ ಮಾತುಕತೆ ನಡೆಸಿದೆ. ಖುದ್ದು ರಷ್ಯಾ ಅಧ್ಯಕ್ಷ ಪುಟಿನ್ ಯುದ್ಧ ನಿಲ್ಲಿಸಲು ಅಖಾಡ ಪ್ರವೇಶ ಮಾಡಿದ್ದರು. ರಷ್ಯಾ ರಾಜಧಾನಿ ಮಾಸ್ಕೋದಲ್ಲಿ ಎರಡೂ ದೇಶಗಳು ಕದನ ವಿರಾಮಕ್ಕೆ ಒಪ್ಪಿದ್ದವು.

ಯುದ್ಧಕ್ಕೆ ಸಿದ್ಧವಾಯ್ತಾ ರಷ್ಯಾ, ಮಾತು ಕೇಳದವರಿಗೆ ಶಾಕ್..!

ಆದರೆ ಹೀಗೆ ಕದನ ವಿರಾಮಕ್ಕೆ ಒಪ್ಪಿದ ಕೆಲವೇ ಗಂಟೆಗಳ ಅಂತರದಲ್ಲಿ ಮತ್ತೆ ದಾಳಿ, ಪ್ರತಿದಾಳಿ ನಡೆದಿದೆ. ಹೀಗಾಗಿ ರಷ್ಯಾ ನಡೆಸಿದ ಸಂಧಾನ ವಿಫಲವಾಗಿದೆ. ಈಗಲೂ ಎರಡೂ ದೇಶಗಳ ಮಧ್ಯೆ ಗುಂಡಿನ ಕಾಳಗ ನಡೆಯುತ್ತಿದ್ದು, ಸಣ್ಣ ಸಣ್ಣ ಮಕ್ಕಳ ಜೊತೆ ಕುಟುಂಬಗಳು ಅಲ್ಲಿಂದ ಗುಳೆ ಹೊರಟಿವೆ. ಗುಳೆ ಹೊರಡುವವರ ಮೇಲೂ ಅಟ್ಯಾಕ್ ನಡೆಯುತ್ತಿದೆ.

ಯುದ್ಧಕ್ಕೆ ಕಾರಣ ಏನು..?

ಯುದ್ಧಕ್ಕೆ ಕಾರಣ ಏನು..?

ನಗೊರ್ನೊ-ಕರಬಾಖ್ ಸಾಕಷ್ಟು ಆದಾಯ ತಂದುಕೊಡಬಲ್ಲ ಪ್ರದೇಶಗಳು. 4,400 ಚ.ಕಿ.ಮೀ ವಿಸ್ತೀರ್ಣದ ಭೂಮಿಗೆ ಭಾರಿ ಬೇಡಿಕೆ ಇದೆ. ಹೀಗಾಗಿ ಈ ಪ್ರದೇಶಗಳ ಮೇಲೆ ನಿಯಂತ್ರಣ ಸಾಧಿಸಲು ಎರಡೂ ದೇಶಗಳು ಕಚ್ಚಾಡುತ್ತಿವೆ. ಈ ಹಿಂದೆ ಅಂದರೆ 1994ರಲ್ಲೂ ಇದೇ ವಿಚಾರಕ್ಕೆ ಅರ್ಮೇನಿಯ ಹಾಗೂ ಅಜರ್ಬೈಜಾನ್‌ ಬಡಿದಾಡಿಕೊಂಡಿವೆ.

ಆದರೆ ನಂತರ ನಡೆದ ಸಂಧಾನದಲ್ಲಿ ತಕ್ಷಣಕ್ಕೆ ಯುದ್ಧ ನಿಂತಿದ್ದರೂ ದಶಕಗಳ ಕಾಲ ಬೂದಿ ಮುಚ್ಚಿದ ಕೆಂಡದಂತೆ ಇತ್ತು ಪರಿಸ್ಥಿತಿ. ಈಗ ಆ ಕೆಂಡ ಮತ್ತೆ ಬೆಂಕಿಯಾಗಿ, ಜ್ವಾಲೆಯ ರೂಪ ಪಡೆದಿದೆ. ಎರಡೂ ದೇಶಗಳ ನಾಯಕರ ದುರಾಸೆಗೆ ನೂರಾರು ಅಮಾಯಕ ಜೀವಗಳು ಬಲಿಯಾಗುತ್ತಿವೆ. ಸದ್ಯದ ವರದಿಗಳ ಪ್ರಕಾರ ಈಗಾಗಲೇ 100ಕ್ಕೂ ಹೆಚ್ಚು ನಾಗರಿಕರು ಯುದ್ಧದ ಕೆನ್ನಾಲಿಗೆಗೆ ಬಲಿಯಾಗಿ ಹೋಗಿದ್ದಾರೆ.

ಜಾಗತಿಕ ತೈಲ ಮಾರುಕಟ್ಟೆಗೂ ಕಂಟಕ

ಜಾಗತಿಕ ತೈಲ ಮಾರುಕಟ್ಟೆಗೂ ಕಂಟಕ

ಈಗಾಗಲೇ ಕೊರೊನಾ ಕಾಟಕ್ಕೆ ಬೇಸತ್ತಿರುವ ತೈಲ ಮಾರುಕಟ್ಟೆಗೆ ಮತ್ತೊಂದು ಸವಾಲು ಎದುರಾಗಿದೆ. ಈಗ ನಗೊರ್ನೊ ಹಾಗೂ ಕರಬಾಖ್ ವಿಚಾರವಾಗಿ ಭುಗಿಲೆದ್ದಿರುವ ಯುದ್ಧ ದಕ್ಷಿಣ ಕಾಕಸಸ್ ಪ್ರದೇಶದಲ್ಲಿ ಅಸ್ಥಿರತೆ ಮೂಡುವಂತೆ ಮಾಡಿದೆ. ದಕ್ಷಿಣ ಕಾಕಸಸ್ ಜಾಗತಿಕ ತೈಲ ಮಾರುಕಟ್ಟೆಗೆ ತೈಲ ಮತ್ತು ಅನಿಲ ಸಾಗಿಸೋದಕ್ಕೆ ಕಾರಿಡಾರ್ ಆಗಿದೆ. ದಕ್ಷಿಣ ಕಾಕಸಸ್ ಸುತ್ತಮುತ್ತಲ ಪ್ರದೇಶದಲ್ಲಿ ಯುದ್ಧ ನಡೆಯುತ್ತಿರುವಾಗ ಇಲ್ಲಿ ಸ್ಥಿರತೆ ನೆಲೆಸುವುದು, ಶಾಂತಿಯುತ ವ್ಯಾಪಾರ ನಡೆಯುವುದು ಕಷ್ಟಕರ. ಇದು ಜಾಗತಿಕ ತೈಲ ಮಾರುಕಟ್ಟೆಗೆ ಮತ್ತೆ ಕಂಟಕ ಎದುರಾಗುವ ಮುನ್ಸೂಚನೆ ನೀಡಿದೆ.

ಮುನ್ನುಗ್ಗಿ ಬರಲಿದೆಯಾ ರಷ್ಯಾ ಮಿಲಿಟರಿ..?

ಮುನ್ನುಗ್ಗಿ ಬರಲಿದೆಯಾ ರಷ್ಯಾ ಮಿಲಿಟರಿ..?

ರಷ್ಯಾ ನಡೆಸಿರುವ ಸಂಧಾನಕ್ಕೆ ಎರಡೂ ದೇಶಗಳು ಬೆಲೆ ನೀಡಿಲ್ಲ. ಹೀಗಾಗಿ ರಷ್ಯಾ ಅಧ್ಯಕ್ಷ ಪುಟಿನ್ ಮಿಲಿಟರಿ ಕಾರ್ಯಾಚರಣೆ ನಡೆಸಲಿದ್ದಾರಾ ಎಂಬ ಕುತೂಹಲ ಇಡೀ ಜಗತ್ತನ್ನು ಕಾಡುತ್ತಿದೆ. ದಂಡಂ ದಶಗುಣಂ ಎನ್ನುವ ಹಾಗೆ, ಮಾತಿಗೆ ಬಗ್ಗದ ಅರ್ಮೇನಿಯ ಹಾಗೂ ಅಜೆರ್ಬೈಜಾನ್‌ಗೆ ಬಂದೂಕಿನ ಮೂಲಕ ಉತ್ತರ ನೀಡುತ್ತಾರಾ ಎಂಬುದು ತೀವ್ರ ಕುತೂಹಲ ಕೆರಳಿಸಿದೆ. ಪುಟಿನ್ ಸೇನೆ ಅಖಾಡ ಪ್ರವೇಶಕ್ಕೆ ಇದೀಗ ಸನ್ನಿವೇಶ ಸಿದ್ಧವಾಗಿದ್ದು, ರಷ್ಯಾ ಅಧ್ಯಕ್ಷ ಯಾವ ನಿರ್ಧಾರ ಕೈಗೊಳ್ಳುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ. ಆದರೆ ಒಂದಂತೂ ಸತ್ಯ, ಅಕಸ್ಮಾತ್ ರಷ್ಯಾ ಸೇನೆ ಅಖಾಡಕ್ಕೆ ಇಳಿದರೆ ಅರ್ಮೇನಿಯ ಮತ್ತು ಅಜೆರ್ಬೈಜಾನ್‌ ನಕ್ಷೆಯಿಂದಲೇ ಅಳಿಸಿ ಹೋಗುವುದು ಪಕ್ಕಾ.

English summary
War between Armenia and Azerbaijan continues, with 12 Armenians killed in Armenia missile strikes. President of Azerbaijan issued counterattack warning to Armenia.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X