• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

26/11 ಮಾಸ್ಟರ್ ಮೈಂಡ್ ಹಫೀಜ್ ಸಯೀದ್‌ಗೆ 10 ವರ್ಷಗಳ ಜೈಲು ಶಿಕ್ಷೆ ವಿಧಿಸಿದ ಪಾಕಿಸ್ತಾನ ಕೋರ್ಟ್

|

ನವದೆಹಲಿ, ನವೆಂಬರ್ 19: 26/11 ಮುಂಬೈ ದಾಳಿಯ ಮಾಸ್ಟರ್ ಮೈಂಡ್ ಹಫೀಜ್‌ ಸಯೀದ್‌ಗೆ ಪಾಕಿಸ್ತಾನ ನ್ಯಾಯಾಲಯ 10 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿದೆ.

ಇದೇ ಮೊದಲ ಬಾರಿಗೆ ಭಯೋತ್ಪಾದನೆ ಆರೋಪದ ಮೇರೆ ಪಾಕಿಸ್ತಾನ ನ್ಯಾಯಾಲಯವು ಶಿಕ್ಷೆ ವಿಧಿಸಿದೆ. ಒಟ್ಟು ಎರಡು ಭಯೋತ್ಪಾದಕ ಪ್ರಕರಣಗಳಲ್ಲಿ ಶಿಕ್ಷೆ ವಿಧಿಸಲಾಗಿದೆ.

ಹಫೀಜ್ ಸಯೀದ್ ಸಂಘಟನೆಗಳಿಗೆ ಪಾಕಿಸ್ತಾನದಿಂದ ನಿಷೇಧ

ಜಮಾತ್ ಉದ್ ದವಾದ ಮುಖ್ಯಸ್ಥನಾಗಿದ್ದ ಹಫೀಜ್‌ ಹಲವು ಭಯೋತ್ಪಾದನಾ ಚಟುವಟಿಕೆಗಳಲ್ಲಿ ತೊಡಗಿದ್ದ, ಅವರ ಆಪ್ತರಿಗೆ ಭಯೋತ್ಪಾದನಾ ಚಟುವಟಿಕೆಗಳಿಗೆ ಹಣ ನೀಡಿದ್ದ ಕಾರಣ 11 ವರ್ಷಗಳ ಜೈಲುಶಿಕ್ಷೆ ವಿಧಿಸಲಾಗಿದೆ.

ಹಫೀಜ್‌ ಸಯೀದ್‌ನ ಆಪ್ತರಾದ ಜಫರ್ ಇಖ್ಬಾಲ್, ಯಹ್ಯ ಮುಜಾಹಿದ್‌ಗೆ ಹತ್ತೂವರೆ ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ.

2008ರಲ್ಲಿ ನಡೆದ ಮುಂಬೈ ದಾಳಿಯಲ್ಲಿ 10 ಮಂದಿ ಉಗ್ರರು 166 ಮಂದಿಯನ್ನು ಹತ್ಯೆ ಮಾಡಿದ್ದರು. ಹಾಗೆಯೇ ನೂರಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು.

ಜುಲೈನಲ್ಲಿ ಹಫೀಜ್‌ ಸಯೀದ್‌ನನ್ನು ಪಾಕಿಸ್ತಾನವು ಬಂಧಿಸಿತ್ತು.2008ರ ಮುಂಬೈ ಮೇಲಿನ ಭಯೊತ್ಪಾದನಾ ದಾಳಿಯ ಮಾಸ್ಟರ್ ಮೈಂಡ್ ಹಫೀಜ್ ಸಯೀದ್ ನೇತೃತ್ವದ ಜಮಾತ್-ಉದ್-ದವಾ ಹಾಗೂ ಅದರ ದತ್ತಿ ಸಂಸ್ಥೆಯಾದ ಫಲಾ-ಇ-ಇನ್ಸಾನಿಯತ್ ಫೌಂಡೇಷನ್ ನನ್ನು ಪಾಕಿಸ್ತಾನವು ನಿಷೇಧಿಸಿತ್ತು.

ಆಂತರಿಕ ಸಚಿವಾಲಯದ ವಕ್ತಾರ ಮಾತನಾಡಿ, ಪ್ರಧಾನಮಂತ್ರಿಗಳ ಕಚೇರಿಯಲ್ಲಿ ನಡೆದ ರಾಷ್ಟ್ರೀಯ ಭದ್ರತಾ ಸಮಿತಿಯ ಸಭೆಯ ವೇಳೆಯಲ್ಲಿ ಈ ಗುಂಪುಗಳನ್ನು ನಿಷೇಧಿಸಲು ತೀರ್ಮಾನಿಸಲಾಗಿದೆ ಎಂದು ಹೇಳಿದ್ದರು.

English summary
Hafiz Saeed, the mastermind of the 26/11 Mumbai attacks, has been sentenced to 10 years in two terror cases by a court in Pakistan, news agency PTI reported.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X