ಬಲೂಚಿಸ್ತಾನದಲ್ಲಿ ಭೀಕರ ರಸ್ತೆ ಅಪಘಾತ, 14 ಸಾವು, 30 ಮಂದಿಗೆ ಗಾಯ
ಕರಾಚಿ, ಅಕ್ಟೋಬರ್ 07 : ಬಲೂಚಿಸ್ತಾನ ಪ್ರಾಂತ್ಯದ ಮುಸ್ತಾಂಗ್ ಪ್ರದೇಶದಲ್ಲಿ ಶನಿವಾರ ವ್ಯಾನ್ ಮತ್ತು ಬಸ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ.
ಅಪಘಾತದಲ್ಲಿ 14 ಮಂದಿ ಸಾವನ್ನಪ್ಪಿದ್ದು, 30ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಗಾಯಗೊಂಡವರ ಪೈಕಿ 6 ಜನರ ಸ್ಥತಿ ಗಂಭೀರವಾಗಿದ್ದು, ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆಗಳಿವೆ.

ವ್ಯಾನ್ ಚಾಲಕನ ನಿಯಂತ್ರಣ ತಪ್ಪಿ ಎದುರುಗಡೆಯಿಂದ ಬರುತ್ತಿದ್ದ ಬಸ್ಸಿಗೆ ನೇರವಾಗಿ ಡಿಕ್ಕಿ ಹೊಡೆದಿದೆ ಎಂದು ಅಲ್ಲಿನ ಸ್ಥಳೀಯ ಪೊಲೀಸ್ ಅಧಿಕಾರಿ ಸಮದ್ ಖಾನ್ ತಿಳಿಸಿದ್ದಾರೆ.
ಅಪಘಾತದಲ್ಲಿ ಈ ವರೆಗೆ 14 ಮಂದಿ ಮೃತಪಟ್ಟಿದ್ದು, 30 ಮಂದಿ ಗಾಯಾಳುಗಳಾಗಿ ಚಿಕಿತ್ಸೆ ಪಡೆಯುತ್ತಿರುವುದನ್ನು ಕ್ವೆಟ್ಟಾದ ಸರಕಾರಿ ಆಸ್ಪತ್ರೆ ವೈದ್ಯರು ಮಾಹಿತಿ ನೀಡಿದ್ದಾರೆ.












Click it and Unblock the Notifications