ಬಲೂಚಿಸ್ತಾನದಲ್ಲಿ ಆತ್ಮಹತ್ಯಾ ಬಾಂಬ್ ದಾಳಿ, ಕನಿಷ್ಠ 12 ಮಂದಿ ಸಾವು
ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ನಡೆದ ಆತ್ಮಹತ್ಯಾ ಬಾಂಬ್ ದಾಳಿಗೆ ಕನಿಷ್ಠ ಹನ್ನೆರಡು ಮಂದಿ ಮೃತಪಟ್ಟು, ಹಲವರಿಗೆ ಗಾಯಗಳಾಗಿವೆ. ಅಲ್ಲಿನ ಝಲ್ ಮಗ್ಸಿ ಎಂಬಲ್ಲಿರುವ ಧಾರ್ಮಿಕ ಶ್ರದ್ಧಾ ಕೇಂದ್ರದ ಮೇಲೆ ದಾಳಿ ನಡೆಸಲಾಗಿದೆ.
ಮಧ್ಯ ಬಲೂಚಿಸ್ತಾನ ಪ್ರಾಂತ್ಯದ ಝಲ್ ಮಗ್ಸಿಯಲ್ಲಿ ಗುರುವಾರ ಆತ್ಮಹತ್ಯಾ ಬಾಂಬ್ ದಾಳಿ ನಡೆದಿದೆ. ಜಿಲ್ಲಾಡಳಿತ ನೀಡಿದ ಮಾಹಿತಿ ಪ್ರಕಾರ ಮೃತರ ಸಂಖ್ಯೆ ಇನ್ನೂ ಹೆಚ್ಚಾಗಲಿದೆ ಎಂದು ಅಂದಾಜಿಸಲಾಗಿದೆ. ಸದ್ಯಕ್ಕೆ ಈ ದಾಳಿಯ ಹೊಣೆಯನ್ನು ಯಾವುದೇ ಉಗ್ರಗಾಮಿ ಸಂಘಟನೆ ಹೊತ್ತುಕೊಂಡಿಲ್ಲ.

"ಇದು ಆತ್ಮಹತ್ಯಾ ದಾಳಿ. ಇದರಲ್ಲಿ ಪೊಲೀಸ್ ಕಾನ್ ಸ್ಟೇಬಲ್ ವೊಬ್ಬರು ಕೂಡ ಮೃತಪಟ್ಟಿದ್ದಾರೆ" ಎಂದು ಸರಕಾರದ ವಕ್ತಾರ ಅನ್ವರ್ ಉಲ್ ಹಕ್ ಕಕರ್ ತಿಳಿಸಿದ್ದಾರೆ.
ಒನ್ಇಂಡಿಯಾ ನ್ಯೂಸ್












Click it and Unblock the Notifications