ನ್ಯೂಯಾರ್ಕ್‌ನಲ್ಲಿ ಗುಂಡಿನ ದಾಳಿ; ಸ್ಫೋಟಕಗಳು ವಶಕ್ಕೆ

ನ್ಯೂಯಾರ್ಕ್, ಏಪ್ರಿಲ್ 12; ನ್ಯೂಯಾರ್ಕ್‌ನ ಬ್ರೂಕ್ಲಿನ್ ಸಬ್ ವೇ ಸ್ಟೇಷನ್‌ನಲ್ಲಿ ಗುಂಡಿನ ದಾಳಿ ನಡೆದಿದೆ. ಘಟನೆಯಲ್ಲಿ 13 ಜನರು ಗಾಯಗೊಂಡಿದ್ದಾರೆ. ಅಮೆರಿಕ ಅಧ್ಯಕ್ಷ ಜೋ ಬೈಡನ್‌ಗೆ ಘಟನೆ ಬಗ್ಗೆ ಮಾಹಿತಿ ನೀಡಲಾಗಿದೆ.

ಮಂಗಳವಾರ ಬೆಳಗ್ಗೆ ಕಟ್ಟಡ ಕಾಮಗಾರಿಗೆ ಬಳಕೆ ಮಾಡುವ ರೀತಿಯ ಮಾಸ್ಕ್ ಧರಿಸಿದ್ದ ವ್ಯಕ್ತಿ ಗುಂಡಿನ ದಾಳಿ ನಡೆಸಿದ್ದಾನೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನ 36ನೇ ರಸ್ತೆಯ ಸಬ್ ವೇ ಸ್ಟೇಷನ್‌ನಲ್ಲಿ ಈ ಗುಂಡಿನ ದಾಳಿ ನಡೆದಿದೆ.

ಸುಮಾರು 12 ಜನರು ಘಟನೆಯಲ್ಲಿ ಗಾಯಗೊಂಡಿರಬಹುದು ಎಂದು ಅಂದಾಜಿಸಲಾಗಿದೆ. ರಕ್ತಸಿಕ್ತರಾಗಿದ್ದ ಜನರು ರಸ್ತೆಯ ಮೇಲೆ ಬಿದ್ದಿರುವ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಆದರೆ ಘಟನೆಯಲ್ಲಿ ಪ್ರಾಣಾಪಾಯ ಸಂಭವಿಸಿದ ಬಗ್ಗೆ ಯಾವುದೇ ಮಾಹಿತಿ ಇಲ್ಲ.

13 Injured In New York City Subway Shooting

ನ್ಯೂಯಾರ್ಕ್‌ನ ಅಗ್ನಿ ಶಾಮಕ ಇಲಾಖೆ ವಕ್ತಾರ ಘಟನೆ ಬಗ್ಗೆ ಮಾಹಿತಿ ನೀಡಿದ್ದು, ಸಬ್ ವೇ ಸ್ಟೇಷನ್‌ನಲ್ಲಿ ಹೊಗೆ ಕಾಣಿಸಿಕೊಂಡಿತ್ತು. ಅಲ್ಲಿ ಹಲವು ಜನಗರಿಗೆ ಗುಂಡೇಟು ಬಿದ್ದಿದೆ. ಗುಂಡಿನ ದಾಳಿ ನಡೆಸಿದ ವ್ಯಕ್ತಿ ಮಾಸ್ಕ್ ಧರಿಸಿದ್ದ ಎಂಬ ಮಾಹಿತಿ ಲಭ್ಯವಾಗಿದೆ ಎಂದು ಹೇಳಿದ್ದಾರೆ.

ಗುಂಡಿನ ದಾಳಿ ನಡೆದ ಪ್ರದೇಶದಲ್ಲಿ ಸ್ಫೋಟಕಗಳು ಪತ್ತೆಯಾಗಿವೆ. ಆದರೆ ಅವು ಸಕ್ರಿಯವಾಗಿರಲಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ. ನ್ಯೂಯಾರ್ಕ್‌ ಸಿಟಿ ಪೊಲೀಸರು ಘಟನಾ ಸ್ಥಳಕ್ಕೆ ತಲುಪಿ, ಪರಿಶೀಲನೆ ಮುಂದುವರೆಸಿದ್ದಾರೆ.

ಅಮೆರಿಕ ಅಧ್ಯಕ್ಷ ಜೋ ಬೈಡನ್‌ಗೆ ಘಟನೆ ಕುರಿತು ಮಾಹಿತಿ ನೀಡಲಾಗಿದೆ. ಶ್ವೇತ ಭವನದ ಹಿರಿಯ ಅಧಿಕಾರಿಗಳು ಸ್ಥಳೀಯ ಮೇಯರ್ ಜೊತೆ ನಿರಂತರ ಸಂಪರ್ಕದಲ್ಲಿದ್ದಾರೆ.

ಮೇಯರ್ ಆಡಮ್ಸ್ ಮತ್ತು ಪೊಲೀಸ್ ಕಮೀಷನರ್ ಸೆವೆಲ್ ಅವರೊಂದಿಗೆ ಸಂಪರ್ಕದಲ್ಲಿದ್ದು ಅಗತ್ಯವಿರುವ ಯಾವುದೇ ಸಹಾಯವನ್ನು ನೀಡಲು ಸಿದ್ಧವಿರುವುದಾಗಿ ಶ್ವೇತ ಭವನದ ಪತ್ರಿಕಾ ಕಾರ್ಯದರ್ಶಿ ಜೆನ್ ಪ್ಸಾಕಿ ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+