ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಉಗ್ರರ ಅಟ್ಟಹಾಸ, 24 ಸೈನಿಕರು ಬಲಿ

ಕಾಬೂಲ್, ಜೂನ್ 11: ಯುದ್ಧ ಪೀಡಿತ ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಉಗ್ರರ ಅಟ್ಟಹಾಸ ನಿಂತಿಲ್ಲ. ಇಲ್ಲಿನ ಕುಂಡುಜ್ ಪ್ರಾಂತ್ಯದಲ್ಲಿ 'ಅಫ್ಘಾನಿಸ್ತಾನ ತಾಲಿಬಾನ್' ಸಂಘಟನೆಯ ಉಗ್ರರು ಸೈನಿಕರನ್ನು ಗುರಿಯಾಗಿಸಿ ದಾಳಿ ನಡೆಸಿದ್ದಾರೆ.

ಈ ದಾಳಿಯಲ್ಲಿ ಅಫ್ಘಾನಿಸ್ತಾನದ 19 ಸೈನಿಕರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

ಪ್ರತ್ಯೇಕ ಘಟನೆಯೊಂದರಲ್ಲಿ ಇಲ್ಲಿನ ಜಲಾಲಾಬಾದ್ ನಲ್ಲಿರುವ ಶಿಕ್ಷಣ ಇಲಾಖೆ ಕಟ್ಟಡದ ಮೇಲೆಯೂ ಉಗ್ರರು ದಾಳಿ ನಡೆಸಿದ್ದಾರೆ. ಇಲ್ಲಿ ಬಂದೂಕುಧಾರಿ ಉಗ್ರರು ಮತ್ತು ಸೈನಿಕರ ನಡುವೆ ಗುಂಡಿನ ಚಕಮಕಿ ನಡೆಯುತ್ತಿದ್ದು ಈಗಾಗಲೇ ನಾಲ್ಕು ಸೈನಿಕರು ಸಾವನ್ನಪ್ಪಿದ್ದಾರೆ ಎಂದು ನಂಗರ್ ಹಾರ್ ಪ್ರಾಂತ್ಯದ ಶಿಕ್ಷಣ ಮುಖ್ಯಸ್ಥ ಆಸಿಫ್ ಶಿನ್ವಾರಿ ಹೇಳಿದ್ದಾರೆ.

19 Afghan security personnel killed in a Taliban attack

ಇನ್ನೂ 10 ಜನಕ್ಕೆ ಇಲ್ಲಿ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಇದೇ ವೇಳೆ ಭಾನುವಾರ ರಾತ್ರಿ ಗೆರೆಶೆಕ್ ನ ಪೊಲೀಸ್ ಕಮಾಂಡರ್ ಮನೆ ಮೇಲೆ ಇಬ್ಬರು ಉಗ್ರರು ದಾಳಿ ನಡೆಸಿದ್ದಾರೆ. ದಾಳಿ ನಡೆಸಿದ ಓರ್ವ ಉಗ್ರನನ್ನು ಹೊಡೆದುರುಳಿಸಲಾಗಿದ್ದು ಮೂವರು ಪೊಲೀಸರು ಮತ್ತು ಮೂವರು ನಾಗರೀಕರು ಗಾಯಗೊಂಡಿದ್ದಾರೆ. ಇನ್ನೋರ್ವ ಉಗ್ರ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ತಿಳಿದು ಬಂದಿದೆ

ಹೀಗೆ ಅಫ್ಘಾನಿಸ್ತಾನದಲ್ಲಿ ಕಳೆದ 24 ಗಂಟೆಗಳಲ್ಲಿ ಮೂರು ಉಗ್ರರ ದಾಳಿಗಳು ನಡೆದಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+