ಮೆಕ್ಸಿಕೋ: ಪೊಲೀಸ್ ಬೆಂಗಾವಲು ವಾಹನದ ಮೇಲೆ ಗುಂಡಿನ ದಾಳಿ, 13 ಅಧಿಕಾರಿಗಳ ಸಾವು
ಮೆಕ್ಸಿಕೋ, ಮಾರ್ಚ್ 19: ಮೆಕ್ಸಿಕೋದಲ್ಲಿ ದುಷ್ಕರ್ಮಿಗಳು ಪೊಲೀಸ್ ವಾಹನದ ಮೇಲೆ ಗುಂಡಿನ ದಾಳಿ ನಡೆಸಿದ್ದು, ಘಟನೆಯಲ್ಲಿ 13 ಮಂದಿ ಅಧಿಕಾರಿಗಳು ಸಾವನ್ನಪ್ಪಿದ್ದಾರೆ.
ಮೂಲಗಳ ಪ್ರಕಾರ ಪೊಲೀಸ್ ಬೆಂಗಾವಲು ವಾಹನದ ಮೇಲೆ ಗುಂಡಿನ ದಾಳಿ ನಡೆಸಿರುವ ಡ್ರಗ್ ಗ್ಯಾಂಗ್ 8 ಪೊಲೀಸರು ಮತ್ತು 3 ಪ್ರಾಸಿಕ್ಯೂಶನ್ ಅಧಿಕಾರಿಗಳನ್ನು ಹತ್ಯೆ ಮಾಡಿದೆ. 2019ರಿಂದೀಚೆಗೆ ಮೆಕ್ಸಿಕೋದಲ್ಲಿ ನಡೆದ ಅತಿ ದೊಡ್ಡ ಹತ್ಯಾಕಾಂಡ ಇದಾಗಿದೆ. ಅಕ್ಟೋಬರ್, 2019ರಲ್ಲಿ ನೆರೆಯ ಮೈಕೋವಕಾನ್‌ನಲ್ಲಿ ಬಂದೂಕುಧಾರಿಗಳು 14 ಪೊಲೀಸರನ್ನು ಕೊಂದು ಹಾಕಿದ್ದರು.
ಮೆಕ್ಸಿಕೋದಲ್ಲಿ ಡ್ರಗ್ಸ್ ಮಾಫಿಯಾ ದಾಳಿ ತಾರಕಕ್ಕೇರಿದ್ದು, ಪೊಲೀಸ್ ಬೆಂಗಾವಲು ಪಡೆಗಳ ಮೇಲೆ ದುಷ್ಕರ್ಮಿಗಳು ನಡೆಸಿದ ಗುಂಡಿನ ದಾಳಿಯಲ್ಲಿ 13 ಮಂದಿ ಅಧಿಕಾರಿಗಳು ಸಾವನ್ನಪ್ಪಿದ್ದಾರೆ.

ಬಂದೂಕುಧಾರಿಗಳು ಯಾವ ಗ್ಯಾಂಗ್ ಅಥವಾ ಕಾರ್ಟೆಲ್ಗೆ ಸೇರಿದವರು ಎಂಬುದರ ಬಗ್ಗೆ ತಕ್ಷಣಕ್ಕೆ ಮಾಹಿತಿ ಸಿಕ್ಕಿಲ್ಲ. ಅಧಿಕಾರಿಗಳ ಹತ್ಯೆ ಬಳಿಕ ಮೆಕ್ಸಿಕೊ ನಗರದ ನೈರುತ್ಯ ದಿಕ್ಕಿನಲ್ಲಿರುವ ಗ್ರಾಮೀಣ ಭಾಗದಲ್ಲಿ ಪರಿಸ್ಥಿತಿ ಉದ್ವಿಗ್ನವಾಗಿದ್ದು, ಮಾದಕ ವ್ಯಸನಿಗಳಿರುವ ಪ್ರದೇಶಗಳಲ್ಲಿ ಕೊಲೆಗಡುಕರಿಗಾಗಿ ತೀವ್ರ ಶೋಧ ನಡೆಸಲಾಗುತ್ತಿದೆ.
ಸೈನಿಕರು, ನೌಕಾಪಡೆಯ ಸಿಬ್ಬಂದಿಗಳು ಮತ್ತು ರಾಷ್ಟ್ರೀಯ ಗಾರ್ಡ್ ಪಡೆಗಳು ಈ ಪ್ರದೇಶದಲ್ಲಿ ಭೂ ಮತ್ತು ವಿಮಾನಗಳ ಮೂಲಕ ಕೊಲೆಗಾರರಿಗಾಗಿ ಶೋಧ ನಡೆಸುತ್ತಿವೆ ಎಂದು ರಾಜ್ಯ ಸಾರ್ವಜನಿಕ ಸುರಕ್ಷತಾ ವಿಭಾಗದ ಮುಖ್ಯಸ್ಥ ರೊಡ್ರಿಗೋ ಮಾರ್ಟಿನೆಜ್ ಸೆಲಿಸ್ ಹೇಳಿದ್ದಾರೆ.
ಈ ಆಕ್ರಮಣವು ಮೆಕ್ಸಿಕನ್ ಸರ್ಕಾರದ ಮೇಲಿನ ಆಕ್ರಮಣವಾಗಿದ್ದು, ನಮ್ಮೆಲ್ಲ ಶಕ್ತಿ ಒಟ್ಟುಗೂಡಿಸಿ ಮರು ದಾಳಿ ನಡೆಸುವುದಾಗಿ ಅವರು ತಿಳಿಸಿದ್ದಾರೆ. ಈ ಪ್ರದೇಶದಲ್ಲಿ ಕ್ರಿಮಿನಲ್ಸ್ ಗುಂಪುಗಳ ವಿರುದ್ಧ ಕ್ರಮ ಜರುಗಿಸಲು ಪೊಲೀಸ್ ವಾಹನವು ಗಸ್ತು ತಿರುಗುತ್ತಿತ್ತು. ಈ ವೇಳೆ ಬಂದೂಕುದಾರಿಗಳಿಂದ ದಾಳಿ ನಡೆದಿದೆ.
-
Harish Rana: ಭಾರತದ ಮೊದಲ ದಯಾಮರಣದ ಹಕ್ಕುದಾರ ಹರೀಶ್ ರಾಣಾ ನಿಧನ, ಕುಟುಂಬಸ್ಥರಿಂದ ಅಂಗಾಂಗ ದಾನ -
Moodbidri: ಮಹಿಳೆಯರನ್ನು ಮಂಚಕ್ಕೆ ಕರೆದಿದ್ದ ಆರೋಪ: ಮೂಡುಬಿದರೆ ಇನ್ಸ್ಪೆಕ್ಟರ್ ದೌರ್ಜನ್ಯ ಪ್ರಕರಣ ಸಿಐಡಿ ತನಿಖೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ












Click it and Unblock the Notifications