ಇಬ್ಬರನ್ನು ಕೊಂದ ಪೊಲೀಸರ ಗನ್, ಮತ್ತಷ್ಟು ರೊಚ್ಚಿಗೆದ್ದ ಹೋರಾಟಗಾರರು

ಮ್ಯಾನ್ಮಾರ್‌ ಮಿಲಿಟರಿ ಹಾಗೂ ಮ್ಯಾನ್ಮಾರ್‌ ಪ್ರಜೆಗಳ ನಡುವಿನ ತಿಕ್ಕಾಟ ಜೋರಾಗಿದ್ದು, ಹಿಂಸಾಚಾರಕ್ಕೆ ಇಬ್ಬರು ನಾಗರಿಕರು ಬಲಿಯಾಗಿದ್ದಾರೆ. ಘಟನೆಯಲ್ಲಿ ಕನಿಷ್ಠ 20 ಜನರು ಗಂಭೀರವಾಗಿ ಗಾಯಗೊಂಡಿದ್ದು, ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆ ಇದೆ. ಸೇನಾ ದಂಗೆ ವಿರೋಧಿಸಿ ಮ್ಯಾನ್ಮಾರ್‌ನಲ್ಲಿ ಹೋರಾಟಗಳು ನಡೆಯುತ್ತಿವೆ. ದಿನದಿಂದ ದಿನಕ್ಕೆ ಹೋರಾಟದ ಕಿಚ್ಚು ಇತರ ಪ್ರದೇಶಗಳಿಗೂ ಹಬ್ಬುತ್ತಿದೆ. ಆದರೆ ಇದನ್ನೆಲ್ಲಾ ತಡೆಯಲು ಮ್ಯಾನ್ಮಾರ್‌ ಪೊಲೀಸರು ಹಾಗೂ ಮ್ಯಾನ್ಮಾರ್‌ ಸೇನೆ ಬಲಪ್ರಯೋಗ ಮಾಡುತ್ತಿದೆ.

ಅಮಾಯಕ ಜನರ ಮಾರಣಹೋಮ ನಡೆಯುತ್ತಿದೆ.ಈಗಾಗಲೇ ಇಂಟರ್ನೆಟ್ ಸೇರಿದಂತೆ, ಫೋನ್‌ಗಳ ಸಂಪರ್ಕವೂ ಬಂದ್ ಆಗಿದೆ. ಆದರೂ ರೊಚ್ಚಿಗೆದ್ದಿರುವ ಜನರು ಮ್ಯಾನ್ಮಾರ್‌ ಮಿಲಿಟರಿ ಅಧಿಕಾರಿಗಳ ವಿರುದ್ಧ ಸಮರ ಸಾರಿದ್ದಾರೆ. ಹೀಗಾಗಿ ಮ್ಯಾನ್ಮಾರ್‌ನ ಗಲ್ಲಿ ಗಲ್ಲಿಯಲ್ಲೂ ಹೋರಾಟದ, ಘೋಷಣೆಗಳು ಕೇಳಿಬರುತ್ತಿವೆ. ಸೇನೆ ಏನೇ ಮಾಡಿದರೂ ಜನರು ಹೆದರುತ್ತಿಲ್ಲ. ಸೂಕಿ ಪರವಾಗಿ ಹಾಗೂ ಪ್ರಜಾಪ್ರಭುತ್ವದ ಪರವಾಗಿ ಹೋರಾಟ ಗಟ್ಟಿ ಧ್ವನಿಯಲ್ಲಿ ಮೊಳಗಿದೆ. ಇದೀಗ ಇಬ್ಬರು ನಾಗರಿಕರು ಪೊಲೀಸರ ಗುಂಡೇಟಿಗೆ ಬಲಿಯಾಗಿರುವುದು ಉರಿಯುವ ಬೆಂಕಿಗೆ ತುಪ್ಪ ಸುರಿದಂತಾಗಿದೆ.

ಪ್ರಧಾನಿ, ಸಂಸದರಿಗೆ ಮನೆಯಲ್ಲೇ ಜೈಲು..!

ಪ್ರಧಾನಿ, ಸಂಸದರಿಗೆ ಮನೆಯಲ್ಲೇ ಜೈಲು..!

ಈಗಾಗಲೇ ಮ್ಯಾನ್ಮಾರ್‌ ಪ್ರಧಾನಿ ಆಂಗ್ ಸಾನ್ ಸೂಕಿ ಹಾಗೂ ಅವರ ಸಂಪುಟ ಸಹೋದ್ಯೋಗಿಗಳನ್ನ ಮನೆ ಒಳಗೆ ಲಾಕ್ ಮಾಡಿದೆ ಮ್ಯಾನ್ಮಾರ್‌ ಸೇನೆ. ಯಾರೂ ಕೂಡ ಹೊರಗೆ ಬಾರದಂತೆ ಜನಪ್ರತಿನಿಧಿಗಳಿಗೆ ಖಡಕ್ ಎಚ್ಚರಿಕೆ ನೀಡಲಾಗಿದೆ. ಅಲ್ಲದೆ ಅವರ ಮನೆಗಳ ಬಳಿ ಭಾರಿ ಪ್ರಮಾಣದ ಸೇನೆ ನಿಯೋಜನೆ ಮಾಡಿರುವುದು ಸೊಲ್ಲೆತ್ತದಂತೆ ಮಾಡಿದೆ. ಇದನ್ನೆಲ್ಲಾ ಕಂಡು ಎಷ್ಟೋ ಜನ ಮನೆಯಿಂದ ಹೊರ ಬರೋದಕ್ಕೂ ಯೋಚಿಸುವ ಸ್ಥಿತಿ ನಿರ್ಮಾಣವಾಗಿದೆ. ಸ್ವತಃ ಮ್ಯಾನ್ಮಾರ್‌ ಪ್ರಧಾನಿ ಆಂಗ್ ಸಾನ್ ಸೂಕಿಗೆ ಏನಾಗಿದೆ ಅನ್ನೋದನ್ನೂ ಹೊರ ಜಗತ್ತು ತಿಳಿದುಕೊಳ್ಳಲು ಸಾಧ್ಯವಾಗುತ್ತಿಲ್ಲ.

ಮಿಲಿಟರಿ ಆಡಳಿತ ಶುರು..!

ಮಿಲಿಟರಿ ಆಡಳಿತ ಶುರು..!

ಮ್ಯಾನ್ಮಾರ್‌ನಲ್ಲಿ 2020ರಲ್ಲಿ ನಡೆದಿದ್ದ ಸಾರ್ವತ್ರಿಕ ಚುನಾವಣೆಯಲ್ಲಿ ಅಕ್ರಮ ನಡೆದಿದ್ದರೂ ಅದನ್ನ ತಡೆಯಲು ಚುನಾವಣಾ ಆಯೋಗ ವಿಫಲವಾಗಿದೆ ಎಂದು ಆರೋಪಿಸಲಾಗಿತ್ತು. ಈ ಕಾರಣಕ್ಕಾಗಿ ಮ್ಯಾನ್ಮಾರ್‌ ಮಿಲಿಟರಿ ತುರ್ತು ಪರಿಸ್ಥಿತಿ ಹೇರಿದೆ. ದೇಶದಲ್ಲಿ ಮಿಲಿಟರಿ 1 ವರ್ಷದವರೆಗೂ ತುರ್ತು ಪರಿಸ್ಥಿತಿ ಘೋಷಿಸಿ ಹಂಗಾಮಿ ಅಧ್ಯಕ್ಷರನ್ನೂ ನೇಮಿಸಿದೆ. ಮತ್ತೊಂದ್ಕಡೆ ದೇಶದ ಸಂವಹನ ಸಾಧನಗಳನ್ನೂ ಕಂಟ್ರೋಲ್‌ಗೆ ತೆಗೆದುಕೊಂಡಿದೆ ಸೇನೆ. ಫೋನ್ ಕಾಲ್ ಹೋಗುತ್ತಿಲ್ಲ, ಇಂಟರ್ನೆಟ್ ಸಂಪರ್ಕ ಕೂಡ ಬಂದ್ ಆಗಿದೆ. ಜನರು ಪರದಾಡುವ ಸ್ಥಿತಿ ನಿರ್ಮಾಣವಾಗಿದ್ದು, ಪರಿಸ್ಥಿತಿ ಅತಿಸೂಕ್ಷ್ಮವಾಗಿದೆ.

ಚೀನಾ ಕೈವಾಡ ಸಾಧ್ಯವೇ ಇಲ್ಲ..!

ಚೀನಾ ಕೈವಾಡ ಸಾಧ್ಯವೇ ಇಲ್ಲ..!

ಮ್ಯಾನ್ಮಾರ್‌ ಸೇನಾ ದಂಗೆ ಸ್ವಯಂಪ್ರೇರಿತವಾಗಿದ್ದು, ಯಾರದ್ದೇ ಕೈವಾಡ ಇಲ್ಲ ಎನ್ನುತ್ತಿದ್ದಾರೆ ತಜ್ಞರು. ಸದ್ಯದ ಸ್ಥಿತಿಯಲ್ಲಿ ಚೀನಾ ಮ್ಯಾನ್ಮಾರ್‌ ವಿಚಾರವಾಗಿ ಮೂಗು ತೂರಿಸಲು ಸಾಧ್ಯವಿಲ್ಲ. ಈಗಾಗಲೇ ಚೀನಾ ವಿರುದ್ಧ ಅಕ್ಕಪಕ್ಕದ ರಾಷ್ಟ್ರಗಳು ಕೋಪಗೊಂಡಿವೆ. ಇಂತಹ ಸಂದರ್ಭದಲ್ಲಿ ಚೀನಾ ಮ್ಯಾನ್ಮಾರ್‌ ವಿಚಾರಕ್ಕೆ ಕೈಹಾಕುವ ಸಾಹಸ ಮಾಡುವುದಿಲ್ಲ ಎನ್ನುತ್ತಿದ್ದಾರೆ ತಜ್ಞರು. ಇದು ಆತಂರಿಕವಾಗಿ ಮೂಡಿದ ಅಸಮಾಧಾನದ ಫಲ. ಆದರೆ ಮ್ಯಾನ್ಮಾರ್‌ ಪ್ರಜೆಗಳಿಗೆ ತಪ್ಪು ಸಂದೇಶ ನೀಡಲಾಗುತ್ತಿದೆ ಎಂದು ತಜ್ಞರು ಅಭಿಪ್ರಾಯ ಹೊರಹಾಕಿದ್ದಾರೆ. ತನ್ನ ಬಗ್ಗೆ ಇಷ್ಟೆಲ್ಲಾ ಆರೋಪ ಕೇಳಿಬರುತ್ತಿದ್ದರೂ ಚೀನಾ ಮಾತ್ರ ಪ್ರತಿಕ್ರಿಯೆ ನೀಡಿಲ್ಲ.

ಇಂಟರ್ನೆಟ್ ಇಲ್ಲದೆ ಪರದಾಟ..!

ಇಂಟರ್ನೆಟ್ ಇಲ್ಲದೆ ಪರದಾಟ..!

ಸೇನಾ ಕ್ರಾಂತಿಯ ವಿರುದ್ಧ ಮ್ಯಾನ್ಮಾರ್‌ನಲ್ಲಿ ಹೋರಾಟ ತೀವ್ರಗೊಳ್ಳುತ್ತಿದ್ದು, ದೇಶದ ಇತರ ಭಾಗಗಳಿಗೆ ತೀವ್ರ ಸ್ವರೂಪದಲ್ಲಿ ಹರಡುತ್ತಿದೆ. ಆದರೆ ಇದನ್ನು ತಡೆಯಲು ಮ್ಯಾನ್ಮಾರ್‌ ಮಿಲಿಟರಿ ತನ್ನ ಬಲವನ್ನು ಬಳಸುತ್ತಿದೆ. ಈಗಾಗಲೇ ಮ್ಯಾನ್ಮಾರ್‌ನಲ್ಲಿ ಇಂಟರ್ನೆಟ್ ಕಡಿತವಾಗಿದ್ದು, ಜನರನ್ನು ಅತ್ತಿಂದ ಇತ್ತ ಕದಡಲು ಬಿಡುತ್ತಿಲ್ಲ. ಈ ನಡುವೆ ಜನ ಬೀದಿಗಿಳಿದು ಮಿಲಿಟರಿ ಆಡಳಿತದ ವಿರುದ್ಧ ಹೋರಾಟ ತೀವ್ರಗೊಳಸಿದ್ದಾರೆ. ಹೀಗೆ ಮ್ಯಾನ್ಮಾರ್‌ ಬೂದಿ ಮುಚ್ಚಿದ ಕೆಂಡವಾಗಿದ್ದು, ಹಿಂಸಾಚಾರ ಸ್ಫೋಟಗೊಳ್ಳುವ ಆತಂಕವೂ ಎದುರಾಗಿದೆ. ಆದರೆ ಹೊರ ಜಗತ್ತಿಗೆ ಮ್ಯಾನ್ಮಾರ್‌ನಲ್ಲಿ ಏನಾಗುತ್ತಿದೆ ಎಂಬ ಸತ್ಯ ಸರಿಯಾಗಿ ತಿಳಿಯದಂತೆ ಮಾಡಿದೆ ಅಲ್ಲಿನ ಮಿಲಿಟರಿ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+