26/11 ಮಾಸ್ಟರ್ ಮೈಂಡ್ ಹಫೀಜ್ ಸಯೀದ್ಗೆ 10 ವರ್ಷಗಳ ಜೈಲು ಶಿಕ್ಷೆ ವಿಧಿಸಿದ ಪಾಕಿಸ್ತಾನ ಕೋರ್ಟ್
ನವದೆಹಲಿ, ನವೆಂಬರ್ 19: 26/11 ಮುಂಬೈ ದಾಳಿಯ ಮಾಸ್ಟರ್ ಮೈಂಡ್ ಹಫೀಜ್ ಸಯೀದ್ಗೆ ಪಾಕಿಸ್ತಾನ ನ್ಯಾಯಾಲಯ 10 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿದೆ.
ಇದೇ ಮೊದಲ ಬಾರಿಗೆ ಭಯೋತ್ಪಾದನೆ ಆರೋಪದ ಮೇರೆ ಪಾಕಿಸ್ತಾನ ನ್ಯಾಯಾಲಯವು ಶಿಕ್ಷೆ ವಿಧಿಸಿದೆ. ಒಟ್ಟು ಎರಡು ಭಯೋತ್ಪಾದಕ ಪ್ರಕರಣಗಳಲ್ಲಿ ಶಿಕ್ಷೆ ವಿಧಿಸಲಾಗಿದೆ.
ಜಮಾತ್ ಉದ್ ದವಾದ ಮುಖ್ಯಸ್ಥನಾಗಿದ್ದ ಹಫೀಜ್ ಹಲವು ಭಯೋತ್ಪಾದನಾ ಚಟುವಟಿಕೆಗಳಲ್ಲಿ ತೊಡಗಿದ್ದ, ಅವರ ಆಪ್ತರಿಗೆ ಭಯೋತ್ಪಾದನಾ ಚಟುವಟಿಕೆಗಳಿಗೆ ಹಣ ನೀಡಿದ್ದ ಕಾರಣ 11 ವರ್ಷಗಳ ಜೈಲುಶಿಕ್ಷೆ ವಿಧಿಸಲಾಗಿದೆ.

ಹಫೀಜ್ ಸಯೀದ್ನ ಆಪ್ತರಾದ ಜಫರ್ ಇಖ್ಬಾಲ್, ಯಹ್ಯ ಮುಜಾಹಿದ್ಗೆ ಹತ್ತೂವರೆ ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ.
2008ರಲ್ಲಿ ನಡೆದ ಮುಂಬೈ ದಾಳಿಯಲ್ಲಿ 10 ಮಂದಿ ಉಗ್ರರು 166 ಮಂದಿಯನ್ನು ಹತ್ಯೆ ಮಾಡಿದ್ದರು. ಹಾಗೆಯೇ ನೂರಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು.
ಜುಲೈನಲ್ಲಿ ಹಫೀಜ್ ಸಯೀದ್ನನ್ನು ಪಾಕಿಸ್ತಾನವು ಬಂಧಿಸಿತ್ತು.2008ರ ಮುಂಬೈ ಮೇಲಿನ ಭಯೊತ್ಪಾದನಾ ದಾಳಿಯ ಮಾಸ್ಟರ್ ಮೈಂಡ್ ಹಫೀಜ್ ಸಯೀದ್ ನೇತೃತ್ವದ ಜಮಾತ್-ಉದ್-ದವಾ ಹಾಗೂ ಅದರ ದತ್ತಿ ಸಂಸ್ಥೆಯಾದ ಫಲಾ-ಇ-ಇನ್ಸಾನಿಯತ್ ಫೌಂಡೇಷನ್ ನನ್ನು ಪಾಕಿಸ್ತಾನವು ನಿಷೇಧಿಸಿತ್ತು.
ಆಂತರಿಕ ಸಚಿವಾಲಯದ ವಕ್ತಾರ ಮಾತನಾಡಿ, ಪ್ರಧಾನಮಂತ್ರಿಗಳ ಕಚೇರಿಯಲ್ಲಿ ನಡೆದ ರಾಷ್ಟ್ರೀಯ ಭದ್ರತಾ ಸಮಿತಿಯ ಸಭೆಯ ವೇಳೆಯಲ್ಲಿ ಈ ಗುಂಪುಗಳನ್ನು ನಿಷೇಧಿಸಲು ತೀರ್ಮಾನಿಸಲಾಗಿದೆ ಎಂದು ಹೇಳಿದ್ದರು.
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications