• search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಶ್ರೀಲಂಕಾಕ್ಕೆ ತೆರಳಬೇಕಿದ್ದ 120 ವಿಮಾನಗಳು ತಿರುವನಂತಪುರಂ, ಕೊಚ್ಚಿ ವಿಮಾನ ನಿಲ್ದಾಣಗಳಿಗೆ ಶಿಫ್ಟ್

|
Google Oneindia Kannada News

ಸಾಲದ ಸುಳಿಯಲ್ಲಿ ಸಿಲುಕಿರುವ ಶ್ರೀಲಂಕಾದ ಆರ್ಥಿಕ ಬಿಕ್ಕಟ್ಟು ನಿವಾರಿಸಲು ಸರ್ಕಾರ ವಿಫವಾದ ಬೆನ್ನಲ್ಲೆ ಅಧ್ಯಕ್ಷರ ರಾಜೀನಾಮೆಗೆ ಒತ್ತಾಯಿಸಿ ಪ್ರತಿಭಟನೆ ತೀವ್ರಗೊಳ್ಳುತ್ತಿದೆ. ಇದರಿಂದಾಗಿ ದ್ವೀಪ ರಾಷ್ಟ್ರಕ್ಕೆ ತೆರಳಬೇಕಿದ್ದ ನೂರಕ್ಕೂ ಹೆಚ್ಚು ವಿಮಾನಗಳನ್ನು ಕೇರಳದ ಕೊಚ್ಚಿ ಮತ್ತು ತಿರುವನಂತಪುರಂ ವಿಮಾನ ನಿಲ್ದಾಣಗಳಿಗೆ ತಿರುಗಿಸಲಾಗಿದೆ.

ರಾಷ್ಟ್ರದ ಇತಿಹಾಸದಲ್ಲಿ ಅತ್ಯಂತ ಕೆಟ್ಟ ಆರ್ಥಿಕ ಬಿಕ್ಕಟ್ಟನ್ನು ಶ್ರೀಲಂಕಾ ಎದುರಿಸುತ್ತಿದೆ. ಹೀಗಾಗಿ ಜನ ಸರ್ಕಾರದ ವಿರುದ್ಧ ತಿಂಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಬಿಕ್ಕಟ್ಟಿನ ಪೀಡಿತ ರಾಷ್ಟ್ರದ ಅಧ್ಯಕ್ಷ ಗೊಟಬಯ ರಾಜಪಕ್ಸೆ ಮಾಲ್ಡೀವ್ಸ್‌ಗೆ ಪಲಾಯನ ಮಾಡಿದ ನಂತರ ಶ್ರೀಲಂಕಾದಲ್ಲಿ ತುರ್ತು ಪರಿಸ್ಥಿತಿಯನ್ನು ಘೋಷಿಸಲಾಯಿತು. ಈಗ ಹಂಗಾಮಿ ಅಧ್ಯಕ್ಷರಾಗಿರುವ ಶ್ರೀಲಂಕಾದ ಪ್ರಧಾನಿ ರಾನಿಲ್ ವಿಕ್ರಮಸಿಂಘೆ ಅವರು ದೇಶದಲ್ಲಿ ತುರ್ತು ಪರಿಸ್ಥಿತಿಯನ್ನು ಘೋಷಿಸಿದ್ದಾರೆ ಮತ್ತು ಪಶ್ಚಿಮ ಪ್ರಾಂತ್ಯದಲ್ಲಿ ಕರ್ಫ್ಯೂ ವಿಧಿಸಲಾಗಿದೆ.

ಕೇಂದ್ರ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರು ಬುಧವಾರ ತಿರುವನಂತಪುರಂ ಮತ್ತು ಕೊಚ್ಚಿ ವಿಮಾನ ನಿಲ್ದಾಣಗಳು ಬಿಕ್ಕಟ್ಟಿನಿಂದ ಬಳಲುತ್ತಿರುವ ರಾಷ್ಟ್ರಕ್ಕೆ ಸಹಾಯ ಮಾಡಲು ಹೊರಟಿದ್ದಕ್ಕಾಗಿ ಶ್ಲಾಘಿಸಿದರು.

ಕೇರಳದ ತಿರುವನಂತಪುರಂ ಮತ್ತು ಕೊಚ್ಚಿಗೆ ಶಿಫ್ಟ್‌

"ಶ್ರೀಲಂಕಾಕ್ಕೆ ಹೋಗುವ 120+ ವಿಮಾನಗಳಿಗೆ ತಾಂತ್ರಿಕ ಲ್ಯಾಂಡಿಂಗ್ ಅನ್ನು ಅನುಮತಿಸುವ ಮೂಲಕ ವಿಮಾನ ನಿಲ್ದಾಣಗಳು ತಮ್ಮ ಕರ್ತವ್ಯ ನಿಭಾಯಿಸಿವೆ. ನಮ್ಮ ನೆರೆಹೊರೆಯವರೊಂದಿಗೆ ಬಾಂಧವ್ಯವನ್ನು ಹೆಚ್ಚಿಸಲು ಈ ಗೆಸ್ಚರ್ ಬಹಳ ದೂರ ಹೋಗುತ್ತದೆ" ಎಂದು ಸಿಂಧಿಯಾ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ಕೊಲಂಬೊಗೆ ಹೋಗುವ ವಿಮಾನಯಾನ ಸಂಸ್ಥೆಗಳಿಗೆ ತಾಂತ್ರಿಕ ಲ್ಯಾಂಡಿಂಗ್ ಸೌಲಭ್ಯಗಳನ್ನು ಒದಗಿಸುವ ಮೂಲಕ, ಕೊಲಂಬೊದಿಂದ ಪಶ್ಚಿಮ ಏಷ್ಯಾ ಮತ್ತು ಯುರೋಪಿಯನ್ ಸ್ಥಳಗಳಿಗೆ ಇಂಧನ ತುಂಬುವಿಕೆ ಮತ್ತು ಸಿಬ್ಬಂದಿ ವಿನಿಮಯಕ್ಕಾಗಿ ಹಾರುವ ಮೂಲಕ ಬಿಕ್ಕಟ್ಟಿನ ಶ್ರೀಲಂಕಾಕ್ಕೆ ಕೇರಳ ವಿಮಾನ ನಿಲ್ದಾಣಗಳು ಸಹಾಯ ಹಸ್ತವನ್ನು ನೀಡಿವೆ. ರಾಜಕೀಯ ಪ್ರಕ್ಷುಬ್ಧತೆ ಮತ್ತು ವಾಯುಯಾನ ಟರ್ಬೈನ್ ಇಂಧನ (ಎಟಿಎಫ್) ಕೊರತೆಯಿಂದಾಗಿ ತಿರುವನಂತಪುರಂ ಮತ್ತು ಕೊಚ್ಚಿ ವಿಮಾನ ನಿಲ್ದಾಣಗಳಲ್ಲಿ 120 ಕ್ಕೂ ಹೆಚ್ಚು ವಿಮಾನಗಳು ತಾಂತ್ರಿಕವಾಗಿ ಇಳಿದಿವೆ.

ಅಧ್ಯಕ್ಷ ಪಲಾಯನ

ದ್ವೀಪರಾಷ್ಟ್ರದಲ್ಲಿನ ಆರ್ಥಿಕ ಬಿಕ್ಕಟ್ಟಿನ ಮಧ್ಯೆ ಶ್ರೀಲಂಕಾದಲ್ಲಿ ತುರ್ತು ಪರಿಸ್ಥಿತಿಯನ್ನು ಘೋಷಿಸಲಾಗಿದೆ. ಶ್ರೀಲಂಕಾ ಅಧ್ಯಕ್ಷ ಗೋಟಾಬಯ ರಾಜಪಕ್ಸೆ ಮಂಗಳವಾರ ತಡರಾತ್ರಿ ಮಾಲ್ಡೀವ್ಸ್‌ಗೆ ಪಲಾಯನ ಮಾಡಿದ ನಂತರ ಶ್ರೀಲಂಕಾ ಸರ್ಕಾರ ಬುಧವಾರ ತುರ್ತು ಪರಿಸ್ಥಿತಿಯನ್ನು ಘೋಷಿಸಿದೆ ಎಂದು ಪ್ರಧಾನಿ ರನಿಲ್ ವಿಕ್ರಮಸಿಂಘೆ ಕಚೇರಿಯ ಮೂಲಗಳು ತಿಳಿಸಿವೆ. ಶ್ರೀಲಂಕಾದಲ್ಲಿ ಪ್ರತಿಭಟನೆಗಳು ಭುಗಿಲೆದ್ದಿವೆ. ಕೋಪಗೊಂಡ ನೂರಾರು ನಾಗರಿಕರು ಕೊಲಂಬೊದಲ್ಲಿನ ಪ್ರಧಾನಿ ಕಚೇರಿಗೆ ಮೆರವಣಿಗೆ ನಡೆಸಿ ರಾಜೀನಾಮೆಗಾಗಿ ಆಗ್ರಹಿಸುತ್ತಿದ್ದಾರೆ. ಈ ಪ್ರತಿಭಟನೆಯಲ್ಲಿ ನೂರಾರು ಜನ ಭಾಗಿಯಾಗಿದ್ದು ಪರಿಸ್ಥಿತಿ ಕೈ ಮೀರಿ ಹೋಗಿದೆ.

ಬಿಕ್ಕಟ್ಟಿನ ಪರಿಸ್ಥಿತಿ

ಬಿಕ್ಕಟ್ಟಿನ ಪರಿಸ್ಥಿತಿ

ಬಿಕ್ಕಟ್ಟಿನ ಪರಿಸ್ಥಿತಿ ಎದುರಿಸಲು ಸರ್ಕಾರ ವಿಫಲವಾದ ಕಾರಣ ಅಧ್ಯಕ್ಷರ ರಾಜೀನಾಮೆ ನೀಡಬೇಕು ಎಂದು ಸ್ಥಳೀಯರು ಒತ್ತಾಯಿಸಿ ಪ್ರತಿಭಟನೆ ತೀವ್ರಗೊಳಿಸಿದ್ದಾರೆ. ಹೀಗಾಗಿ ದ್ವೀಪರಾಷ್ಟ್ರದಲ್ಲಿ ಪ್ರತಿಭಟನೆ ತೀವ್ರಗೊಂಡಿದ್ದು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಪೊಲೀಸರು ಬಲಪ್ರಯೋಗ ನಡೆಸುತ್ತಿದ್ದಾರೆ. ದೇಶದ ಪ್ರಧಾನಿ ವಿಕ್ರಮಸಿಂಘೆ ಕಚೇರಿಯ ಬಳಿ ನೆರೆದಿರುವ ಪ್ರತಿಭಟನಾಕಾರರು ಸರ್ಕಾರದ ವಿರುದ್ಧ ಕಾದು ಕೆಂಡವಾಗಿದ್ದಾರೆ. ಶ್ರೀಲಂಕಾದಲ್ಲಿ ನಡೆಯುತ್ತಿರುವ ಪ್ರತಿಭಟನೆ ಮತ್ತು ತುರ್ತು ಸಂದರ್ಭವನ್ನು ನಿರ್ವಹಿಸಲು ಸರ್ಕಾರ ಹೆಣಗಾಡುತ್ತಿದೆ.

ಕೊಲಂಬೊದಲ್ಲಿ ಕರ್ಫ್ಯೂ

ಕೊಲಂಬೊದಲ್ಲಿ ಕರ್ಫ್ಯೂ

ಶ್ರೀಲಂಕಾ ಸರ್ಕಾರವು ಜುಲೈ 14 ರಂದು ಮಧ್ಯಾಹ್ನ 12 ರಿಂದ ಜುಲೈ 15 ಬೆಳಗ್ಗೆ 5 ರವರೆಗೆ ಕೊಲಂಬೊದಲ್ಲಿ ಕರ್ಫ್ಯೂ ವಿಧಿಸಿದೆ ಎಂದು ಸರ್ಕಾರವನ್ನು ಉಲ್ಲೇಖಿಸಿ ರಾಯಿಟರ್ಸ್ ವರದಿ ಮಾಡಿದೆ. ಶ್ರೀಲಂಕಾದಲ್ಲಿ ಆರ್ಥಿಕ ಬಿಕ್ಕಟ್ಟಿನಿಂದ ಉದ್ಭವಿಸಿದ ರಾಜಕೀಯ ಬಿಕ್ಕಟ್ಟಿನ ಮಧ್ಯೆ, ಪ್ರತಿಭಟನಾಕಾರರು ರಾಷ್ಟ್ರಪತಿ ಭವನ ಮತ್ತು ಪ್ರಧಾನಿ ನಿವಾಸವನ್ನು ಸುತ್ತುವರೆದಿದ್ದಾರೆ. ಇದೀಗ ಈ ಅಧಿಕೃತ ಕಟ್ಟಡಗಳಿಂದ ದೂರ ಸರಿಯಲಿದ್ದಾರೆ ಎಂಬ ಸುದ್ದಿ ಬಂದಿದೆ. ಶ್ರೀಲಂಕಾದಲ್ಲಿ ಪ್ರತಿಭಟನಾಕಾರರು ಕಟ್ಟಡಗಳನ್ನು ತೊರೆಯುವುದಾಗಿ ಹೇಳಿದ್ದಾರೆ. ಶ್ರೀಲಂಕಾ ಅಧ್ಯಕ್ಷ ಗೊಟಬಯ ರಾಜಪಕ್ಸೆ ಅವರು ಮಾಲ್ಡೀವ್ಸ್ನಿಂದ ಸಿಂಗಾಪುರಕ್ಕೆ ಹೋಗಲು ಖಾಸಗಿ ವಿಮಾನದಲ್ಲಿ ತೆರೆಳಿದ್ದಾರೆ.

Recommended Video

   Jasprit Bumrahಗೆ ಚಾಲೆಂಜ್ ಮಾಡಿದ ಜೋಸ್ ಬಟ್ಲರ್ | *Cricket | OneIndia Kannada
   English summary
   More than a hundred flights bound for the island nation were diverted to Kochi and Thiruvananthapuram airports in Kerala on Wednesday.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X